ಉಮೇಶ್ ಕತ್ತಿ ನಿಧನ: ವೀರಶೈವ ಸಂಪ್ರದಾಯದಂತೆ ಅಂತಿಮ ಸಂಸ್ಕಾರಕ್ಕೆ ಸಿದ್ಧತೆ
ಬೆಳಗಾವಿ, ಸೆಪ್ಟೆಂಬರ್ 7: ಸಚಿವ ಉಮೇಶ್ ಕತ್ತಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬುಧವಾರ ಸಾಯಾಂಕಾಲ ವೀರಶೈವ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ಬೆಲ್ಲದ ಬಾಗೇವಾಡಿಯಲ್ಲಿ ನಡೆಯಲಿದೆ. ಹಾಗಾಗಿ ಕತ್ತಿ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಏರ್‌ಲಿಫ್ಟ್ ಮಾಡಲಾಗಿದೆ.
ಎಚ್‌ಎಲ್‌ನಿಂದ ಈಗಾಗಲೇ ಕತ್ತಿ ಪಾರ್ಥೀವ ಶರೀರವನ್ನು ವಿಶೇಷ ವಿಮಾನದ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ. ವಿಮಾನದಲ್ಲಿ ಕತ್ತಿಯವರ ಪತ್ನಿ, ಮಗ , ಪುತ್ರಿ ಹಾಗೂ ಸಹೋದರ ತೆರಳಿದ್ದಾರೆ. ಉತ್ತರ ಕರ್ನಾಟಕದ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಂತಹ ಉಮೇಶ್ ಕತ್ತಿಯವರ ಅಂತಿಮ ದರ್ಶನಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಲ್ಲೇ ಅವಕಾಶ ಮಾಡಿಕೊಡಲಾಗಿದೆ.
ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನಲೆಯಲ್ಲಿ ಸಾವಿರಾರು ಕತ್ತಿ ಅಭಿಮಾನಿಗಳು ಈಗಾಗಲೇ ವಿಮಾನ ನಿಲ್ದಾಣದತ್ತ ಧಾವಿಸುತ್ತಿದ್ದಾರೆ. ಇತ್ತ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಬ್ಯಾರಿಕೇಡ್ ಅಳವಡಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತಿದೆ.

ವೀರಶೈವ ವಿಧಿವಿಧಾನದಂತೆ ಅಂತ್ಯಕ್ರಿಯೆ
ಉಮೇಶ್ ಕತ್ತಿ ಅವರ ಮೃತದೇಹದ ಅಂತಿಮ ಸಂಸ್ಕಾರ ಬುಧವಾರ ಸಂಜೆ ಕತ್ತಿ ಸ್ವಗ್ರಾಮವಾದ ಬೆಳಗಾವಿಯ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ. ಇದಕ್ಕಾಗಿ ಕತ್ತಿ ಮನೆತನದ ತೋಟದ ಜಮೀನಿನಲ್ಲಿ ಸಿದ್ಧತೆ ನಡೆಯುತ್ತಿದೆ. ವೀರಶೈವ ಲಿಂಗಾಯತ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಸಯಲಿದ್ದು, ತಂದೆ ವಿಶ್ವನಾಥ ಕತ್ತಿ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಉಮೇಶ್ ಕತ್ತಿ ಸಾವಿಗೆ ಕಂಬನಿ ಮಿಡಿದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಧೀಮಂತ ನಾಯಕನ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ತಿಳಿಸಿದ್ದಾರೆ.
ಕೇವಲ 25 ವರ್ಷದವರಾಗಿದ್ದಾಗ ಶಾಸಕರಾಗಿ ಸಾರ್ವಜನಿಕ ಜೀವನ ಪ್ರವೇಶಿಸಿದ ಅವರು 8 ಬಾರಿ ಶಾಸಕರಾಗಿ ಆಯ್ಕೆಯಾಗುವ ಮೂಲಕ ಒಬ್ಬ ಪ್ರಮುಖ ನಾಯಕರಾಗು ಗುರುತಿಸಿಕೊಂಡಿದ್ದರು. ಪ್ರಸ್ತುತ ವಿಧಾನ ಸಭೆಯಲ್ಲಿ ಅತಿ ಹೆಚ್ಚು ಬಾರಿ ಶಾಸಕರಾದವರಲ್ಲಿ ಹಿರಿಯರು. ರೈತ ಹಿತಚಿಂತಕರಾಗಿದ್ದ ಅವರ ಕೆಲಸಗಳು ಪ್ರಶಂಸನೀಯ, ಉತ್ತರ ಕರ್ನಾಟಕದ ಬಗ್ಗೆ ಅವರಿಗೆ ಹೆಚ್ಚಿ ಕಾಳಜಿ ಮತ್ತು ಪ್ರೀತಿ ಇತ್ತು ಎಂದು ಸಿಎಂ ತಿಳಿಸಿದ್ದಾರೆ.
ಇನ್ನು ಆಹಾರ ಸಚಿವ ಕತ್ತಿ ನಿಧನದ ಹಿನ್ನಲೆ ಬೆಳಗಾವಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ ಘೋಷೊಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ.
ಇನ್ನು ಸಚಿವ ಉಮೇಶ್ ಕತ್ತಿ ಗೌರವಾರ್ಥ ರಾಜ್ಯಾದ್ಯಂತ ಬುಧವಾರ ಶೋಕಾಚರಣೆ ಮಾಡುವಂತೆ ರಾಜ್ಯ ಸರಕಾರ ಘೋಷಿಸಿದ.












Click it and Unblock the Notifications