ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುರ್ತು ಸಂದರ್ಭಕ್ಕಾಗಿ ಬೆಳಗಾವಿಯಲ್ಲಿ ಕಾಳಜಿ ಕೇಂದ್ರ ಸ್ಥಾಪನೆ; ಅಶೋಕ

|
Google Oneindia Kannada News

ಬೆಳಗಾವಿ, ಅಕ್ಟೋಬರ್ 19 : ಬೆಳಗಾವಿ ಜಿಲ್ಲೆಯಲ್ಲಿ ಇತ್ತೀಚಿಗೆ ಅತಿವೃಷ್ಟಿಯಿಂದಾಗಿ ಅಪಾರವಾದ ಹಾನಿಯಾಗಿದೆ. ರೈತರು ಬೆಳೆದ ಬೆಳೆ ನೀರಿನಲ್ಲಿ ಮುಳುಗಿದೆ. ಮನೆ, ರಸ್ತೆ ಸೇರಿದಂತೆ ಜಿಲ್ಲೆಯಲ್ಲಿ ಅಪಾರ ನಷ್ಟ ಉಂಟಾಗಿದೆ.

ಸೋಮವಾರ ಕಂದಾಯ ಸಚಿವ ಆರ್. ಅಶೋಕ ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಹಾನಿ ಹೊಳಗಾಗಿರುವ ಪ್ರದೇಶಗಳನ್ನು ಸಚಿವರು ವೀಕ್ಷಣೆ ಮಾಡಿದರು.

ಬೆಳಗಾವಿ ಉಪ ಚುನಾವಣೆ; ಜಾರಕಿಹೊಳಿ ಕುಟುಂಬದ ಸ್ಪಷ್ಟನೆ ಬೆಳಗಾವಿ ಉಪ ಚುನಾವಣೆ; ಜಾರಕಿಹೊಳಿ ಕುಟುಂಬದ ಸ್ಪಷ್ಟನೆ

ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಸಚಿವ ಆರ್. ಅಶೋಕ ಪ್ರವಾಹದಿಂದ ಆಗಿರುವ ಹಾನಿಯ ಕುರಿತು ಮಾಹಿತಿ ಪಡೆದರು. ಪರಿಸ್ಥಿತಿ ನಿರ್ವಹಣೆ ಮಾಡಲು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿದರು.

ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಅಬ್ಬರ: ಕಟಾವಿಗೆ ಬಂದಿದ್ದ ಕಬ್ಬು ನೆಲಸಮಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಅಬ್ಬರ: ಕಟಾವಿಗೆ ಬಂದಿದ್ದ ಕಬ್ಬು ನೆಲಸಮ

ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಹುಕ್ಕೇರಿ ಮತ್ತು ಚಿಕ್ಕೋಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಆರ್. ಅಶೋಕ ಭೇಟಿ ಕೊಟ್ಟರು.‌ ಪ್ರವಾಹದಿಂದ ಆದ ಹಾನಿಯನ್ನು ಪರಿಶೀಲಿಸಿದರು. ರೈತರಿಂದ ಮಾಹಿತಿಯನ್ನು ಪಡೆದುಕೊಂಡರು.

ಬೆಳಗಾವಿ ಜಿಲ್ಲೆಯಲ್ಲಿ ಕಂಡು ಕೇಳರಿಯದ ರೀತಿ ಮಳೆಯಬ್ಬರ: ನೀರಿನಲ್ಲಿ ಕೊಚ್ಚಿಹೋದ ವೃದ್ಧಬೆಳಗಾವಿ ಜಿಲ್ಲೆಯಲ್ಲಿ ಕಂಡು ಕೇಳರಿಯದ ರೀತಿ ಮಳೆಯಬ್ಬರ: ನೀರಿನಲ್ಲಿ ಕೊಚ್ಚಿಹೋದ ವೃದ್ಧ

ಬೆಳೆಹಾನಿ ವೀಕ್ಷಣೆ ಮಾಡಿದ ಸಚಿವರು

ಬೆಳೆಹಾನಿ ವೀಕ್ಷಣೆ ಮಾಡಿದ ಸಚಿವರು

ಆರ್. ಅಶೋಕ ಮತ್ತು ರಮೇಶ್ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಹತ್ತರಗಿ ಹಾಗೂ ಜಿನರಾಳ ಗ್ರಾಮದಲ್ಲಿ ಉಂಟಾಗಿರುವ ಬೆಳೆಹಾನಿಯನ್ನು ವೀಕ್ಷಣೆ ಮಾಡಿದರು. ಹುಕ್ಕೇರಿ ಪಟ್ಟಣದಲ್ಲಿ ಮಳೆಯಿಂದ ಹಾಳಾಗಿರುವ ರಸ್ತೆ, ಸೇತುವೆ, ಮನೆಗಳನ್ನು ವೀಕ್ಷಣೆ ಮಾಡಿದರು.

ಹಣದ ಕೊರತೆ ಇಲ್ಲ ಎಂದ ಸಚಿವರು

ಹಣದ ಕೊರತೆ ಇಲ್ಲ ಎಂದ ಸಚಿವರು

ಆರ್. ಅಶೋಕ ಮಾಧ್ಯಮಗಳ ಜೊತೆ ಮಾತನಾಡಿ, "ಅತಿವೃಷ್ಟಿಯಿಂದಾಗಿ ಸಂತ್ರಸ್ತರಾದವರಿಗೆ ಪರಿಹಾರ ನೀಡಲು ಹಣದ ಕೊರತೆಯಿಲ್ಲ. ಎಲ್ಲ ಜಿಲ್ಲಾಧಿಕಾರಿಗಳ ಪಿ. ಡಿ. ಖಾತೆಯಲ್ಲಿ ಹಣವಿದೆ. ಮಾರ್ಗಸೂಚಿಗಳ ಪ್ರಕಾರ ಪರಿಹಾರವನ್ನು ನೀಡಲಾಗುವುದು" ಎಂದು ಹೇಳಿದರು.

ತಕ್ಷಣ ಹಣ ಬಿಡುಗಡೆಗೆ ಸೂಚನೆ

ತಕ್ಷಣ ಹಣ ಬಿಡುಗಡೆಗೆ ಸೂಚನೆ

"ಪ್ರವಾಹದಿಂದಾಗಿ ಹಾನಿಯಾದ ಮೂಲ ಸೌಕರ್ಯಗಳ ದುರಸ್ತಿಗೆ ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಸಮರೋಪಾದಿಯಲ್ಲಿ ಪರಿಹಾರ ಕೆಲಸ ನಡೆಯಲಿದೆ. ಸಂತ್ರಸ್ತರಿಗೆ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ. ಬೆಳೆ ಪರಿಹಾರ ಹಾಗೂ ಮನೆ ನಿರ್ಮಾಣದ ಕಂತಿನ ಹಣವನ್ನು ತಕ್ಷಣ ಬಿಡುಗಡೆ ಮಾಡಲು ಸೂಚಿಸಲಾಗಿದೆ" ಎಂದರು.

ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ

ಕಾಳಜಿ ಕೇಂದ್ರವನ್ನು ಸ್ಥಾಪಿಸಲಾಗುತ್ತದೆ

"ಜಿಲ್ಲೆಯ ಜನರಿಗೆ ಪ್ರವಾಹ ಮುಂತಾದ ತುರ್ತು ಸಂದರ್ಭಗಳಲ್ಲಿ ಸುರಕ್ಷಿತ ನೆಲೆ ಒದಗಿಸಲು ಬೆಳಗಾವಿ ಜಿಲ್ಲೆಯಲ್ಲಿ ಸುಸಜ್ಜಿತ ಕಾಳಜಿ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಕೇಂದ್ರದಲ್ಲಿ ಅಡುಗೆ ಕೋಣೆ, ಸ್ನಾನಗೃಹ, ವಸತಿ ಕೋಣೆಗಳನ್ನು ನಿರ್ಮಿಸಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

English summary
Karnataka revenue minister R. Ashok inspected rain hit areas of Belagavi with Ramesh Jarkiholi who is district in-charge minister.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X