ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

25 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ರಮೇಶ್ ಜಾರಕಿಹೊಳಿ ಚಾಲನೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜನೆವರಿ 4: ತಾವು ಪ್ರತಿನಿಧಿಸುವ ಗೋಕಾಕ್ ವಿಧಾನಸಭೆ ಕ್ಷೇತ್ರದಲ್ಲಿ 25 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.

ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಗೋಕಾಕ್ ನಗರಕ್ಕೆ 25 ಕೋಟಿ ರೂ. ಮಂಜೂರಾಗಿತ್ತು. ಈ ಹಣದಿಂದ ವಿವಿಧ ಕಾಮಗಾರಿಗಳಿಗೆ ಸಚಿವ ರಮೇಶ್ ಜಾರಕಿಹೊಳಿ ಭಾನುವಾರ ಶಂಕು ಸ್ಥಾಪನೆ ನೆರವೇರಿಸಿದರು.

ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕೈ ಕೊಟ್ಟು ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿ.ಪಂ ಸದಸ್ಯೆಗೆ ಸೋಲುಲಕ್ಷ್ಮಿ ಹೆಬ್ಬಾಳ್ಕರ್‌ಗೆ ಕೈ ಕೊಟ್ಟು ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿ.ಪಂ ಸದಸ್ಯೆಗೆ ಸೋಲು

ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು, ನೀರು ಸರಬರಾಜು ಕಾಮಗಾರಿಗಳೂ ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಕೈಗೊಳ್ಳಲಾಗಿದೆ.

Belagavi: Minister Ramesh Jarkiholi Launches Development Projects Worth Rs 25 Crore In Gokak

ಈ ವೇಳೆ ಮಾತನಾಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಗೋಕಾಕ ಫಾಲ್ಸ್ ಅನ್ನು ರಾಜ್ಯದ ಅತ್ಯುತ್ತಮ ಪ್ರವಾಸಿ ಕೇಂದ್ರ ಮಾಡುವ ಉದ್ದೇಶ ಹೊಂದಲಾಗಿದೆ. ಪ್ರತಿವರ್ಷ ಜಲಪಾತ ವೀಕ್ಷಿಸಲು ರಾಜ್ಯ, ಹೊರ ರಾಜ್ಯದ ಲಕ್ಷಾಂತರ ಜನರು ಇಲ್ಲಿಗೆ ಆಗಮಿಸುತ್ತಾರೆ ಎಂದರು.

Belagavi: Minister Ramesh Jarkiholi Launches Development Projects Worth Rs 25 Crore In Gokak

ಹೀಗಾಗಿ ಗೋಕಾಕ್ ನಗರದಲ್ಲಿ ಮೂಲಸೌಕರ್ಯ ವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಇದಕ್ಕಾಗಿ ಇಂದು 25 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಗೋಕಾಕ್ ನಗರಸಭೆ ಅಧ್ಯಕ್ಷ ಜಯಾನಂದ ಹುಣಶ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಪೌರಾಯುಕ್ತ ಶಿವಾನಂದ ಹಿರೇಮಠ ಉಪಸ್ಥಿತರಿದ್ದರು.

English summary
Ramesh Jarakihili, Belagavi District in charge Minister Launches of various development works in the Gokak assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X