ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ತಬ್ಲಿಘಿ ಸಂಪರ್ಕದಲ್ಲಿದ್ದವರಿಗೆ ಕಾನೂನು ಬಲಪ್ರಯೋಗಿಸಿ ಕರೆತನ್ನಿ'

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 13: ಬೆಳಗಾವಿ ಜಿಲ್ಲೆಯಲ್ಲಿ ಮತ್ತೇ ಮೂರು ಕೊರೊನಾ ವೈರಸ್ ಪ್ರಕರಣಗಳು ದೃಢಪಟ್ಟಿರುವುದರಿಂದ ರಾಯಬಾಗ ತಾಲ್ಲೂಕಿನ ಕುಡಚಿ ಸೇರಿದಂತೆ ಎಲ್ಲ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಇನ್ನಷ್ಟು ಬಿಗಿ ಕ್ರಮ ತೆಗೆದುಕೊಂಡು ಸಂಪೂರ್ಣ ಬಂದ್ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

Recommended Video

Exclusive Interview with Minister Kota Srinivas Poojari | Fishery | Muzrai | Karnataka

ಕುಡಚಿಯ ಪ್ರತಿಯೊಬ್ಬರನ್ನು ವೈಯಕ್ತಿಕವಾಗಿ ವೈದ್ಯಕೀಯ ತಪಾಸಣೆ ನಡೆಸಬೇಕು. ತಬ್ಲಿಘಿ ಜೊತೆ ಸಂಪರ್ಕ ಹೊಂದಿರುವವರನ್ನು ತಕ್ಷಣವೇ ಗುರುತಿಸುವ ಕೆಲಸವಾಗಬೇಕು. ಒಂದು ವೇಳೆ ಸ್ವಯಂಪ್ರೇರಣೆಯಿಂದ ಅವರು ಮುಂದೆ ಬರದಿದ್ದರೆ, ಕಾನೂನು ಪ್ರಕಾರ ಬಲಪ್ರಯೋಗಿಸಿ ಅವರನ್ನು ತಕ್ಷಣವೇ ಕ್ವಾರಂಟೈನ್ ನಲ್ಲಿ ಇರಿಸುವ ಕೆಲಸವಾಗಬೇಕು ಎಂದು ಜಗದೀಶ್ ಶೆಟ್ಟರ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೆಳಗಾವಿಯಲ್ಲಿ ಪ್ರಯೋಗಾಲಯ ಪ್ರಾರಂಭ

ಬೆಳಗಾವಿಯಲ್ಲಿ ಪ್ರಯೋಗಾಲಯ ಪ್ರಾರಂಭ

ಕೋವಿಡ್-19 ನಿಯಂತ್ರಣ ಕುರಿತು ಬೆಳಗಾವಿ ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮದ್ಯ ಮಾರಾಟಕ್ಕೆ ಅವಕಾಶ ನೀಡದಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಮನವರಿಕೆ ಮಾಡಲಾಗುವುದು ಎಂದ ಅವರು, ಈಗಾಗಲೇ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಜತೆ ಚರ್ಚೆ ನಡೆಸಲಾಗಿದ್ದು, ಬೆಳಗಾವಿಯಲ್ಲಿ ಇನ್ನೆರಡು ದಿನಗಳಲ್ಲಿ ಪ್ರಯೋಗಾಲಯ ಆರಂಭಗೊಳ್ಳುವ ಸಾಧ್ಯತೆಗಳಿವೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಪ್ರಾಥಮಿಕ ಸಂಪರ್ಕ ಹೊಂದಿರುವವರ ಮೇಲೆ ನಿಗಾ

ಪ್ರಾಥಮಿಕ ಸಂಪರ್ಕ ಹೊಂದಿರುವವರ ಮೇಲೆ ನಿಗಾ

ನಿಷೇಧಿತ ಪ್ರದೇಶಗಳಾಗಿ ಘೋಷಿಸಲಾಗಿರುವ ಹಿರೇಬಾಗೇವಾಡಿ, ಕುಡಚಿ, ಬೆಳಗುಂದಿ ಹಾಗೂ ಬೆಳಗಾವಿ ಕ್ಯಾಂಪ್ ಪ್ರದೇಶಗಳಲ್ಲಿ ಅಗತ್ಯ ವಸ್ತುಗಳು ಮತ್ತು ವೈದ್ಯಕೀಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕು ಎಂದರು.

ಈಗಾಗಲೇ ಸೋಂಕು ದೃಢಪಟ್ಟಿರುವ 17 ಜನರ ಜತೆ ಪ್ರಾಥಮಿಕ ಸಂಪರ್ಕ ಹೊಂದಿರುವವರ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಮೂಲಕ ಸೋಂಕು ಮತ್ತಷ್ಟು ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಚಿವ ಶೆಟ್ಟರ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಮದ್ಯ ಮಾರಾಟಕ್ಕೆ ಅವಕಾಶ ಬೇಡ

ಮದ್ಯ ಮಾರಾಟಕ್ಕೆ ಅವಕಾಶ ಬೇಡ

ಜಲಸಂಪನ್ಮೂಲ ಇಲಾಖೆಯ ಸಚಿವ ರಮೇಶ್ ಜಾರಕಿಹೊಳಿ ಅವರು ಮಾತನಾಡಿ, ದೆಹಲಿಯ ತಬ್ಲಿಘಿ ಧಾರ್ಮಿಕ ಸಭೆಗೆ ಹೋಗಿ ಬಂದಿರುವವರು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಹೋಗುವುದು ರೂಢಿ. ಆದ್ದರಿಂದ ಅಂತಹವರನ್ನು ಪತ್ತೆಹಚ್ಚುವ ಕೆಲಸ ತುರ್ತಾಗಿ ನಡೆಸಬೇಕು. ಇಲ್ಲದಿದ್ದರೆ ಸೋಂಕು ಇನ್ನಷ್ಟು ಹರಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಸ್ಥಿತಿ ಉದ್ಭವಿಸಬಾರದು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಎಂಎಸ್ಐಎಲ್ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಸಚಿವ ಜಾರಕಿಹೊಳಿ ತಿಳಿಸಿದರು.

ಸೋಂಕಿತ ಮೂವರು ಆಸ್ಪತ್ರೆಗೆ ಸ್ಥಳಾಂತರ

ಸೋಂಕಿತ ಮೂವರು ಆಸ್ಪತ್ರೆಗೆ ಸ್ಥಳಾಂತರ

ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಈಗಾಗಲೇ ಸೋಂಕು ದೃಢಪಟ್ಟಿರುವವರ ಚಿಕಿತ್ಸೆ ಮುಂದುವರಿದಿದ್ದು, ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ವಿವರಿಸಿದರು.

ಇಂದು ಹೊಸದಾಗಿ ಸೋಂಕು ದೃಢಪಟ್ಟಿರುವ ರಾಯಬಾಗ ತಾಲ್ಲೂಕಿನ ಮೂವರನ್ನೂ ಕೂಡ ಪ್ರಾಥಮಿಕ ವರದಿಯ ಪ್ರಕಾರ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ತಿಳಿಸಿದರು.

English summary
Jagdish Shettar issued a strict warning To Belagavi District Administration that anyone with contact with Tablighi, should action immediately.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X