ಶತಮಾನೋತ್ಸವ: ಸುವರ್ಣಸೌಧದಲ್ಲಿ ಬೃಹತ್ ಗಾಂಧೀ‌ ಪ್ರತಿಮೆ ಅನಾವರಣದ ಅಪ್ಡೇಟ್

ಬೆಳಗಾವಿ, ಡಿಸೆಂಬರ್ 25: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆ ವಹಿಸಿದ್ದ 1924ರ ಕಾಂಗ್ರೇಸ್ ಅಧಿವೇಶನಕ್ಕೆ ನೂರು ವರ್ಷಗಳು ಪೂರ್ಣಗೊಂಡಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಅದ್ಧೂರಿ ಶತಮಾನೊತ್ಸವ ಕಾರ್ಯಕ್ರಮ ನಡೆಯಲಿದೆ. ವಿವಿಧೆಡೆ ಕಾಂಗ್ರೆಸ್ ಸಮಾವೇಶಗಳು ನಡೆಯುತ್ತಿವೆ. ಇತ್ತ ಬೆಳಗಾವಿಯ ಸುವರ್ಣಸೌಧದಲ್ಲಿ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಪುತ್ಥಳಿ ಅನಾವರಣಗೊಳ್ಳಲಿದೆ.

ಸುವರ್ಣಸೌಧದಲ್ಲಿ ಶುಕ್ರವಾರ ಡಿಸೆಂಬರ್ 27 ಗಾಂಧಿ ಪ್ರತಿಮೆ ಅನಾವರಣ ಮಾಡಲು ಸರ್ಕಾರ ಯೋಜಿಸಿದೆ. ಈ ಸಂಬಂಧ ಬುಧವಾರ ಪುತ್ಥಳಿ ಅನಾವರಣ ಸಮಾರಂಭದ ಪೂರ್ವಸಿದ್ಧತೆಗಳನ್ನು ಪ್ರವಾಸೊದ್ಯಮ ಇಲಾಖೆ ಸಚಿವರಾದ ಎಚ್.ಕೆ.ಪಾಟೀಲ ಅವರು‌ ಪರಿಶೀಲಿಸಿದರು.

Mahatma Gandhiji Big Statue will Unveiling in Suvarna Soudha on Dec 27th

ಈ ವೇಳೆ ಮಾತನಾಡಿದ ಅವರು, ಶತಮಾನೋತ್ಸವವನ್ನು ಅರ್ಥಪೂರ್ಣ ಆಚರಣೆಗಾಗಿ ಮಹಾತ್ಮಾ ಗಾಂಧೀಜಿಯವರ ತತ್ವಾದರ್ಶ ದೇಶದ ಪ್ರತಿಯೊಬ್ಬರಿಗೆ ಪರಿಚಯಿಸುವ ಕಾರ್ಯಕ್ರಮ ರೂಪಿಸಲಾಗಿದೆ. ಶತಮಾನೋತ್ಸವ ಭಾಗವಾಗಿ ಗಾಂಧೀಜಿ ಪುತ್ಥಳಿ ಇಲ್ಲಿ ಸ್ಥಾಪಿಸಲಾಗಿದೆ.

ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಅಧಿವೇಶನ ಕೇವಲ ಪಕ್ಷದ ಅಧಿವೇಶನವಾಗಿರದೇ, ಸಾಮಾಜಿಕ‌ ಸುಧಾರಣೆಯ ಅಸ್ತ್ರವಾಗಿತ್ತು. ನಾಡಿನಲ್ಲಿದ್ದ ಅಸ್ಪ್ರಶ್ಯತೆಯನ್ನು ನಿವಾರಿಸಿ ಭ್ರಾತೃತ್ವ ಭಾವನೆ ಬೆಸೆಯುವುದರ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಅವರು ಶಕ್ತಿ ತುಂಬಿದ್ದರು.

ವರ್ಷಪೂರ್ತಿ ಸರ್ಕಾರದಿಂದ 41 ಕಾರ್ಯಕ್ರಮ

ಅಂದು ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಜರುಗಿದ ಕಾಂಗ್ರೇಸ್ ಅಧಿವೇಶನ ಶತಮಾನೋತ್ಸವನ್ನು ಆಚರಿಸುವ ಮೂಲಕ ಇತಿಹಾಸ ಮರುಕಳಿಸುವ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದರು.

ಗಾಂಧೀಜಿಯವರ ತತ್ವಾದರ್ಶಗಳನ್ನು ದೇಶದ ಪ್ರತಿಯೊಬ್ಬರಿಗೂ ಪರಿಚಯಿಸುವ ಉದ್ದೇಶದೊಂದಿಗೆ ಶತಮಾನೋತ್ಸವದ ಅಂಗವಾಗಿ ರಾಜ್ಯ ಸರ್ಕಾರ 41 ಕಾರ್ಯಕ್ರಮಗಳನ್ನು ಘೋಷಣೆ ಮಾಡಿ ವರ್ಷಪೂರ್ತಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಪುತ್ಥಳಿ, ಸ್ಮಾರಕ ಭವನ ಉದ್ಘಾಟನೆ

ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಬೃಹತ್ ಪ್ರತಿಮೆ ಅಂದು ಬೆಳಗ್ಗೆ 10 ಗಂಟೆಗೆ ಅನಾವರಣಗೊಳ್ಳಲಿದೆ. ಈ ಬೃಹತ್ ಕಾರ್ಯಕ್ರಮಕ್ಕೆ ಸರ್ವ ಪಕ್ಷದ ನಾಯಕರು, ಸ್ವಾತಂತ್ರ್ಯ ಹೊರಾಟಗಾರರನ್ನು, ಆಹ್ವಾನಿಸಲಾಘಿದೆ.

ಡಿ.26 ರಂದು ನಗರದ‌ ವೀರಸೌಧದಲ್ಲಿನ ಗಾಂಧೀಜಿಯವರ ಪ್ರತಿಮೆ ಹಾಗೂ ರಾಮತೀರ್ಥ ನಗರದಲ್ಲಿನ ಗಂಗಾಧರ್ ರಾವ್ ದೇಶಪಾಂಡೆ ಅವರ ಸ್ಮಾರಕ ಭವನ ಉದ್ಘಾಟಿಸಲಾಗುವುದು ಎಂದು ಸಚಿವರಾದ ಎಚ್.ಕೆ.ಪಾಟೀಲ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+