Belagavi : ರಾಹುಲ್ ಗಾಂಧಿ ಬುದ್ದಿ 5 ವರ್ಷದವರಂತೆ ಎಂದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 50 ವರ್ಷವಾದರೂ ಅವರ ಬುದ್ಧಿ 5 ವರ್ಷದವರಂತೆ ಇದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಲೇವಡಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದರು.
ಚಿಕ್ಕೋಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದರು. ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಅವರು, "ರಾಹುಲ್ ಗಾಂಧಿ ಅವರಿಗೆ 50 ವಯಸ್ಸಾದರೂ ಅವರ ಮಾನಸಿಕ ವಯಸ್ಸು 5 ಎಂದು ಲೇವಡಿ ಮಾಡಿದರು. ನ್ಯಾಯಾಲಯ ರಾಹುಲ್ ಗಾಂಧಿಗೆ ಶಿಕ್ಷೆ ನೀಡಿದರೆ, ಅದಕ್ಕೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುತ್ತಾರೆ, ಇದಕ್ಕೆ ಏನು ಹೇಳಬೇಕೋ ತಿಳಿಯುತ್ತಿಲ್ಲ, ಅವರು ಗ್ಯಾರಂಟಿ ಕೊಡಲು ಸಮರ್ಥರು ಎಂದು ನಿಮಗೆ ಎನಿಸುತ್ತಿದಯೇ" ಎಂದು ನೆರೆದವರನ್ನು ಪ್ರಶ್ನಿಸಿದರು.

2018 ರಲ್ಲಿ ಮಧ್ಯಪ್ರದೇಶದಲ್ಲಿ ನಿರುದ್ಯೋಗಿಗಳಿಗೆ 4 ಸಾವಿರ ಕೊಡುವುದಾಗಿ ಭರವಸೆ ನೀಡಿತ್ತು ಆದರೆ ಒಂದು ರುಪಾಯಿಯನ್ನು ನೀಡಲಿಲ್ಲ, ಅವರ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ ಇನ್ನು ಅವರು ನೀಡುವ ಗ್ಯಾರಂಟಿ ಇರುತ್ತಾ ಎಂದು ಪ್ರಶ್ನಿಸಿದರು. ಸ್ವಾತಂತ್ಯ್ರ ಬಂದ ನಂತರ ಕಾಂಗ್ರೆಸ್ ಅನ್ನು ವಿಸರ್ಜನೆ ಮಾಡಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದರು ಆದರೆ ನೆಹರೂ ಆ ಕೆಲಸ ಮಾಡಲಿಲ್ಲ, ಆದರೆ ರಾಹುಲ್ ಗಾಂಧಿ ಮಹಾತ್ಮ ಗಾಂಧೀಜಿಯವರ ಮಾತನ್ನು ಕೇಳುತ್ತಿದ್ದಾರೆ, ಕಾಂಗ್ರೆಸ್ ಅನ್ನು ನಿರ್ನಾಮ ಮಾಡುವವರೆಗೂ ಅವರು ಬಿಡುವುದಿಲ್ಲ ಎಂದು ಹೇಳಿದರು.
ರಾಜ್ಯಾದ್ಯಂತ ಬಿಜೆಪಿ ಭರ್ಜರಿ ಪ್ರಚಾರ
ಶಿವರಾಜ್ ಸಿಂಗ್ ಚೌಹಾನ್ ಬೆಳಗಾವಿ ಜಿಲ್ಲೆಯ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ರಾಮದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಚಿಕ್ಕರೇವಣ್ಣಾವ, ಗೋಕಾಕ ಕ್ಷೇತ್ರಕ್ಕೆ ರಮೇಶ ಜಾರಕಿಹೊಳಿ, ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ನಿಖಿಲ್ ಕತ್ತಿ ಪರವಾಗಿ ಮತ ಯಾಚನೆ ಮಾಡಿದರು.
ರಾಜ್ಯಾದ್ಯಂತ ಬುಧವಾರ ಬಿಜೆಪಿ ಸ್ಟಾರ್ ಪ್ರಚಾರಕರ ದಂಡು ಮತಬೇಟೆಯಲ್ಲಿ ತೊಡಗಿಸಿಕೊಂಡಿದ್ದರು. ಯೋಗಿ ಆದಿತ್ಯನಾಥ್, ಸ್ಮೃತಿ ಇರಾನಿ, ನಿರ್ಮಲಾ ಸೀತಾರಾಮನ್, ಬಸವರಾಜ ಬೊಮ್ಮಾಯಿ, ರಾಜನಾಥ್ ಸಿಂಗ್, ಅರುಣ್ ಸಿಂಗ್, ಬಿಎಸ್ ಯಡಿಯೂರಪ್ಪ ಮುಂತಾದ ಪ್ರಮುಖ ನಾಯಕರು ರಾಜ್ಯದ ಹಲವು ಭಾಗಗಳಲ್ಲಿ ಪ್ರಚಾರ ಮಾಡಿದರು.












Click it and Unblock the Notifications