ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯ ನರ್ಸ್ ಅಭಿನಂದಿಸಿದ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್‌ 10: ಕೊರೊನಾ ಸೋಂಕಿತೆಗೆ ಯಶಸ್ವಿಯಾಗಿ ಹೆರಿಗೆ ಮಾಡಿಸಿದ ನರ್ಸ್‌ಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

Recommended Video

ಪ್ರಪಂಚಕ್ಕೆ ಸಿಹಿಸುದ್ದಿ ಕೊಟ್ಟ ರಷ್ಯಾ | Oneindia Kannada

ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್‌ಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಸೋಂಕಿತೆಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ನರ್ಸ್ ಕಾರ್ಯ ಶ್ಲಾಘನೀಯ' ಎಂದು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಬಳ್ಳಾರಿಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆಬಳ್ಳಾರಿಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತ ಮಹಿಳೆ

ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದ ಹಲಗಾದ ಸೋಂಕಿತ ಗರ್ಭಿಣಿಗೆ, ಶನಿವಾರ ರಾತ್ರಿ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪಿಪಿಇ ಕಿಟ್ ಧರಿಸಿ ನರ್ಸ್ ರಾಣಿ ಲಖನಗೌಡ, ವೈದ್ಯ ಡಾ.ಮಂಜುನಾಥ ದಳವಾಯಿ ನೀಡಿದ ಮಾರ್ಗದರ್ಶನದಂತೆ ಹೆರಿಗೆ ಮಾಡಿಸಿದ್ದರು. ನರ್ಸ್ ಕಾರ್ಯಕ್ಕೆ ವೈದ್ಯಕೀಯ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವುದೇ ಸವಾಲಿನ ಕೆಲಸ, ಅಂಥದರಲ್ಲಿ ನರ್ಸ್ ರಾಣಿ ಲಖನಗೌಡ, ಕೋವಿಡ್ ಸೋಂಕಿತ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿ ಯಶಸ್ವಿಯಾಗಿದ್ದಾರೆ ಎಂದು ಕೊಂಡಾಡಿದ್ದಾರೆ.

Belagavi: Minister Sudhakar Congratulated Belagavi Nurse


ಗಂಡು ಮಗುವಿಗೆ ಕೊರೊನಾ ಸೋಂಕಿತೆ ಜನ್ಮ ನೀಡಿದ್ದಾರೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದು ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ರಾಜ್ಯಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

English summary
Minister of Medical Education Sudhakar congratulated nurse who helped corona infected woman to deliver baby,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X