ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಮಹಾರಾಷ್ಟ್ರದಿಂದ ಬೆಳಗಾವಿಗೆ ಬಸ್ ಸಂಚಾರ ಸ್ಥಗಿತ

|
Google Oneindia Kannada News

ಬೆಳಗಾವಿ, ನವೆಂಬರ್ 25; ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಸುಮಾರು 300 ಬಸ್‌ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರ್ನಾಟಕದ ಬಸ್‌ಗಳಿಗೆ ಔರಂಗಾಬಾದ್ ಜಿಲ್ಲೆಯ ದೌಂಡ್‌ ಗ್ರಾಮದಲ್ಲಿ ಕಪ್ಪು ಮಸಿ ಬಳಿದ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕದಲ್ಲಿಯೂ ಮಹಾರಾಷ್ಟ್ರದ ಬಸ್‌ಗಳಿಗೆ ಮಸಿ ಬಳಿಯುವ ಆತಂಕ ಇರುವ ಹಿನ್ನಲೆಯಲ್ಲಿ ಮಹಾರಾಷ್ಟ್ರದಿಂದ ಬೆಳಗಾವಿಗೆ ಬರಬೇಕಿದ್ದ ಬಸ್ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ನಗರ ಕೇಂದ್ರ ಬಸ್ ನಿಲ್ದಾಣಕ್ಕೆ ಸಹ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಆದೇಶದಂತೆ ಬೆಳಗಾವಿಗೆ ಬರಬೇಕಿದ್ದ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿನಿತ್ಯ ಪಕ್ಕದ ರಾಜ್ಯದಿಂದ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹಲವು ಬಸ್‌ಗಳು ಆಗಮಿಸುತ್ತಿದ್ದವು.

MSRTC Buses To Belagavi Stopped By Maharashtra Govt

ಆದರೆ ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಎದಿನಂತೆ ಇದೆ. ದೌಂಡ್‌ ಗ್ರಾಮದಲ್ಲಿ ಕರ್ನಾಟಕ ಬಸ್‌ಗಳಿಗೆ ಕಪ್ಪು ಮಸಿ ಬಳಿದ, ಮರಾಠಿ ಪರವಾದ ಬರಹ ಬರೆದ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಂಡಿಸಿದ್ದಾರೆ.

ಬೆಳಗಾವಿಯಲ್ಲಿ ಕನ್ನಡ ಪರ ಹೋರಾಟಗಾರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದಾರೆ. ಮಹಾರಾಷ್ಟ್ರದ ಬಸ್‌ಗಳ ಮೇಲೆ ಬರಹ ಬರೆಯದಂತೆ ಹೋರಾಟಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಎರಡೂ ರಾಜ್ಯಗಳ ನಡುವಿನ ಸಂಚಾರಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

English summary
Maharashtra State Road Transport Corporation (MSRTC) buses to Belagavi stopped after painting of Karnataka buses with pro-Maharashtra slogans incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X