ಮೋದಿ ಕಾರ್ಯಕ್ರಮ; ವಿದ್ಯಾರ್ಥಿಗಳಿಗೆ ಷರತ್ತು, ಕಾಂಗ್ರೆಸ್ ಗರಂ!

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ.

ಬೆಳಗಾವಿ, ಫೆಬ್ರವರಿ 26; ಭಾರತದ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಬೆಳಗಾವಿ ಮತ್ತು ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಕೆಲವು ಷರತ್ತುಗಳನ್ನು ಹಾಕಲಾಗಿದೆ. ಇದಕ್ಕೆ ಕರ್ನಾಟಕ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಕರ್ನಾಟಕದ ಬಿಜೆಪಿಯನ್ನು ಪ್ರಶ್ನೆ ಮಾಡಿದೆ.

ಫೆಬ್ರವರಿ 27ರ ಮಧ್ಯಾಹ್ನ ಬೆಳಗಾವಿಯ ಮಾಲಿನಿ ಸಿಟಿ ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಹೃತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವ ಮೋದಿ, ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸುವರು ಎಂಬ ಮಾಹಿತಿ ಇದೆ. ಬೆಳಗಾವಿಯಲ್ಲಿ ಮೋದಿ ಕಾರ್ಯಕ್ರಮಕ್ಕೆ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

Modi Belagavi Visit On February 27 Instructions To Students

ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಬೆಳಗಾವಿಯಲ್ಲಿ ನಡೆಯಬೇಕಿದ್ದ ಪ್ರಥಮ ಪಿಯುಸಿ ಅಕೌಂಟನ್ಸಿ, ಗಣಿತದ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾರ್ಚ್‌ 6ರಂದು ಈ ಪರೀಕ್ಷೆ ನಡೆಸುವುದಾಗಿ ಸುತ್ತೋಲೆಯಲ್ಲಿ ಮಾಹಿತಿ ನೀಡಲಾಗಿದೆ. ನರೇಂದ್ರ ಮೋದಿ ಕಾರಣಕ್ಕೆ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದಕ್ಕೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.

ಮತ್ತೊಂದು ಕಡೆ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಷರತ್ತುಗಳನ್ನು ಹಾಕಲಾಗಿದೆ. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಭಾನುವಾರ ಟ್ವೀಟ್ ಮಾಡಿರುವ ಪಕ್ಷ, 'ವಿದ್ಯಾರ್ಥಿಗಳೇನು ಬಿಜೆಪಿಯ ಕಾಲಾಳುಗಳೇ @BSBommai ಅವರೇ?. ಪರೀಕ್ಷೆಯ ಆತಂಕದಲ್ಲಿರುವ ವಿದ್ಯಾರ್ಥಿಗಳನ್ನ ಖಾಲಿ ಕುರ್ಚಿ ತುಂಬಿಸಲು ಕರೆಸುವುದಕ್ಕೆ ನಾಚಿಕೆ ಎನಿಸುವುದಿಲ್ಲವೇ?. ಯಾವುದೇ ಕಾರಣಕ್ಕೂ ಸಮವಸ್ತ್ರ ಹಾಗೂ ಕಪ್ಪು ಬಟ್ಟೆ ಧರಿಸಬಾರದು ಎಂದಿರುವುದೇಕೆ?. ವಿದ್ಯಾರ್ಥಿಗಳನ್ನು ಗುರುತು ಸಿಕ್ಕರೆ ಮರ್ಯಾದೆ ಹೋಗುತ್ತದೆ ಎಂಬ ದುರಾಲೋಚನೆಯೇ?' ಎಂದು ಪ್ರಶ್ನೆ ಮಾಡಲಾಗಿದೆ.

ಷರತ್ತುಗಳು ಏನು?; ಕಾಂಗ್ರೆಸ್ ಮಾಡಿರುವ ಟ್ವೀಟ್‌ನಲ್ಲಿ ವಿದ್ಯಾರ್ಥಿಗಳಿಗೆ ಹಾಕಿರುವ ಷರತ್ತುಗಳ ಮಾಹಿತಿ ಇದೆ. ದಿನಾಂಕ 27/02/2023 ರಂದು ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲಾ ವಿದ್ಯಾರ್ಥಿಗಳು ಈ ಕೆಳಕಂಡ ಷರತ್ತುಗಳನ್ನು ಪಾಲಿಸಲು ಸೂಚಿಸಲಾಗಿದೆ ಎಂಬ ಬರಹ ಅದರಲ್ಲಿದೆ.

Modi Belagavi Visit On February 27 Instructions To Students

ವಿದ್ಯಾರ್ಥಿಗಳು ಬೆಳಗ್ಗೆ 7.45ಕ್ಕೆ ಕಾಲೇಜಿನ ಆವರಣದಲ್ಲಿ ಹಾಜರಿರಬೇಕು. ಬೆಳಗ್ಗೆ 7.45ಕ್ಕೆ ಕಾಲೇಜಿನ ಆವರಣದಲ್ಲಿ ಲಘು ಉಪಹಾರದ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿಗಳು ಕಪ್ಪು ಬಟ್ಟೆಯನ್ನು ಹೊರತುಪಡಿಸಿ ಉಳಿದ ಯಾವುದೇ ವರ್ಣದ ಬಟ್ಟೆಯನ್ನು ಧರಿಸತಕ್ಕದ್ದು. ಮೊಬೈಲ್ ಫೋನ್‌ನನ್ನು ಹೊರತುಪಡಿಸಿ ಉಳಿದ ಯಾವುದೇ ವಸ್ತುವನ್ನು ತೆಗೆದುಕೊಂಡು ಬರಬಾರದು ಎಂದು ಷರತ್ತು ಹಾಕಲಾಗಿದೆ.

ಅಲ್ಲದೇ ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಕಾಲೇಜಿನ ಸಮವಸ್ತ್ರವನ್ನು ಧರಿಸತಕ್ಕದ್ದಲ್ಲ. ಬಸ್ ನಂ.01 ಮತ್ತು 02 ರಲ್ಲಿ ತಲಾ 75 ವಿದ್ಯಾರ್ಥಿಗಳಿಗೆ ಅವಕಾಶವಿರುತ್ತದೆ. ತಡವಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ಅವಕಾಶವಿರುವುದಿಲ್ಲ. ಕಾರ್ಯಕ್ರಮ ಮುಗಿದ ನಂತರ ವಿದ್ಯಾರ್ಥಿಗಳು ತೆರಳಿದ ಬಸ್ಸಿನಲ್ಲಿಯೇ ಹಿಂತಿರುಗುವುದು. ಇತರೆ ಷರತ್ತುಗಳನ್ನು ಪಾಲಿಸುವುದು ಎಂದು ತಿಳಿಸಲಾಗಿದೆ.

ಕಾಂಗ್ರೆಸ್ ಸರಣಿ ಟ್ವೀಟ್; ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಬಳಕೆ ಮಾಡಿಕೊಳ್ಳುವುದಕ್ಕೆ ಕರ್ನಾಟಕ ಕಾಂಗ್ರೆಸ್ ಸರಣಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ. 'ಗಾಂಪರ ಗುಂಪಾದ ಬಿಜೆಪಿಗೆ ತಿಳಿದಿರುವುದು ಕಮಿಷನ್ ಲೂಟಿಯೇ ಹೊರತು ಶಿಕ್ಷಣದ ಮಹತ್ವವಲ್ಲ. ಶಿವಮೊಗ್ಗದ ಪ್ರಧಾನಿ ಕಾರ್ಯಕ್ರಮದ ಕುರ್ಚಿ ತುಂಬಿಸಲು ಶಾಲಾ, ಕಾಲೇಜು ವಿದ್ಯಾರ್ಥಿಗಳನ್ನು ಕರೆಸಲು ಆದೇಶಿಸಿದೆ. ಬೆಳಗಾವಿಯಲ್ಲಿ ಪಿಯುಸಿ ಪರೀಕ್ಷೆಯನ್ನೇ ಮುಂದೂಡಿದೆ. ಪ್ರಧಾನಿಯ ಶೋಕಿಗಾಗಿ ವಿದ್ಯಾರ್ಥಿಗಳ ಭವಿಷ್ಯ ಬಲಿ ಕೊಡುವುದು ನಾಚಿಕೆಗೇಡು' ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

'ಪ್ರಧಾನಿ ಹೇಳುವುದು "ಪರೀಕ್ಷಾ ಪೇ ಚರ್ಚಾ" ಮಾಡುವುದು "ಪರೀಕ್ಷಾ ಮೇ ಆಕ್ರಮಣ್"!! ಪ್ರಧಾನಿಯ ರೋಡ್ ಶೋಗಾಗಿ ಪ್ರಥಮ ಪಿಯುಸಿಯ ಪರೀಕ್ಷೆಗಳನ್ನು ಮುಂದೂಡಿದ @BJP4Karnataka ವಿದ್ಯಾರ್ಥಿಗಳ ಬದುಕಿಗೆ ಕಲ್ಲು ಹಾಕಲು ಹೇಸುವುದಿಲ್ಲ ಎಂಬುದನ್ನು ಸಾಬೀತುಪಡಿಸಿದೆ. ಮೋದಿಯ ಪ್ರಚಾರದ ಹಪಹಪಿತನಕ್ಕೆ ವಿದ್ಯಾರ್ಥಿಗಳ ಭವಿಷ್ಯ ಕಿತ್ತುಕೊಳ್ಳಲಾಗುತ್ತಿದೆ' ಎಂದು ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ ಕಾಂಗ್ರೆಸ್, ' ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿಯುವುದುದಾದರೂ ಹೇಗೆ!. ವಿದ್ಯಾರ್ಥಿಗಳ ಭವಿಷ್ಯ ಬಲಿಕೊಟ್ಟು ಶೋಕಿ ನಡೆಸಲು ಹೊರಟಿರುವ @BSBommai ಅವರೇ, ತಮಗೆ ಚುನಾವಣಾ ಪ್ರಚಾರ ಮುಖ್ಯವೇ? ವಿದ್ಯಾರ್ಥಿಗಳ ಭವಿಷ್ಯ ಮುಖ್ಯವೇ? ಸ್ಪಷ್ಟಪಡಿಸಿ. @narendramodi ಅವರು "ನಾ ಪಡುಂಗಾ, ನಾ ಪಡನೆದುಂಗಾ" ಎನ್ನಲು ಹೊರಟಿದ್ದಾರೆಯೇ @BJP4Karnataka?' ಎಂದು ಕಾಂಗ್ರೆಸ್ ಕೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+