ಬೆಳಗಾವಿಯಲ್ಲಿ ಕಲ್ಲು ತೂರಾಟ ಪ್ರಕರಣ: ಇನ್ಸ್ಪೆಕ್ಟರ್ ಪ್ರಶಾಂತ ಸಸ್ಪೆಂಡ್
ಬೆಳಗಾವಿ, ಮೇ 16 : ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಇಲ್ಲಿನ ಮಾರ್ಕೆಟ್ ಇನ್ಸ್ಪೆಕ್ಟರ್ ಪ್ರಶಾಂತ ಅವರನ್ನು ಅಮಾನತು ಮಾಡಲಾಗಿದೆ.
ನಿನ್ನೆ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದ ಮೆರವಣಿಗೆ ವೇಳೆ ಗಲಾಟೆ ನಡೆದಿತ್ತು. ಪೋರ್ಟ್ ರಸ್ತೆಯಲ್ಲಿ ಮೆರವಣಿಗೆ ಬರುತ್ತಿದ್ದಂತೆ ಒಂದು ಕೋಮಿನ ಗುಂಪು ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿತು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಮಾರಾಮಾರಿ ನಡೆದು, ಬೈಕ್, ಆಟೋಗೆ ಕೀಡಿಗೇಡಿಗಳು ಬೆಂಕಿ ಹಚ್ಚಿದ್ದರು.
ಇದೀಗ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಮಾರ್ಕೆಟ್ ಇನ್ಸ್ಪೆಕ್ಟರ್ ಪ್ರಶಾಂತ ಅವರನ್ನು ಅಮಾನತು ಮಾಡಲಾಗಿದೆ.

ಕೆಲ ಕೀಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪೋರ್ಟ ರೋಡ್, ಪಾಟೀಲ್ ಗಲ್ಲಿ ಸೇರಿ ಕೆಲ ಸೂಕ್ಷ್ಮ ಪ್ರದೇಶದಲ್ಲಿ ನಿಷೇದಾಜ್ಞೆ ಮುಂದುವರಿದಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.












Click it and Unblock the Notifications