• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿ ಇಲ್ಲ: ಗುತ್ತಿಗೆದಾರರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ

By ಬೆಳಗಾವಿ ಪ್ರತಿನಿಧಿ
|

ಬೆಳಗಾವಿ, ಜನವರಿ 6: ರಸ್ತೆ ಸೇರಿದಂತೆ ಯಾವುದೇ ಕಾಮಗಾರಿಗಳ ಗುಣಮಟ್ಟದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಎಲ್ಲ ಕಾಮಗಾರಿಗಳೂ ಸಮರ್ಪಕವಾಗಿ ನಡೆಯಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಣ್ಣೂರ, ಉಚಗಾಂವ ಹಾಗೂ ಗೋಜಗಾ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಮುಖ್ಯ ಹೆದ್ದಾರಿ ನಿರ್ಮಾಣದ ಕಾಮಗಾರಿಗಳನ್ನು ಖುದ್ದಾಗಿ ಪರಿಶೀಲಿಸಿದ ಅವರು, ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚಿಸಿ, ನಿಗದಿತ ಸಮಯದಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.

ಬೆಳಗಾವಿ ಗ್ರಾಮೀಣ ಕ್ಷೇತ್ರ: ರಮೇಶ್ ಜಾರಕಿಹೊಳಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಬದ್ಧತೆ. ನಿಗದಿತ ಗುರಿ ಇಟ್ಟುಕೊಂಡು ನಾನು ಕೆಲಸ ಮಾಡುತ್ತಿದ್ದೇನೆ. ಕೊರೊನಾ, ಪ್ರವಾಹದಂತಹ ಪ್ರಕೃತಿಯ ಅಸಹಕಾರದಿಂದಾಗಿ ಸ್ವಲ್ಪಮಟ್ಟಿಗೆ ಅಡೆತಡೆ ಉಂಟಾಗಿರಬಹುದು. ಆದರೆ ನನ್ನ ಗುರಿ ಮತ್ತು ಯೋಜನೆಯಲ್ಲಿ ಹಿಂದಡಿ ಇಡುವ ಪ್ರಶ್ನೆಯೇ ಇಲ್ಲ ಎಂದರು.

ಕ್ಷೇತ್ರದ ಜನರ ಸಹಕಾರಿ ನನಗೆ ಸಂಪೂರ್ಣ ಸಿಗುತ್ತಿದೆ. ಹಿಂದೆಂದೂ ಕಾಣದ ರೀತಿಯಲ್ಲಿ ಕ್ಷೇತ್ರ ಅಭಿವೃದ್ಧಿಗೊಳ್ಳುತ್ತಿರುವುದರಿಂದ ಜನರು ನೆಮ್ಮದಿ ಕಾಣುತ್ತಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಭೇರಿ ಭಾರಿಸಿದೆ. ಜನರು ಅಭಿವೃದ್ಧಿಯ ಪರವಾಗಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಪರಸ್ಪರ ಸಹಕಾರದಿಂದ ಇದೇ ರೀತಿ ಅಭಿವೃದ್ಧಿಯತ್ತ ಮುನ್ನಡೆಯೋಣ ಎಂದು ಶಾಸಕಿ ಹೆಬ್ಬಾಳ್ಕರ್ ಜನರಲ್ಲಿ ವಿನಂತಿಸಿದರು.

English summary
There is no question of compromise in the quality of any work, Belagavi Rural MLA Lakshmi Hebbalkar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X