ಮದುವೆಯಲ್ಲಿ ಕನ್ನಡ ಗೀತೆ ಹಾಕಿದ್ದಕ್ಕೆ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ
ಬೆಳಗಾವಿ, ಮೇ 27: ವಿವಾಹ ಸಮಾರಂಭವೊಂದರಲ್ಲಿ ಕನ್ನಡ ಹಾಡನ್ನು ಹಾಕಿದ್ದಕ್ಕೆ ನವ ದಂಪತಿ ಸೇರಿದಂತೆ ಸಮಾರಂಭದಲ್ಲಿದ್ದ ಹಲವರ ಮೇಲೆ ಮಹಾರಾಷ್ಟ್ರ ಏಕೀಕರಣ ಸಮಿತಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಧಾಮನೆ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ ಭರಮಾ ಸೇರಿ ಐವರ ಮೇಲೆ ಹಲ್ಲೆಗೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಧಾಮನೆ ಗ್ರಾಮದಲ್ಲಿ ವಿವಾಹ ನಡೆಯುತ್ತಿತ್ತು. ರಾತ್ರಿ ಬ್ಯಾಂಡ್ ಮೆರವಣಿಗೆ ಮೂಲಕ ವಧು-ವರನನ್ನು ಕುಟುಂಬಸ್ಥರು ಮನೆಗೆ ಕರೆದೊಯ್ಯುತ್ತಿದ್ದರು. ಕನ್ನಡ ಬಾವುಟ ಹಿಡಿದುಕೊಂಡು ಕನ್ನಡ ಗೀತೆಗಳಿಗೆ ಸಂಭ್ರಮದಿಂದ ಕುಣಿಯುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಎಂಇಎಸ್ ಕಾರ್ಯಕರ್ತರು ಖ್ಯಾತೆ ತೆಗೆದು ಹಲ್ಲೆ ಮಾಡಿದರು, ಪೊಲೀಸರಿಗೆ ದೂರು ನೀಡಿದರೂ ಅವರು ಸ್ಪಂದಿಸುತ್ತಿಲ್ಲ ಎಂದು ಗಾಯಗೊಂಡವರು ಆರೋಪಿಸಿದ್ದಾರೆ.

10 ಮಂದಿಯ ವಿರುದ್ಧ ಪ್ರಕರಣ
ವಿವಾಹದ ಮೆರವಣಿಗೆಯಲ್ಲಿ ಕನ್ನಡ ಧ್ವಜ ಹಾಡಿಗೆ ನೃತ್ಯ ಮಾಡಿದ್ದಕ್ಕೆ ಎಂಇಎಸ್ ಕಾರ್ಯಕರ್ತರು ಕಿರಿಕ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 10 ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಚೆನ್ನಮ್ಮನ ಫಲಕ ಹಾಕಿದ್ದಕ್ಕೆ ಗಲಾಟೆ
ಕನ್ನಡ ಧ್ವಜ ಹಿಡಿದು ನಾವು ಡ್ಯಾನ್ಸ್ ಮಾಡುತ್ತಿದ್ದೆವು, ಎಂಇಎಸ್‌ನವರು ನಮ್ಮನ್ನ ಪಕ್ಕಕ್ಕೆ ಕರೆದು ಗಲಾಟೆ ಶುರುಮಾಡಿದರು. ದೊಣ್ಣೆಗಳಿಂದ ಹೊಡೆದರು. ನಮ್ಮ ಮನೆಯ ಮುಂದೆ ಕಿತ್ತೂರು ರಾಣಿ ಚೆನ್ನಮ್ಮನ ಫಲಕ ಹಾಕಿದ್ದೇವೆ, ಈ ಕಾರಣಕ್ಕೆ ಪದೇ ಪದೇ ಗಲಾಟೆ ಮಾಡುತ್ತಿದ್ದಾರೆ. ಅಜಯ್ ಯಳ್ಳೂರಕರ, ಮಹೇಶ ಯಳ್ಳೂರಕರ, ಆಕಾಶ್ ಚೌಗುಲೆ ಎಂಬುವವರು
ಎರಡು ತಿಂಗಳ ಹಿಂದೆ ನನ್ನ ಗಾಡಿಯನ್ನು ಸುಟ್ಟಿದ್ದಾರೆ. ಪೊಲೀಸರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ವರನ ತಮ್ಮ ಭರಮಾ ಸೈಬಣ್ಣ ಮಾಧ್ಯಮದ ಮುಂದೆ ಹೇಳಿಕೊಂಡಿದ್ದಾರೆ.
ಎಂಇಎಸ್ ಕಾರ್ಯಕರ್ತರು ಕನ್ನಡ ಧ್ವಜದ ವಿಚಾರವಾಗಿ ಗಲಾಟೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಬೆಳಗಾವಿ ಅಧಿವೇಶನ ವೇಳೆ ಬೈಕ್‌ಗೆ ಬೆಂಕಿ ಹಚ್ಚಿದ್ದರು, ಕನ್ನಡ ಫಲಕಗಳನ್ನು ತೆಗೆದು ಮರಾಠಿ ಫಲಕಗಳನ್ನು ಹಾಕಿ ಗಲಾಟೆ ಮಾಡಿದ್ದರು. ರಾಣಿ ಚನ್ನಮ್ಮ ನಗರ ಎನ್ನುವ ಕೈಬರಹದ ಫಲಕದ ಎದುರು ಧರ್ಮವೀರ ಸಂಭಾಜಿನಗರ ಎಂಬ ಫಲಕವನ್ನಾಕಿ ಉದ್ಧಟತನ ಮೆರೆದಿದ್ದರು.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications