ಬೆಳಗಾವಿಯಲ್ಲಿ ಮಹಾ ಮೇಳಾವ ಆಯೋಜಿಸಲಿದೆ ಎಂಇಎಸ್
ಬೆಳಗಾವಿ, ನವೆಂಬರ್ 8 : ಮಹಾರಾಷ್ಟ್ರ ಏಕೀಕರಣ ಸಮಿತಿ ಕರ್ನಾಟಕ ವಿಧಾನಸಭೆ ಚಳಿಗಾಲದ ಅಧಿವೇಶನದ ಮೊದಲ ದಿನ ಮಹಾ ಮೇಳಾವ ಆಯೋಜನೆ ಮಾಡಲು ನಿರ್ಧರಿಸಿದೆ. ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಬೆಳಗಾವಿ ಪೊಲೀಸರಿಗೆ ಮನವಿ ಮಾಡಿದೆ.
ನ.13ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅಧಿವೇಶನದ ಮೊದಲ ದಿನ ಮಹಾ ಮೇಳಾವ ಆಯೋಜನೆ ಮಾಡಲು ಎಂಇಎಸ್ ನಿರ್ಧರಿಸಿದೆ.

ಬೆಳಗಾವಿಯಲ್ಲಿ ಮಹಾ ಮೇಳಾವ ಆಯೋಜನೆ ಮಾಡಲು ಅನುಮತಿ ನೀಡುವಂತೆ ಕೋರಿ ಬೆಳಗಾವಿ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ನ.1ರ ಕನ್ನಡ ರಾಜ್ಯೋತ್ಸವದ ದಿನದಂದು ಸಹ ಎಂಇಎಸ್ ಕರಾಳ ದಿನಾಚರಣೆಯನ್ನು ಆರಿಸಿತ್ತು.
ಮಹಾ ಮೇಳಾವ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದಿಂದ ರಾಜಕೀಯ ನಾಯಕರನ್ನು ಆಹ್ವಾನಿಸಲು ಎಂಇಎಸ್ ನಿರ್ಧರಿಸಿದೆ. ಸಚಿವ ಜಯಂತ ಪಾಟೀಲ, ವಿರೋಧ ಪಕ್ಷದ ನಾಯಕ ಧನಂಜ ಮುಂಡೆ ಸೇರಿದಂತೆ ವಿವಿಧ ನಾಯಕರನ್ನು ಕರೆಸಲು ನಿರ್ಧರಿಸಲಾಗಿದೆ.












Click it and Unblock the Notifications