ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಜತೆ ಸುರೇಶ್ ಅಂಗಡಿ ಸಭೆ
ಬೆಳಗಾವಿ, ಏಪ್ರಿಲ್ 19: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಆರೋಗ್ಯ ಮತ್ತು ಪೊಲೀಸ್ ಇಲಾಖೆಯ ಜತೆ ಸಹಕರಿಸಬೇಕು ಎಂದು ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಕೇಂದ್ರ ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರು ಮನವಿ ಮಾಡಿಕೊಂಡರು.
ಬೆಳಗಾವಿ ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ(ಏ.19) ನಡೆದ ಅಲ್ಪಸಂಖ್ಯಾತ ಸಮುದಾಯದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದ ಅವರು, ತಬ್ಲಿಘಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದವರು ಹಾಗೂ ಅವರೊಂದಿಗೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಸೋಂಕು ಕಂಡುಬಂದಿರುವುದರಿಂದ ಅವರನ್ನು ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗುವುದು ಎಂದರು.
ಕ್ವಾರಂಟೈನ್ ನಲ್ಲಿ ಇದ್ದವರು ನಿಗದಿತ ಅವಧಿ ಪೂರ್ಣಗೊಳ್ಳುವವರಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಹಾಗೂ ವೈದ್ಯರು ಮತ್ತು ಸಿಬ್ಬಂದಿ ಜತೆ ಸಹಕರಿಸುವಂತೆ ತಿಳಿವಳಿಕೆ ನೀಡಬೇಕು ಎಂದು ಸಮಾಜದ ಮುಖಂಡರಿಗೆ ಸಚಿವರು ಮನವಿ ಮಾಡಿದರು.

ಪವಿತ್ರ ರಮ್ಜಾನ್ ಮಾಸದ ಹಿನ್ನೆಲೆಯಲ್ಲಿ ಸಮುದಾಯದ ಜನರು ತಮ್ಮ ತಮ್ಮ ಮನೆಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸಮಾಜದ ಜನರಿಗೆ ಮನವರಿಕೆ ಮಾಡಬೇಕು ಎಂದು ಸಚಿವ ಸುರೇಶ್ ಅಂಗಡಿ ಅವರು ತಿಳಿಸಿದರು. ಸರ್ಕಾರದ ನಿರ್ದೇಶನದಂತೆ ಪೊಲೀಸರು ಲಾಕ್ ಡೌನ್ ಸಂದರ್ಭದಲ್ಲಿ ಜನಸಂಚಾರ ನಿರ್ಬಂಧಿಸಲು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಆದ್ದರಿಂದ ಪೊಲೀಸರ ಜತೆ ಎಲ್ಲರೂ ಸಹಕರಿಸಬೇಕು.
ನಿಷೇಧಿತ ಪ್ರದೇಶ ಎಂದು ಘೋಷಿಸಿರುವ ಕಡೆಗಳಲ್ಲಿ ದಿನಸಿ, ತರಕಾರಿ ಮತ್ತು ತುರ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿರುವುದರಿಂದ ಸಾರ್ವಜನಿಕರು ಅನವಶ್ಯಕವಾಗಿ ಹೊರಗೆ ಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅಲ್ಪಸಂಖ್ಯಾತ ಸಮಾಜದ ಕೆಲ ಮುಖಂಡರು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಸಹಕಾರ ನೀಡುವಂತೆ ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications