ಕೊಯ್ನಾ ಜಲಾನಯನ ಪ್ರದೇಶದಲ್ಲಿ ಲಘು ಭೂಕಂಪ; ಕೃಷ್ಣಾ ನದಿ ತೀರದಲ್ಲಿ ಆತಂಕ

ಬೆಳಗಾವಿ, ಆಗಸ್ಟ್‌ 15: ಮಹಾರಾಷ್ಟ್ರದ ಕೊಯ್ನಾ ಜಲಾಶಯದ ಸುತ್ತಲಿನ ಪ್ರದೇಶದಲ್ಲಿ ಲಘು ಭೂಂಕಪವಾಗಿದೆ. ಇಂದು ಬೆಳಗ್ಗೆ 10.30ರ ಸುಮಾರಿಗೆ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪನದಲ್ಲಿ 3.1ರಷ್ಟು ತೀವ್ರತೆಯಲ್ಲಿ ಕಂಪನವಾಗಿರುವ ವರದಿಯಾಗಿದೆ.

ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಕೊಯ್ನಾ ಜಲಾಶಯದ ಸುತ್ತಲಿನ ಪ್ರದೇಶದಲ್ಲಿ ಲಘು ಭೂಂಕಪವಾಗಿರುವುದರಿಂದ ಕೃಷ್ಣಾ ನದಿ ತೀರದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 105 ಟಿಎಂಸಿ ಸಾಮರ್ಥ್ಯ ಹೊಂದಿರುವ ಕೊಯ್ನಾ ಜಲಾಶಯದಲ್ಲಿ ಈಗಾಗಲೇ 82 ಟಿಎಂಸಿ ನೀರು ಭರ್ತಿಯಾಗಿದೆ. ನಿನ್ನೆಯಿಂದ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲಾಗುತ್ತಿದೆ. ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡಲಾಗುತ್ತಿದೆ.

Belagavi: Mild Earthquake Reported Around Koyna Reservoir

ಜಲಾಶಯದಿಂದ 10 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗುತ್ತಿದ್ದು, ಇದರಿಂದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೃಷ್ಣಾ ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+