• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ಬದಲಾವಣೆ ವಿಚಾರ: ಸಚಿವ ರಮೇಶ್ ಜಾರಕಿಹೊಳಿ ಏನಂದ್ರು?

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ನವೆಂಬರ್ 6: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುತ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಅಂತಾ ಹೇಳಿದ್ದಾರೆ. ಈ ಕುರಿತು ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ತೀರ್ಮಾನವೂ ಸಹ ಆಗಿದೆ ಎಂದು ತಿರುಗೇಟು ನೀಡಿದರು.

ಡಿಸಿಎಂ ಲಕ್ಷ್ಮಣ್ ಸವದಿ ಶಸ್ತ್ರತ್ಯಾಗದ ಹಿಂದಿದೆಯಾ ಮಾಸ್ಟರ್ ಪ್ಲಾನ್?

ಮಾಜಿ ಸಿಎಂ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ, ಎನಾದರೂ ಮಾಡಿಕೊಳ್ಳಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ ಎಂದ ರಮೇಶ್ ಜಾರಕಿಹೊಳಿ, ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ತಮ್ಮನ್ನು ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಭೇಟಿಯಾದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ಕ್ಯೂಟ್ ಹೌಸ್ ಗೆ ಅಂಜಲಿ ನಿಂಬಾಳ್ಕರ್ ಜಿಲ್ಲಾಧಿಕಾರಿ ಭೇಟಿಗೆ ಬಂದಿದ್ದರು‌. ಈ ಸಂದರ್ಭದಲ್ಲಿ ಜತೆಗೂಡಿ ಟೀ ಕುಡಿದಿದ್ದೇವೆ, ರಾಜಕೀಯ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಧಾರವಾಡ‌ ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಬಂಧನ ವಿಚಾರ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ವಿನಯ್ ಕುಲಕರ್ಣಿ ಪ್ರಕರಣ ಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂದರೆ ಗೆದ್ದು ಬರುತ್ತಾರೆ.

ಕಾಂಗ್ರೆಸ್ ಪಕ್ಷದವರು ಪ್ರಕರಣ ರಾಜಕೀಯ ಮಾಡುತ್ತಿರುವುದು ತಪ್ಪೇನಿಲ್ಲ ಮಾಡಲಿ, ಸಿಬಿಐ ಸ್ವತಂತ್ರ ಸಂಸ್ಥೆ, ವಿಚಾರಣೆ ಮಾಡುತ್ತಿದ್ದಾರೆ.

ವಿನಯ್ ಕುಲಕರ್ಣಿ ತಪ್ಪು ಮಾಡದಿದ್ದರೆ ಯಾಕೆ ಹೆದರಬೇಕು ಎಂದು ಪ್ರಶ್ನಿಸಿದರು.

ಎಂಇಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಬಿಜೆಪಿಗೆ ಸೇರ್ಪಡೆ ಬಗ್ಗೆ ಮಾತನಾಡಿ, ಸಂದರ್ಭಕ್ಕೆ ಅನುಸಾರ ವರಿಷ್ಠರ ಮುಂದೆ ಹೇಳಿದ್ದೆ. ಇದರ ಬಗ್ಗೆ ನಿರ್ಣಯ ವರಿಷ್ಠರು ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

ಬಸವಕಲ್ಯಾಣ ಕ್ಷೇತ್ರದಿಂದ ಸಿಎಂ ಪುತ್ರ ವಿಜಯೇಂದ್ರ ಸ್ಪರ್ಧೆ ಮಾಡುವ ಕುರಿತು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಬೆಳಗಾವಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

English summary
Water Resources Minister Ramesh Jarakiholi said there was no CM change for any reason.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X