ಬೆಳಗಾವಿ: ಲಾರಿ ಪಲ್ಟಿ, 40ಕ್ಕೂ ಹೆಚ್ಚು ಕುರಿಗಳು ಸಾವು
ಬೆಳಗಾವಿ, ಜೂನ್ 26 : ಇಲ್ಲಿನ ಇಟಗಿ ಕ್ರಾಸ್ ಬಳಿ ಸೋಮವಾರ ಬೆಳಗ್ಗೆ ರಂಜಾನ್ ಹಬ್ಬಕ್ಕೆಂದು ಕುರಿ ಹಾಗೂ ಮೇಕೆ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾಗಿದೆ.
ಘಟನೆಯಲ್ಲಿ 40 ಕ್ಕೂ ಹೆಚ್ಚು ಕುರಿಗಳು ಸಾವನಪ್ಪಿವೆ. 30 ಕುರಿಗಳ ಸ್ಥಿತಿ ಗಂಭೀರವಾಗಿದೆ. ಮಳೆ ಸುರಿಯುತ್ತಿದ್ದರಿಂದ ಚಾಲಕ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಇನ್ನು ಲಾರಿ ಪಲ್ಟಿಯಾಗುತ್ತಿದ್ದಂತೆ ಕೆಲವು ಸ್ಥಳೀಯರು ಕುರಿಗಳನ್ನ ಕದ್ದೊಯ್ದಿದ್ದಾರೆ ಅನ್ನೋ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆ ಸಂಬಂಧ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications