ಕಾಣದ ಕೈಗಳ ಕೆಲಸದಿಂದ ಸಚಿವ ಸ್ಥಾನ ತಪ್ಪಿದೆ: ಲಕ್ಷ್ಮೀ ಹೆಬ್ಬಾಳ್ಕರ್
Recommended Video

ಸಚಿವ ಸ್ಥಾನ ತಪ್ಪೋಕೆ ಕಾಣದ ಕೈಗಳೇ ಕಾರಣ ಎಂದು ಆರೋಪಿಸಿದ ಲಕ್ಷ್ಮಿ ಹೆಬ್ಬಾಳ್ಕರ್ | Oneindia kannada
ಬೆಳಗಾವಿ, ಜೂನ್. 08 : ಎಂಎಲ್ ಸಿ ಕೋಟಾದಡಿಯಲ್ಲಿ ಸಚಿವ ಸ್ಥಾನ ನೀಡುವುದಿಲ್ಲ ಎಂದು ಮೊಟಮ್ಮ ಅವರಿಗೆ ಸ್ಥಾನ ತಪ್ಪಿಸಿದ್ದಾರೆ. ಆದರೆ ಏಕಾಏಕಿ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿರುವುದು ಅಚ್ಚರಿ ತಂದಿದೆ ಎಂದು ಕಾಂಗ್ರೆಸ್ ಮುಖಂಡರ ವಿರುದ್ಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಅವರು ಯಾವ ಮಾನದಂಡದ ಮೇಲೆ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ ಗೊತ್ತಾಗುತ್ತಿಲ್ಲ. ನಾನು ಪಕ್ಷಕ್ಕಾಗಿ ದುಡಿದಿದ್ದೇನೆ ನನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಬೇಸರ ತಂದಿದೆ.
ಕಾಂಗ್ರೆಸ್ ನಲ್ಲಿ ಯಾರು ರೂಲ್ಸ್ ಮಾಡ್ತಾರೊ, ಯಾರು ಮುರಿತಾರೋ ಎಂಬುದೇ ಯಕ್ಷ ಪ್ರಶ್ನೆ ಆಗಿದೆ. ಕಾಣುವ ಮತ್ತು ಕಾಣದ ಕೈಗಳು ಕೆಲಸ ಮಾಡಿ ನನಗೆ ಸಚಿವ ಸ್ಥಾನ ತಪ್ಪಿಸಿದ್ದಾರೆ.

ಪಕ್ಷದ ಸಭೆಯಲ್ಲಿ ನನಗೆ ಅಗಿರುವ ಅನ್ಯಾದ ವಿರುದ್ಧ ಪ್ರಶ್ನಿಸುತ್ತೇನೆ. ಸಚಿವೆ ಆಗಬೇಕು ಅಂತ ಬಹಳಷ್ಟು ಆಸೆ ಇಟ್ಟುಕೊಂಡಿದ್ದೆ. ನನಗೆ ಭರವಸೆಯನ್ನೂ ಕೊಟ್ಟಿದ್ದರು ಎಂದು ಅವರು ತಿಳಿಸಿದರು.












Click it and Unblock the Notifications