ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಖನ್ ಜಾರಕಿಹೊಳಿ ಜೊತೆ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

|
Google Oneindia Kannada News

ಬೆಳಗಾವಿ, ನವೆಂಬರ್ 18: ಅಚ್ಚರಿಯ ಬೆಳವಣಿಗೆಯಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಅವರ ಸಹೋದರ ಶಾಸಕ ಸತೀಶ್ ಜಾರಕಿಹೊಳಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸುತ್ತಿರುವ ರಮೇಶ್ ಜಾರಕಿಹೊಳಿ ವಿರುದ್ಧ ಲಖನ್ ಜಾರಕಿಹೊಳಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಆಗಿದ್ದಾರೆ. ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅವರ ಅವರು ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ಅವರೂ ಸಹ ನಾಮಪತ್ರ ಸಲ್ಲಿಸಿದ್ದಾರೆ.

ಲಖನ್ V/S ರಮೇಶ್: ಗೋಕಾಕ್ ಚುನಾವಣೆ ಕುತೂಹಲದ ಕಣಲಖನ್ V/S ರಮೇಶ್: ಗೋಕಾಕ್ ಚುನಾವಣೆ ಕುತೂಹಲದ ಕಣ

ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದ ಶಾಸಕರಾಗಿದ್ದು, ಸಹೋದರ ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲೇ ಬೇಕೆಂದು ಪಣ ತೊಟ್ಟು ತಮ್ಮ ಸಹೋದರ ಲಖನ್ ಜಾರಕಿಹೊಳಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸುವಲ್ಲಿ ಸಫಲರಾಗಿದ್ದಾರೆ. ಆದರೆ ಇಂದು ಅವರೇ ನಾಮಪತ್ರ ಸಲ್ಲಿಸಿರುವುದು ಕುತೂಹಲ ಕೆರಳಿಸಿದೆ.

MLA Satish Jarkiholi Filed Nomination Against His Brother Ramesh Jarkiholi

ಹಾಗೊಮ್ಮೆ ಲಖನ್ ಜಾರಕಿಹೊಳಿ ಅವರ ನಾಮಪತ್ರ ತಿರಸ್ಕೃತವಾದರೆ ಆಪತ್ಕಾಲಕ್ಕೆ ಇರಲೆಂಬ ಕಾರಣದಿಂದ ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದ್ದಾರೆಯೇ ಹೊರತು, ಅವರು ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಅಲ್ಲ.

ಸತೀಶ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಸಿದ್ದಾರಾದರೂ ಇನ್ನೆರಡು-ಮೂರು ದಿನಗಳಲ್ಲಿ ನಾಮಪತ್ರವನ್ನು ವಾಪಸ್ ಪಡೆಯಲಿದ್ದಾರೆ. ಲಖನ್ ಜಾರಕಿಹೊಳಿ ಅವರ ನಾಮಪತ್ರದಲ್ಲಿ ಲೋಪದೋಷಗಳು ಕಂಡು ಬಂದು ತಿರಸ್ಕಾರವಾಗುವ ಭೀತಿ ಇದ್ದರೆ ಮಾತ್ರವಷ್ಟೆ ಸತೀಶ್ ಜಾರಕಿಹೊಳಿ ಅವರ ನಾಮಪತ್ರ ಮುಂದುವರೆದು ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆದರೆ ಈ ಸಾಧ್ಯತೆ ಬಹಳ ಕಡಿಮೆ.

"ಲಖನ್ ಬೆನ್ನಿಗೆ ಚೂರಿ ಹಾಕಿದ" ಎಂದು ಮಾತಿನಲ್ಲೇ ಇರಿದ ರಮೇಶ್ ಜಾರಕಿಹೊಳಿ

ಮೈತ್ರಿ ಸರ್ಕಾರ ಬೀಳಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸತೀಶ್ ಜಾರಕಿಹೊಳಿ ಇದೀಗ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದು ಅವರೂ ಸಹ ಇಂದೇ ನಾಮಪತ್ರ ಸಲ್ಲಿಸಿದ್ದಾರೆ. ಅವರ ಎದುರಾಗಿ ಅವರ ಸಹೋದರರೇ ಆಗಿರುವ ಲಖನ್ ಜಾರಕಿಹೊಳಿ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿ ಆಗಿದ್ದಾರೆ. ಅವರಿಗೆ ಸತೀಶ್ ಜಾರಕಿಹೊಳಿ ಬೆಂಬಲವಾಗಿ ನಿಂತಿದ್ದಾರೆ.

ಗೋಖಾಕ್‌ ಕಣದಲ್ಲಿ ಸಹೋದರರ ಸವಾಲ್ ಏರ್ಪಟ್ಟಿದ್ದು, ಲಖನ್ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಕಾಂಗ್ರೆಸ್‌ ಕಡೆ ಇದ್ದರೆ. ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಬಿಜೆಪಿ ಕಡೆ ಇದ್ದಾರೆ. ಆದರೆ ಬಾಲಚಂದ್ರ ಜಾರಕಿಹೊಳಿ ಚುನಾವಣೆ ಸಮಯದಲ್ಲಿ ಮುನ್ನೆಲೆಗೆ ಬರದೇ ಇರುವುದು ಆಶ್ಚರ್ಯ ಮೂಡಿಸಿದೆ.

English summary
Yamakanamaradi congress MLA Satish Jarkiholi today filed nomination for by election from Gokak against his brother Ramesh Jarkiholi. But he his not official candidate of congress, Lakhan jarkiholi is the official candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X