ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾರ್ಥಿಗಳ ಬಸ್ ಪಾಸ್ ದರ ಏರಿಕೆ ಕುರಿತು ಸಾರಿಗೆ ಸಚಿವರ ಸ್ಪಷ್ಟನೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 2: ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ನೀಡಲಾಗುತ್ತಿರುವ ಬಸ್ ಪಾಸ್ ಗಳ ದರವನ್ನು ಏರಿಕೆ ಮಾಡುವುದಿಲ್ಲ ಎಂದು‌ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

Recommended Video

ಆಸ್ಪತ್ರೆಯಿಂದ ಕೆಲಸ ಮಾಡುತ್ತಿರುವ Minister | Oneindia Kannada

ಈ ಹಿಂದೆ ಇದ್ದ ಮಾನದಂಡಗಳನ್ನು ಬದಲಿಸುವ ಯಾವುದೇ ಉದ್ದೇಶ ಸರ್ಕಾರದ ಮುಂದಿಲ್ಲ. ಆದ್ದರಿಂದ ಈ ಬಗ್ಗೆ ವಿದ್ಯಾರ್ಥಿಗಳು ಮತ್ತು ಪೋಷಕರು ಅನಗತ್ಯ ಆತಂಕಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.

Minister Laxman Savadi Clarification On Increasing Student Bus Pass Price

 ಸಾರಿಗೆ ಇಲಾಖೆಯಿಂದ ಶೀಘ್ರವೇ ಕೊರಿಯರ್ ಸೇವೆ; ಡಿಸಿಎಂ ಸವದಿ ಸಾರಿಗೆ ಇಲಾಖೆಯಿಂದ ಶೀಘ್ರವೇ ಕೊರಿಯರ್ ಸೇವೆ; ಡಿಸಿಎಂ ಸವದಿ

ವಿದ್ಯಾರ್ಥಿಗಳ ಬಸ್ ಪಾಸ್ ಗಳ ದರ ಹೆಚ್ಚಿಸಲಾಗುತ್ತದೆ ಎಂಬುದು ಕೇವಲ ವದಂತಿಯಷ್ಟೇ. ಆ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಬಸ್ ಪಾಸ್ ಗಳನ್ನು ಯಾವ ಪ್ರಮಾಣದ ದರದಲ್ಲಿ ವಿತರಿಸಲಾಗಿತ್ತೋ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೂ ಅದೇ ರೀತಿಯಲ್ಲಿ ದರ ಅಳವಡಿಸಿಕೊಳ್ಳಲಾಗುವುದು. ಅಷ್ಟೇ ಅಲ್ಲ, ಹಿಂದಿನ ಮಾನದಂಡಗಳನ್ನೇ ಮುಂದುವರೆಸಲಾಗುವುದು ಎಂದು ಸ್ಪಷ್ಟಪಡಿಸಿದರು.

English summary
Transport Minister DCM Lakshmana Savadi said that the price of bus passes given to students would not be increased
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X