ಬೆಳಗಾವಿ ಪ್ರವೇಶಿಸದಂತೆ ಮಹಾರಾಷ್ಟ್ರದ ಸಚಿವರು, ಸಂಸದರಿಗೆ ನಿರ್ಬಂಧ

ಬೆಳಗಾವಿ, ಅಕ್ಟೋಬರ್‌ 31: ನವೆಂಬರ್ 1 ರಂದು ಆಚರಿಸಲಾದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತಡೆಯಲು ಜಿಲ್ಲಾಡಳಿತವು ಮಹಾರಾಷ್ಟ್ರದ ಮೂವರು ಸಚಿವರು ಮತ್ತು ಒಬ್ಬ ಸಂಸದರಿಗೆ ಬೆಳಗಾವಿ ಜಿಲ್ಲೆಗೆ ಅಕ್ಟೋಬರ್ 31, ಬೆಳಿಗ್ಗೆ 6 ರಿಂದ ನವೆಂಬರ್ 2ರ ಸಂಜೆ 6ರವರೆಗೆ ಪ್ರವೇಶವನ್ನು ನಿಷೇಧಿಸಿದೆ.

ರಾಜ್ಯದ ಮರಾಠಿ ಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿರುವ ಎಂಇಎಸ್ ತನ್ನ ಬೇಡಿಕೆಯನ್ನು ಬೆಂಬಲಿಸಿ ಕರ್ನಾಟಕ ರಾಜ್ಯೋತ್ಸವವನ್ನು ಕರಾಳ ದಿನವನ್ನಾಗಿ ಆಚರಿಸುತ್ತದೆ.

maharashtra-ministers-mps-barred

ಇತ್ತೀಚೆಗೆ ಎಂಇಎಸ್‌ನ ನಾಯಕರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕೊಲ್ಲಾಪುರದಲ್ಲಿ ಭೇಟಿ ಮಾಡಿ ಕರಾಳ ದಿನಾಚರಣೆಯಲ್ಲಿ ಭಾಗವಹಿಸಲು ತಮ್ಮ ಪ್ರತಿನಿಧಿಗಳನ್ನು ಕಳುಹಿಸಬೇಕು ಮತ್ತು ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಬೆಂಬಲ ನೀಡುವಂತೆ ಒತ್ತಾಯಿಸಿದ್ದರು.

ಎಂಇಎಸ್ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಸಚಿವರಾದ ಶಂಭುರಾಜೇ ದೇಸಾಯಿ, ಚಂದ್ರಕಾಂತ್ ಪಾಟೀಲ್, ದೀಪಕ್ ಕೇಸರಕರ್ ಮತ್ತು ಸಂಸದ ಧೈರ್ಯಶೀಲ ಮಾನೆ ಅವರನ್ನುಆಹ್ವಾನಿಸಲಾಗಿತ್ತು.

ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೂವರು ಸಚಿವರು ಮತ್ತು ಸಂಸದರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಅವರು ಕನ್ನಡ ಕಾರ್ಯಕರ್ತರನ್ನು ಭೇಟಿ ಮಾಡಿದರೆ ಎಂಇಎಸ್ ಕಾರ್ಯಕರ್ತರೊಂದಿಗೆ ಘರ್ಷಣೆಗೆ ಕಾರಣವಾಗುವ ಸಾಧ್ಯತೆಯಿದೆ. ಹೀಗಾಗಿ ಅಕ್ಟೋಬರ್ 31 ರಿಂದ 48 ಗಂಟೆಗಳ ಕಾಲ ಬೆಳಗ್ಗೆ 6 ಗಂಟೆಯವರೆಗೆ ಪ್ರವೇಶ ನಿಷೇಧಿಸಲಾಗಿದೆ.

ಎಂಇಎಸ್‌ನ ಬೂಟಾಟಿಕೆಯನ್ನು ಬೆಂಬಲಿಸಲು ಬೆಳಗಾವಿ ಜಿಲ್ಲೆಗೆ ಪ್ರತಿನಿಧಿಯನ್ನು ಕಳುಹಿಸುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಘೋಷಿಸಿದ್ದರು. ಏಕನಾಥ್‌ ಶಿಂಧೆಯ ನಿರ್ಧಾರದಿಂದ ಕೆರಳಿರುವ ಕನ್ನಡ ಪರ ಸಂಘಟನೆಗಳು ಇದಕ್ಕೆ ಅವಕಾಶ ನೀಡದಂತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಒತ್ತಾಯಿಸಿದ್ದವು.

ಬೆಳಗಾವಿ ಸೇರಿದಂತೆ 840 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸುವ ಹೋರಾಟದ ನೇತೃತ್ವವನ್ನು ಎಂಇಎಸ್ ಸಂಘಟನೆ ವಹಿಸಿಕೊಂಡಿದೆ. ಇದಕ್ಕೆ ಬೆಂಬಲ ಸೂಚಿಸಲು ತಮ್ಮ ಸರ್ಕಾರ ಬೆಳಗಾವಿಗೆ ಪ್ರತಿನಿಧಿಯನ್ನು ಕಳುಹಿಸಲಿದೆ ಎಂದು ಮಹಾರಾಷ್ಟ್ರ ಸಿಎಂ ಹೇಳಿದ್ದಾರೆ. ಕಾರ್ಯಕ್ರಮಕ್ಕೆ ಹಾಜರಾಗುವಂತೆ ಎಂಇಎಸ್ ನಾಯಕರು ನಮಗೆ ಆಹ್ವಾನ ನೀಡಿದ್ದಾರೆ. ನಾವು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎಂದು ಸಿಎಂ ಶಿಂಧೆ ಕೊಲ್ಲಾಪುರದಲ್ಲಿ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+