ಬೆಳಗಾವಿಯಲ್ಲಿ ಕಲುಷಿತ ನೀರು ಸೇವಿಸಿ 50ಕ್ಕೂ ಅಧಿಕ ಜನರು ಅಸ್ವಸ್ಥ

ಬೆಳಗಾವಿ ಅಕ್ಟೋಬರ್‌ 27: ಕಲುಷಿತ ನೀರು ಸೇವಿಸಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಈಗ ಅನಾರೋಗ್ಯದಿಂದ ಜನರು ಬಳಲುತ್ತಿದ್ದಾರೆ.

ನಲ್ಲಿಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. 3 ದಿನಗಳ ಅಂತರದಲ್ಲಿ ಸುಮಾರು 50ಕ್ಕೂ ಹೆಚ್ಚು ಜನರ ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡಿರುವ ಗ್ರಾಮಸ್ಥರನ್ನು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿರುವವವರ ಯೋಗ ಕ್ಷೇಮ ವಿಚಾರಿಸಿದ ಶಾಸಕರು ರೋಗಿಗಳಿಗೆ ಸೂಕ್ತ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ರಾಮದುರ್ಗದ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 More Than 50 People Hospitalized After Drinking Polluted Water

ಈ ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಅಸ್ವಸ್ಥರ ಕುಟುಂಬಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲ್ಲೂಕುಗಳಿಗೆ ಜಲಜೀವನ ಮಿಷನ್ ಅಡಿ ಕುಡಿಯುವ ನೀರಿನ ಒದಗಿಸುವ ಯೋಜನೆಗಾಗಿ ಒಟ್ಟು 960 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದರು.

ಕಿತ್ತೂರಿಗೆ ಏತ ನೀರಾವರಿ ಯೋಜನೆಗೆ 580 ಕೊಟಿ ರೂಪಾಯಿ ಹಣ ಹಾಗೂ ರಾಜ್ಯದಲ್ಲಿ ಕುಡಿಯುವ ನೀರಿನ ಯೋಜನೆ ಜಲ ಜೀವನ್ ಮಿಷನ್ ಅಡಿ 9,000 ಕೋಟಿ ರೂಪಾಯಿಗಳಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ‌ಯೋಜನೆ ಮಂಜೂರಿನ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದರು. ರಾಜ್ಯ ಸರ್ಕಾರ ಗ್ರಾಮೀಣ ಭಾಗದ ಜನರಿಗೂ ಶುದ್ಧ ಕುಡಿಯುವ ನೀರಿ ವ್ಯವಸ್ಥೆ ಮಾಡಬೇಕು ಎಂದು ಸಜ್ಜಾಗುತ್ತಿರುವ ಬೆನ್ನಲ್ಲೇ ಈ ದುರ್ಘಟನೆ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+