ಬೆಳಗಾವಿ; ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆ

ಬೆಳಗಾವಿ, ಜನವರಿ 19: ಇಬ್ಬರು ಪುಟ್ಟ ಮಕ್ಕಳ ಜೊತೆ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ. ರಾಮದುರ್ಗ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಕ್ರಿಮಿನಾಶಕ ಸೇವಿಸಿ ಪ್ರವೀಣ್ ಶೆಟ್ಟರ್ (37), ರಾಜೇಶ್ವರಿ (27), ಅಮೃತಾ (8), ಅದ್ವಿಕ್ (6) ಮೃತಪಟ್ಟಿದ್ದಾರೆ. ಪ್ರವೀಣ್ ಶೆಟ್ಟರ್ ರಾಮದುರ್ಗ ಪಟ್ಟಣದಲ್ಲಿ ಗೊಬ್ಬರದ ಮಳಿಗೆಯನ್ನು ಹೊಂದಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ. ಸ್ಥಳೀಯ ಶಾಸಕ ಮಹಾದೇವಪ್ಪ ಯಾದವಾಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವಗಳನ್ನು ತಾಲೂಕು ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದೆ.

Mass Suicide In Ramdurg Couple, Minor Children Found Dead

ಆತ್ಮಹತ್ಯೆಯ ಸುದ್ದಿ ತಿಳಿದು ಕುಟುಂಬದವರ ಸಂಬಂಧಿಕರು, ಸ್ನೇಹಿತರು ಸ್ಥಳಕ್ಕೆ ಧಾವಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಶವಗಳನ್ನು ಹಸ್ತಾಂತರ ಮಾಡಲಾಗುತ್ತದೆ. ರಾಮದುರ್ಗ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸಲು ತೀರ್ಮಾನಿಸಲಾಗಿದೆ.

ಪ್ರವೀಣ್ ಶೆಟ್ಟರ್ ಮನೆಗೆ ರಾಮದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಡೆತ್ ನೋಟ್ ಬರೆದಿದ್ದಾರೆಯೇ? ಎಂದು ಪರಿಶೀಲನೆ ನಡೆಸಲಾಗುತ್ತಿದೆ. ರಾಮದುರ್ಗ ಠಾಣೆಯಲ್ಲಿ ಸಾಮೂಹಿಕ ಆತ್ಮಹತ್ಯೆ ಬಗ್ಗೆ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+