ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು

|
Google Oneindia Kannada News

ಬೆಳಗಾವಿ, ಆಗಸ್ಟ್ 31: "ನನಗೆ ಕೋವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ" ಎಂದು ಸಚಿವೆ ಶಶಿಕಲಾ ಜೊಲ್ಲೆ ಟ್ವೀಟ್ ಮಾಡಿದ್ದಾರೆ.

Recommended Video

Corona ಭೀತಿ ನಡುವೆಯೇ JEE ಪರೀಕ್ಷೆ ಶುರು | Oneindia Kannada

ನಿಪ್ಪಾಣಿ ಕ್ಷೇತ್ರದ ಶಾಸಕಿ ಮತ್ತು ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು ತಗುಲಿದೆ. "ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೇನ್ ಆಗಬೇಕಾಗಿ ವಿನಂತಿ" ಎಂದು ಸಚಿವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 6495 ಹೊಸ ಕೋವಿಡ್ ಪ್ರಕರಣ ದಾಖಲು ಕರ್ನಾಟಕದಲ್ಲಿ 6495 ಹೊಸ ಕೋವಿಡ್ ಪ್ರಕರಣ ದಾಖಲು

Minister Shashikala Jolle Tested Positive For COVID 19

"ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಾಮಾನ್ಯವಾಗಿದ್ದು, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ" ಎಂದು ಆರೋಗ್ಯದ ಬಗ್ಗೆ ಸಚಿವರು ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಸೋಮವಾರ 6,495 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನ ಕೋವಿಡ್‌ಗೆ 113 ಜನರು ಬಲಿಯಾಗಿದ್ದಾರೆ.

ಕರ್ನಾಟಕದ ಎಲ್ಲ ಶಾಸಕರಿಗೆ ಸಾಮೂಹಿಕ ಕೋವಿಡ್ ಪರೀಕ್ಷೆ? ಕರ್ನಾಟಕದ ಎಲ್ಲ ಶಾಸಕರಿಗೆ ಸಾಮೂಹಿಕ ಕೋವಿಡ್ ಪರೀಕ್ಷೆ?

ಕರ್ನಾಟಕದಲ್ಲಿನ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಒಟ್ಟು ಸಂಖ್ಯೆ 3,42,423ಕ್ಕೆ ಏರಿಕೆಯಾಗಿದೆ. ಬೆಳಗಾವಿಯಲ್ಲಿ 154 ಹೊಸ ಕೋವಿಡ್ ಪ್ರಕರಣ ದಾಖಲಾಗಿದ್ದು, ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,230ಕ್ಕೆ ಏರಿಕೆಯಾಗಿದೆ.

English summary
Karnataka minister for woman and child development Shashikala Jolle tested positive for Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X