ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಾಹುಕಾರ್ ಸ್ಫೋಟಕ ಹೇಳಿಕೆ; ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿಂದೆ 'ಮಹಾನ್ ನಾಯಕ'ನ ನೆರಳು

|
Google Oneindia Kannada News

ಉಡುಪಿ, ಏಪ್ರಿಲ್ 12: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಯ ಹಿಂದೆ 'ಮಹಾನ್‌ ನಾಯಕ'ನ ತಂಡವೇ ಕೆಲಸ ಮಾಡಿದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ತಮ್ಮ ವಿರುದ್ಧದ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದ ಮಹಾ ನಾಯಕನ ತಂಡವೇ ಈಗ ಸಚಿವ ಈಶ್ವರಪ್ಪ ವಿರುದ್ಧ ಷಡ್ಯಂತ್ರವನ್ನು ಮಾಡುತ್ತಿದೆ ಎಂದು ದೂಷಿಸಿದ್ದಾರೆ.

ಸರ್ಕಾರದಲ್ಲಿ ಹೇಗೆ ನಡೆಯುತ್ತೆ 40 ಪರ್ಸೆಂಟ್ ಕಮೀಷನ್ ವ್ಯವಹಾರ?: ಸಂತೋಷ್ ಆರೋಪದ ಸುತ್ತಮುತ್ತಸರ್ಕಾರದಲ್ಲಿ ಹೇಗೆ ನಡೆಯುತ್ತೆ 40 ಪರ್ಸೆಂಟ್ ಕಮೀಷನ್ ವ್ಯವಹಾರ?: ಸಂತೋಷ್ ಆರೋಪದ ಸುತ್ತಮುತ್ತ

"ಈ ಹಿಂದೆ ನನ್ನ ವಿರುದ್ಧ ಷಡ್ಯಂತ್ರವನ್ನು ರೂಪಿಸಿದ ತಂಡವೇ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿದೆ. ಈಗ ನಾನು ಯಾವುದೇ ನಾಯಕರ ಹೆಸರನ್ನು ಹೇಳುವುದಕ್ಕೆ ಹೋಗುವುದಿಲ್ಲ. ಆದರೆ, ನನ್ನ ವಿರುದ್ಧ ಷಡ್ಯಂತ್ರವನ್ನು ರೂಪಿಸಿದ ತಂಡವೇ ಈ ಪ್ರಕರಣದಲ್ಲೂ ಕೆಲಸ ಮಾಡಿದೆ," ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ಸಿಬಿಐ ತನಿಖೆಗೆ ರಮೇಶ್ ಜಾರಕಿಹೊಳಿ ಆಗ್ರಹ:

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿಂದೆ ಹುನ್ನಾರ ಅಡಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಬಾರದು:

ಕೇಂದ್ರೀಯ ತಂಡವು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಬೇಕು. ಅಲ್ಲಿಯವರೆಗೂ ಸಚಿವ ಕೆ ಎಸ್ ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತಮ್ಮ ವಿರುದ್ಧದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ನಂತರದಲ್ಲಿ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸಿಬಿಐ ತನಿಖೆ ನಡೆಸುವಂತೆ ರಮೇಶ್ ಜಾರಕಿಹೊಳಿ ಒತ್ತಾಯ

ಸಿಬಿಐ ತನಿಖೆ ನಡೆಸುವಂತೆ ರಮೇಶ್ ಜಾರಕಿಹೊಳಿ ಒತ್ತಾಯ

ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಹಿಂದೆ ಹುನ್ನಾರ ಅಡಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ರಮೇಶ್ ಜಾರಕಿಹೊಳಿ ಆಗ್ರಹಿಸಿದ್ದಾರೆ.

ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದ ರಮೇಶ್ ಜಾರಕಿಹೊಳಿ

ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದ ರಮೇಶ್ ಜಾರಕಿಹೊಳಿ

ಕೇಂದ್ರೀಯ ತನಿಖಾ ತಂಡವು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಬೇಕು. ಅಲ್ಲಿಯವರೆಗೂ ಸಚಿವ ಕೆ ಎಸ್ ಈಶ್ವರಪ್ಪನವರು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಬಾರದು. ತಮ್ಮ ವಿರುದ್ಧದ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾದ ನಂತರದಲ್ಲಿ ರಾಜೀನಾಮೆ ನೀಡಲಿ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಆರೋಪ

ಡಿಕೆ ಶಿವಕುಮಾರ್ ವಿರುದ್ಧ ಪರೋಕ್ಷ ಆರೋಪ

ರಾಜ್ಯದಲ್ಲಿ ಈ ಹಿಂದೆ ತಮ್ಮ ವಿರುದ್ಧ ಸಿಡಿ ಪ್ರಕರಣದಲ್ಲಿ ಷಡ್ಯಂತ್ರ ಮಾಡಿದ ಮಹಾನ್ ನಾಯಕನ ತಂಡವೇ ಈಗಿನ ಘಟನೆಗೂ ಮುಖ್ಯ ಕಾರಣೀಕರ್ತರಾಗಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಸೋಮವಾರ ಎಲ್ಲ ಘಟನೆಯ ಕುರಿತು ವಿವರವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತೇನೆ ಎಂದು ಅವರು ಹೇಳಿದರು. ಆ ಮೂಲಕ ಮಹಾನ್ ನಾಯಕ ಎಂಬ ತಮ್ಮ ಹಳೆಯ ಧಾಟಿಯಲ್ಲಿ ಯಾವುದೇ ಹೆಸರನ್ನು ಉಲ್ಲೇಖಿಸದೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಆರೋಪಿಸಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪದ ಬಗ್ಗೆ ಡೆತ್‌ನೋಟ್ ಬರೆದಿಟ್ಟ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಏಪ್ರಿಲ್ 12ರಂದು ಉಡುಪಿಯ ಶಾಂಭವಿ ಲಾಡ್ಜ್‌ನ ರೂಮ್ ನಂಬರ್ 207ರಲ್ಲಿ ಶವವಾಗಿ ಪತ್ತೆಯಾದ ಅವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಯಿತು. ಅದಕ್ಕೂ ಮೊದಲು ಅವರೇ ಕಳುಹಿಸಿದ್ದಾರೆ ಎನ್ನಲಾದ ವಾಟ್ಸಾಪ್ ಸಂದೇಶವು ತೀವ್ರ ಚರ್ಚೆಗೆ ಕಾರಣವಾಗಿತ್ತು.

ಸಂತೋಷ್ ಪಾಟೀಲ್ ಸಾವಿಗೂ ಮೊದಲು ಕಳುಹಿಸಿದ ಸಂದೇಶ:

"ನನ್ನ ಸಾವಿಗೆ ನೇರ ಕಾರಣ ಕೆಎಸ್ ಈಶ್ವರಪ್ಪ, ಸಚಿವರು ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಕರ್ನಾಟಕ ಸರ್ಕಾರ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ ಮಗುವಿನೆ ಸರ್ಕಾರ ಎಂದರೆ ಮಾನ್ಯ ಪ್ರಧಾನಮಂತ್ರಿಗಳು ಮತ್ತು ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ ಎಸ್ ಯಡಿಯೂರಪ್ಪನವರು ಹಾಗೆ ಅವರಿವರೆಂನದೆ ಎಲ್ಲರೂ ಸಹಾಯಹಸ್ತ ನೀಡಬೇಕೆಂದು ಕೈಮುಗಿದು ಕೇಳಿಕೊಳ್ಳುತ್ತೇನೆ. ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ಗೆಳೆಯರಾದ ಸಂತೋಷ್ ಮತ್ತು ಪ್ರಶಾಂತ್ ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡು ಬಂದಿರುತ್ತೇನೆ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ," ಎಂದು ಸಂತೋಷ್ ಪಾಟೀಲ್ ಮಾಡಿರುವ ವಾಟ್ಸಾಪ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

Recommended Video

ದಲಿತರನ್ನು ದೇವಸ್ಥಾನದಲ್ಲಿ ಈಗ್ಲೂ ಹೇಗೆ ನಡೆಸಿಕೊಳ್ತಾರೆ ಅನ್ನೋದನ್ನ ಹೇಳಿದ ಡಾ.ಜಿ ಪರಮೇಶ್ವರ್ | Oneindia Kannada

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

English summary
Maha nayak Team Worked Behind Contractor Santosh Patil Suicide Case; Ex-Minister Ramesh Jarkiholi Allegations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X