ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂಪುಟ ವಿಸ್ತರಣೆ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಮಹತ್ವದ ಹೇಳಿಕೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಲಗಾವಿ, ಜನವರಿ 13: ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ದೊಡ್ಡ ಮಟ್ಟದ ಸಂಪುಟ ಪುನಾರಚನೆ ಆಗುತ್ತದೆ ಎಂದು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸ್ಪೋಟಕ ಹೇಳಿಕೆ ನೀಡಿದರು.

ಬುಧವಾರ ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಸಚಿವ ಸ್ಥಾನ ತಪ್ಪಿದವರಿಗೆ ಮುಂದಿನ ಬಾರಿ ಸ್ಥಾನ ಸಿಗುವ ವಿಶ್ವಾಸವಿದೆ. ಅದೇ ರೀತಿ ಮುನಿರತ್ನ ಅವರಿಗೂ ಸಚಿವ ಸ್ಥಾನ ಸಿಗಲಿದೆ ಎಂದರು.

ಸಚಿವರಾಗಿ ಉಮೇಶ್ ಕತ್ತಿ ಪ್ರಮಾಣ ವಚನ: ಬಿಎಸ್‌ವೈ ಸಂಪುಟದಲ್ಲಿ ಕುಂದಾನಗರಿಗೆ ಸಿಂಹಪಾಲುಸಚಿವರಾಗಿ ಉಮೇಶ್ ಕತ್ತಿ ಪ್ರಮಾಣ ವಚನ: ಬಿಎಸ್‌ವೈ ಸಂಪುಟದಲ್ಲಿ ಕುಂದಾನಗರಿಗೆ ಸಿಂಹಪಾಲು

ಎಚ್.ವಿಶ್ವನಾಥ್, ಮಹೇಶ್ ಕುಮಟಳ್ಳಿ, ಮುನಿರತ್ನ ಅಚಿವ ಸ್ಥಾನ ಆಕಾಂಕ್ಷಿಗಳಿದ್ದಾರೆ. ಗುಲಬರ್ಗಾದಲ್ಲಿ ಪಕ್ಷ ಕಟ್ಟಿ, ದೊಡ್ಡ ವ್ಯಕ್ತಿಯನ್ನು ಸೋಲಿಸಿದವರು ಮಾಲೀಕಯ್ಯ ಗುತ್ತೇದಾರ್‌ಗೂ ಸಚಿವ ಸ್ಥಾನ ಸಿಗಬೇಕಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.

Belagavi: Minister Ramesh Jarakiholi Made A Significant Statement On The Expansion Of The Cabinet

ಮಾಲೀಕಯ್ಯ ಗುತ್ತೆದಾರ್ ನನಗಿಂತ ಸ್ಟ್ರಾಂಗ್ ಇದ್ದಾರೆ, ಅವರಿಗೆ ಸ್ಥಾನಮಾನ ಸಿಗಬೇಕು. ನಮ್ಮ ಟೀಂ ನಲ್ಲಿ ಇನ್ನೂ ಐವರಿಗೆ ಸಚಿವ ಸ್ಥಾನ ಸಿಗಬೇಕಾಗಿದೆ. ಎಚ್‌.ವಿಶ್ವನಾಥ್ ಸಚಿವರಾಗಲು ಕಾನೂನು ತೊಡಕಿದೆ. ಸರ್ಕಾರ ಬರಲು ಸಿಪಿ ಯೋಗೇಶ್ವರ್ ಪ್ರಮುಖ ಮಾತ್ರ ವಹಿಸಿದ್ದಾರೆ ಎಂದು ತಿಳಿಸಿದರು.

ಸಿಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ಕೊಟ್ಟಿದ್ದು ಬಹಳ ಸಂತೋಷವಾಗಿದೆ. ಬಿಎಸ್‌ವೈ ವಿರುದ್ಧ ಎಚ್‌.ವಿಶ್ವನಾಥ್ ಆಕ್ರೋಶ ವಿಚಾರವಾಗಿ, ವಿಶ್ವನಾಥ್ ಹಿರಿಯರು, ಅವರು ಮಾತನಾಡೋದು ಆಶೀರ್ವಾದ ಅಂದುಕೊಳ್ಳೋಣವೆಂದರು.

ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಉಪ ಚುನಾವಣೆ ಆಗಲಿ. ಇದಾದ ಮೇಲೆ ತಾ.ಪಂ ಹಾಗೂ ಜಿ.ಪಂ ಚುನಾವಣೆ ಮುಗಿದ ಬಳಿಕ ಮತ್ತೊಮ್ಮೆ ಸಂಪುಟ ಪುನಾರಚನೆ ಆಗಲಿದೆ ಎಂಬ ಮಹತ್ವದ ಮಾಹಿತಿ ನೀಡಿದರು.

ಸರ್ಕಾರ ಕೇವಲ ಬೆಂಗಳೂರು, ಬೆಳಗಾವಿಗೆ ಸೀಮಿತವಾಗಿದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನ ಕೊಟ್ಟಿರುವುದು ಸಂದರ್ಭ ಅನುಗುಣವಾಗಿ ಆಗಿದೆ. ಇದನ್ನು ಮುಂದೆ ಸಿಎಂ ಸರಿಪಡಿಸುತ್ತಾ ಎಂದು ಹೇಳಿದರು.

English summary
Water Resources Minister Ramesh Jarakiholi issued an explosive statement in Belagavi that a large-scale cabinet will reshuffle in March or April.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X