ಈವ್ ಟೀಸಿಂಗ್; ಬೆಳಗಾವಿಯ ಹಾಸ್ಟೆಲ್ ಗೆ ರಾತ್ರೋರಾತ್ರಿ ನುಗ್ಗಿ ದಾಂಧಲೆ
ಬೆಳಗಾವಿ, ಫೆಬ್ರವರಿ 24: ಇಪ್ಪತ್ತಕ್ಕೂ ಹೆಚ್ಚು ಯುವಕರು ಬೆಳಗಾವಿಯ ಸಂಗಮೇಶ್ವರ ನಗರದಲ್ಲಿನ ಡಾ.ಬಿ.ಆರ್. ಅಂಬೇಡ್ಕರ್ ಹಾಸ್ಟೆಲ್ ಗೆ ನುಗ್ಗಿ ದಾಂಧಲೆ ನಡೆಸಿರುವ ಸಂಗತಿ ಭಾನುವಾರ ರಾತ್ರಿ ನಡೆದಿದೆ. ಈ ದೃಶ್ಯ ಸಿಸಿ ಟಿ.ವಿಯಲ್ಲಿ ಸೆರೆಯಾಗಿದೆ.
ಹಾಸ್ಟೆಲ್ ನಲ್ಲಿದ್ದ ಇಬ್ಬರು, ಹುಡುಗಿಯೊಬ್ಬಳನ್ನು ಚುಡಾಯಿಸಿದ್ದಕ್ಕೆ ಈ ರೀತಿ ಹಾಸ್ಟೆಲ್ ಗೆ ಯುವಕರು ನುಗ್ಗಿ ಹೆದರಿಸಿರುವುದಾಗಿ ತಿಳಿದುಬಂದಿದೆ. ಈ ಘಟನೆಯಿಂದಾಗಿ ಕೆಲವು ವಾಹನಗಳಿಗೆ ಹಾನಿಯಾಗಿದೆ. ಆದರೆ ಯಾರಿಗೂ ತೊಂದರೆಯಾಗಿಲ್ಲ.
ರಾಡ್, ಕ್ರಿಕೆಟ್ ಬ್ಯಾಟ್ ಹಿಡಿದು ಯುವಕರು ಭಾನುವಾರ ರಾತ್ರಿ ಸುಮಾರು 10ಕ್ಕೆ ಹಾಸ್ಟೆಲ್ ಪ್ರವೇಶಿಸಿದ್ದಾರೆ. ಭಯಗೊಂಡ ವಿದ್ಯಾರ್ಥಿಗಳು ಹಾಸ್ಟೆಲ್ ನ ಒಂದು ರೂಮಿನಲ್ಲಿ ಸೇರಿಕೊಂಡಿದ್ದಾರೆ. ಆ ರೂಮಿನ ಕಿಟಕಿ ಹಾಗೂ ಬಾಗಿಲಿನ ಮೇಲೆ ಈ ಯುವಕರು ಕಲ್ಲು ಎಸೆದಿದ್ದಾರೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಉಮಾ ಸಾಲಿಗೌಡರ್ ಹಾಸ್ಟೆಲ್ ಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾರೆ.

ಈ ಘಟನೆ ಕುರಿತು ತನಿಖೆಗೆ ಪೊಲೀಸ್ ಕಮಿಷನರ್ ಲೋಕೇಶ್ ಕುಮಾರ್ ಆದೇಶಿಸಿದ್ದಾರೆ. ಈ ಹಾಸ್ಟೆಲ್ ನ ಯಾರ ವಿರುದ್ಧವೂ ಯಾವುದೇ ದೂರು ದಾಖಲಾಗಿಲ್ಲ ಎಂದು ಎಪಿಎಂಸಿ ಪೊಲೀಸರು ತಿಳಿಸಿದ್ದಾರೆ. ತನಿಖೆ ಮುಂದುವರೆದಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications