ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಉಪ ಚುನಾವಣೆ; ಬರಲಿದೆ ಹೊಸ ಕೋವಿಡ್ ಮಾರ್ಗಸೂಚಿ

|
Google Oneindia Kannada News

ಬೆಳಗಾವಿ, ಮಾರ್ಚ್ 18; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ ಸೇರಿದಂತೆ ಚುನಾವಣಾ ಚಟುವಟಿಕೆಗಳಿಗೆ ಹೊಸ ಮಾರ್ಗಸೂಚಿ ಬರಲಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದ್ದು, ಮೇ 2ರಂದು ಮತ ಎಣಿಕೆ ನಡೆಯಲಿದೆ.

ಬೆಳಗಾವಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಎಂ. ಜಿ. ಹಿರೇಮಠ ಈ ಕುರಿತು ಮಾಹಿತಿ ನೀಡಿದ್ದಾರೆ. ಲೋಕಸಭಾ ಉಪ ಚುನಾವಣೆ ಕುರಿತು ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಿದರು.

ಬೆಳಗಾವಿ ಲೋಕಸಭೆ ಉಪ ಚುನಾವಣೆ ದಿನಾಂಕ ಘೋಷಣೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ದಿನಾಂಕ ಘೋಷಣೆ

"ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. ನೀತಿಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವನಿಕರಿಂದ ದೂರು ಸ್ವೀಕರಿಸಲು ಅನುಕೂಲವಾಗುವಂತೆ ನಿಯಂತ್ರಣ ಕೊಠಡಿಯನ್ನು ಆರಂಭಿಸಬೇಕು" ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಗಾವಿ ಪಾಲಿಕೆ ಎದುರು ಭಗವಾ ಧ್ವಜ ನೆಡಲು ಎಂಇಎಸ್ ಯತ್ನ, ಹೈಡ್ರಾಮಾ ಬೆಳಗಾವಿ ಪಾಲಿಕೆ ಎದುರು ಭಗವಾ ಧ್ವಜ ನೆಡಲು ಎಂಇಎಸ್ ಯತ್ನ, ಹೈಡ್ರಾಮಾ

New SOP For Belagavi Loksabha Seat By Elections

"ಚುನಾವಣಾ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿಯನ್ನು ನೀಡಲಾಗುವುದು" ಎಂದು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಿದರು.

ಕೋವಿಡ್ ಲಸಿಕೆ ಪಡೆಯಿರಿ: 25 ಸಾವಿರ ಮಕ್ಕಳಿಂದ ಪೋಷಕರಿಗೆ ಪತ್ರ ಕೋವಿಡ್ ಲಸಿಕೆ ಪಡೆಯಿರಿ: 25 ಸಾವಿರ ಮಕ್ಕಳಿಂದ ಪೋಷಕರಿಗೆ ಪತ್ರ

ಕೋವಿಡ್ ಪರಿಸ್ಥಿತಿ ಹಿನ್ನೆಲೆಯಲ್ಲಿ 80 ವರ್ಷ ಮೇಲ್ಪಟ್ಟವರು, ಕೋವಿಡ್ ಸೋಂಕಿತರು ಹಾಗೂ ವಿಕಲಚೇತನರಿಗೆ ಪೋಸ್ಟಲ್ ಬ್ಯಾಲೆಟ್ ಒದಗಿಸಲು ಚುನಾವಣಾ ಆಯೋಗದ ಮಾರ್ಗಸೂಚಿಗಳ ಪ್ರಕಾರ ಕ್ರಮ ಕೈಗೊಂಡು ಮತದಾರರ ಪಟ್ಟಿಯಲ್ಲಿ ಗುರುತು ಮಾಡಲು ನಿರ್ದೇಶನ ನೀಡಲಾಗಿದೆ.

ಮಸ್ಟರಿಂಗ್, ಡಿಮಸ್ಟರಿಂಗ್, ಮತ ಎಣಿಕೆ ಸೇರಿದಂತೆ ಎಲ್ಲ ಬಗೆಯ ಸಿದ್ಧತೆಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ. ಕೊಗನೊಳ್ಳಿ ಹಾಗೂ ಕಣಕುಂಬಿ ಎರಡೂ‌ ಕಡೆ ಅಬಕಾರಿ ಇಲಾಖೆಯ ವತಿಯಿಂದ ಶಾಶ್ವತ ಚೆಕ್ ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಉಳಿದಂತೆ ಅಕ್ರಮ ಮದ್ಯ ಮಾರಾಟ ಅಥವಾ ಸಾಗಾಣಿಕೆ ಮೇಲೂ ನಿಗಾ ವಹಿಸಲಾಗಿದೆ.

ಸುರೇಶ್ ಅಂಗಡಿ ಅವರ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಎದುರಾಗಿದೆ. ಮಾರ್ಚ್ 23ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

English summary
New Standard Operating Procedures (SOPs) will issue for the Belagavi loksabha seat by elections due to COVID situation. Election on April 17 and counting will be held on May 2.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X