ಸಾಮೂಹಿಕ ರಾಜೀನಾಮೆಗೆ ಮುಂದಾದ ಸತೀಶ್ ಜಾರಕಿಹೊಳಿ ಬೆಂಬಲಿಗರು
Recommended Video

ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಸಾಮೂಹಿಕ ರಾಜೀನಾಮೆ ನಿರ್ಧಾರ | Oneindia kannada
ಬೆಳಗಾವಿ, ಜೂನ್.08 : ಶಾಸಕ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಜಿಪಂ, ತಾಪಂ, ಎಪಿಎಂಸಿ ಸದಸ್ಯರು, ಯಮಕನಮರ್ಡಿ ಮತ್ತು ಕಾಕತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ಒಟ್ಟು 50 ಜನ ಸಾಮೂಹಿಕ ರಾಜೀನಾಮೆಗೆ ಸಿದ್ಧತೆ ನಡೆಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕೆಪಿಸಿಸಿ ಸದಸ್ಯ ಮಲ್ಲಗೌಡ ಪಾಟೀಲ್, ಸತೀಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ಕೈತಪ್ಪಿದ್ದು ನೋವುಂಟು ಮಾಡಿದೆ. ಮಧ್ಯಾಹ್ನ ಸಭೆ ಸೇರಿ ಸಾಮೂಹಿಕ ರಾಜೀನಾಮೆಗೆ ಪತ್ರ ತಯಾರಿ ನಡೆಸುತ್ತೇವೆ.
ಸಂಜೆ ಶಾಸಕ ಸತೀಶ್ ಜಾರಕಿಹೊಳಿಯವರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸತೀಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಆಕ್ರೋಶಗೊಂಡ ಬೆಂಬಲಿಗರು ಗುರುವಾರ ಮಧ್ಯಾಹ್ನ ಗ್ರಾಮೀಣ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ದಾಂಧಲೆ ನಡೆಸಿದ್ದರು. ಕಾಂಗ್ರೆಸ್ ಕಚೇರಿಗೆ ಹಾಕಿದ್ದ ಬ್ಯಾನರ್ ಹರಿದು, ಹೂವಿನ ಕುಂಡಲಿಗಳನ್ನ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದರು.












Click it and Unblock the Notifications