ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಡ ಧ್ವಜ ತೆರವುಗೊಳಿಸಲು ಆಗ್ರಹಿಸಿ ಮಾರ್ಚ್ 8ರಂದು ಎಂಇಎಸ್ ಪ್ರತಿಭಟನೆ

|
Google Oneindia Kannada News

ಬೆಳಗಾವಿ, ಮಾರ್ಚ್ 6: ಕನ್ನಡ ಧ್ವಜಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತೆ ತಗಾದೆ ತೆಗೆದಿದೆ. ಮಹಾನಗರ ಪಾಲಿಕೆ ಎದುರು ಸ್ಥಾಪಿಸಿರುವ ಕನ್ನಡ ಧ್ವಜ ತೆರವುಗೊಳಿಸಬೇಕು. ಇಲ್ಲದಿದ್ದರೆ ಪಾಲಿಕೆಯ ಮುಂದೆ ಭಗವಾಧ್ವಜ ಹಾರಿಸಲು ಅನುಮತಿ ನೀಡಬೇಕು ಎಂದು ಆಗ್ರಹಿಸಿರುವ ಎಂಇಎಸ್, ಮಾರ್ಚ್ 8ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದೆ.

ಎಂಇಎಸ್ ಸದಸ್ಯರು ಶನಿವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ವೇಳೆ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಎಂಇಎಸ್, ಉದ್ಧ(ಟ)ವ್ ಠಾಕ್ರೆ ಇಷ್ಟು ಬೆಳೆಯಲು ಕಾರಣ ಬಿಜೆಪಿಯ ಸಲುಗೆಎಂಇಎಸ್, ಉದ್ಧ(ಟ)ವ್ ಠಾಕ್ರೆ ಇಷ್ಟು ಬೆಳೆಯಲು ಕಾರಣ ಬಿಜೆಪಿಯ ಸಲುಗೆ

'ಪಾಲಿಕೆ ಎದುರು ಇರುವ ಧ್ವಜ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಮರಾಠಾ ಸಮಾಜ ಹಾಗೂ ಎಂಇಎಸ್ ಮುಖಂಡರು ನನ್ನನ್ನು ಭೇಟಿಯಾಗಿದ್ದರು. ಅವರು ಉದ್ದೇಶಿಸಿರುವ ಮೆರವಣಿಗೆಯನ್ನು ಕೈಬಿಡುವಂತೆ ಮನವಿ ಮಾಡಿದ್ದೇನೆ. ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಕೂಡ ಮಾತುಕತೆ ನಡೆಸಿ ಈ ವಿಚಾರವನ್ನು ಸೌಹಾರ್ದಯುತವಾಗಿ ಬಗೆಹರಿಸಲು ಪ್ರಯತ್ನಿಸಲಾಗುವುದು' ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MES To Protest On March 8 Demanding Removal Of Kannada Flag

ಮಹಾರಾಷ್ಟ್ರದ ಶಿವಸೇನಾ ಮುಖಂಡ ವಿಜಯ ದೇವಣೆ ಮತ್ತು ಬೆಂಬಲಿಗರು ಮಾರ್ಚ್ 7ರ ಬೆಳಿಗ್ಗೆ 6 ರಿಂದ ಮಾರ್ಚ್ 9ರ ಬೆಳಿಗ್ಗೆ 6ರವರೆಗೆ ಗಡಿಯೊಳಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ವಿಜಯ ದೇವಣೆ ಹಾಗೂ ಅವರ ಬೆಂಬಲಿಗರು ಮಾರ್ಚ್ 8ರಂದು ನಡೆಯಲಿರುವ ಎಂಇಎಸ್ ಪ್ರತಿಭಟನೆಯಲ್ಲಿ ಪಾಲ್ಗೊಂಡು ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಭಾಷಾ ಸಂಘರ್ಷಕ್ಕೆ ಅವಕಾಶಮಾಡಿಕೊಡುವ ಸಾಧ್ಯತೆ ಇದೆ. ಇದರ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಜಿಲ್ಲೆಯಲ್ಲಿ ಅಹಿತಕರ ವಾತಾವರಣ ನಿರ್ಮಾಣವಾಗಲಿದೆ. ಹೀಗಾಗಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಅಂದು ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಬಾಲ ಬಿಚ್ಚುತ್ತಿರಲಿಲ್ಲಅಂದು ಎಂಇಎಸ್‌ಗೆ ಸರಿಯಾದ ಪೆಟ್ಟು ಕೊಟ್ಟಿದ್ದರೆ, ಇಂದು ಉದ್ಧವ್ ಠಾಕ್ರೆ ಬಾಲ ಬಿಚ್ಚುತ್ತಿರಲಿಲ್ಲ

ಕನ್ನಡಪರ ಸಂಘಟನೆಗಳು ಮಹಾನಗರ ಪಾಲಿಕೆ ಎದುರು ಹಾರಿಸಿರುವ ಕನ್ನಡ ಧ್ವಜ ತೆರವುಗೊಳಿಸುವಂತೆ ಆಗ್ರಹಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನಾ ಆಯೋಜಿಸಿರುವ ಮೆರವಣಿಗೆಗೆ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಶನಿವಾರ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

English summary
MES decided for a protesting morcha on March 8 demanding the removal of Kannada flag from Belagavi City Corporation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X