ಬೆಳಗಾವಿಗೆ ನುಗ್ಗಲು ಯತ್ನಿಸಿದ 50ಕ್ಕೂ ಹೆಚ್ಚು ಶಿವಸೇನೆ ಕಾರ್ಯಕರ್ತರ ಬಂಧನ

ಬೆಳಗಾವಿ, ನವೆಂಬರ್‌ 1: ಬೆಳಗಾವಿ ಜಿಲ್ಲೆಗೆ ಪ್ರವೇಶಿಸಲು ಯತ್ನಿಸಿದ 50 ಕ್ಕೂ ಹೆಚ್ಚು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸದಸ್ಯರನ್ನು ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಬಂಧಿಸಲಾಗಿದೆ.

ಬುಧವಾರ ಬೆಳಗ್ಗೆ ಬೆಳಗಾವಿಯಲ್ಲಿ ಮರಾಠಿ ಪರವಾದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಆಯೋಜಿಸಿದ್ದ 'ಕಪ್ಪು ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಬರುತ್ತಿದ್ದರು, ಬೆಳಗಾವಿ ಮತ್ತು 840 ಗ್ರಾಮಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸಲು ಕ್ರಮ ಕೈಗೊಳ್ಳದ ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಶಿವಸೇನಾ (ಯುಬಿಟಿ) ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.

more-than-50-shiv-sena-workers

ಘೋಷಣೆ ಕೂಗುತ್ತ ರಾಷ್ಟ್ರೀಯ ಹೆದ್ದಾರಿ (NH) 48 ರಲ್ಲಿ ಸಂಚಾರ ಸ್ಥಗಿತಗೊಳಿಸಲು ಮುಂದಾದ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿ ಕಾಗಲ್‌ಗೆ ಕರೆದೊಯ್ದರು. ಬಂಧಿತರಲ್ಲಿ ಉದ್ಧವ್ ಠಾಕ್ರೆ ಬಣದ ಶಿವಸೇನೆ ಕೊಲ್ಹಾಪುರ ಜಿಲ್ಲಾಧ್ಯಕ್ಷ ವಿಜಯ್ ದೇವಾನೆ ಕೂಡ ಸೇರಿದ್ದಾರೆ.

ಕನ್ನಡ ರಾಜ್ಯೋತ್ಸವದ ಆಚರಿಸಿರುವುದರ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ 'ಕಪ್ಪು ದಿನ' ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಂಇಎಸ್ ಹಲವು ಮಹಾರಾಷ್ಟ್ರ ನಾಯಕರಿಗೆ ಆಹ್ವಾನ ನೀಡಿತ್ತು. ಈ ಹಿಂದೆ ಬೆಳಗಾವಿ ಮತ್ತು ಇತರ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ವಿಲೀನಗೊಳಿಸುವ ಎಂಇಎಸ್‌ನ ಹೋರಾಟವನ್ನು ಬೆಂಬಲಿಸಲು ತಮ್ಮ ಸರ್ಕಾರ ಪ್ರತಿನಿಧಿಯನ್ನು ಕಳುಹಿಸುತ್ತದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿದ್ದರು.

ಬೆಳಗಾವಿ ಜಿಲ್ಲಾಡಳಿತವು ಮಹಾರಾಷ್ಟ್ರದ ಮೂವರು ಸಚಿವರು ಮತ್ತು ಲೋಕಸಭಾ ಸಂಸದರನ್ನು ನವೆಂಬರ್ 2 ರವರೆಗೆ ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಿದೆ. ಎಂಇಎಸ್‌ಗೆ 'ಕರಾಳ ದಿನ' ಆಚರಿಸಲು ಜಿಲ್ಲಾಡಳಿತ ಅನುಮತಿ ನೀಡಿಲ್ಲ, ಸದಸ್ಯರು ಕಾರ್ಯಕ್ರಮಕ್ಕೆ ಮುಂದಾದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಳಗಾವಿ ಜಿಲ್ಲೆಯಾದ್ಯಂತ ಗಡಿ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಎಂಇಎಸ್ ಕಾರ್ಯಕ್ರಮಕ್ಕೆ ಮಹಾರಾಷ್ಟ್ರದ ಸಚಿವರಾದ ಶಂಭುರಾಜೇ ದೇಸಾಯಿ, ಚಂದ್ರಕಾಂತ್ ಪಾಟೀಲ್, ದೀಪಕ್ ಕೇಸರಕರ್ ಮತ್ತು ಸಂಸದ ಧೈರ್ಯಶೀಲ ಮಾನೆ ಅವರನ್ನುಆಹ್ವಾನಿಸಲಾಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಕಾಪಾಡಲು ಮೂವರು ಸಚಿವರು ಮತ್ತು ಸಂಸದರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಅವರು ಕನ್ನಡ ಕಾರ್ಯಕರ್ತರನ್ನು ಭೇಟಿ ಮಾಡಿದರೆ ಎಂಇಎಸ್ ಕಾರ್ಯಕರ್ತರೊಂದಿಗೆ ಘರ್ಷಣೆಗೆ ಕಾರಣವಾಗುವ ಸಾಧ್ಯತೆಯಿದೆ. ಹೀಗಾಗಿ ಅಕ್ಟೋಬರ್ 31 ರಿಂದ 48 ಗಂಟೆಗಳ ಕಾಲ ಬೆಳಗ್ಗೆ 6 ಗಂಟೆಯವರೆಗೆ ಪ್ರವೇಶ ನಿಷೇಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+