ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ ಕುರಿತು ಸಾರಿಗೆ ಸಚಿವರ ಸ್ಪಷ್ಟನೆ
ಬೆಳಗಾವಿ, ಸೆಪ್ಟೆಂಬರ್ 2: ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ಗಳ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
Recommended Video
ಆಸ್ಪತ್ರೆಯಿಂದ ಕೆಲಸ ಮಾಡುತ್ತಿರುವ Minister | Oneindia Kannada
ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ. ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

ವಿದ್ಯಾರ್ಥಿಗಳ ಬಸ್ ಪಾಸ್ ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್ ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಅದೇ ರೀತಿಯಲ್ಲಿ ದರ ಅಳವಡಿಸಿಕೊಳ್ಳಲಾಗುವುದು. ಅಷ್ಟೇ ಅಲ್ಲ, ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ಸ್ಪಷ್ಟಪಡಿಸಿದರು.












Click it and Unblock the Notifications