Vande Bharat Express: ಬೆಂಗಳೂರು-ಬೆಳಗಾವಿ ನಡುವೆ ಹೊಸ ರೈಲು ಅಥವ ವಿಸ್ತರಣೆ

ಬೆಳಗಾವಿ, ಜನವರಿ 23: ರಾಜಧಾನಿ ಬೆಂಗಳೂರು ಮತ್ತು ಬೆಳಗಾವಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಪರ್ಕ ಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಆದರೆ ಹೊಸ ರೈಲು ಸೇವೆ ಆರಂಭವೇ?, ಬೆಂಗಳೂರು-ಧಾರವಾಡ ರೈಲು ವಿಸ್ತರಣೆಯೋ? ಎಂಬುದು ಇನ್ನೂ ಸಹ ಅಂತಿಮವಾಗಿಲ್ಲ. 2023ರ ನವೆಂಬರ್‌ನಲ್ಲಿ ಬೆಂಗಳೂರು-ಬೆಳಗಾವಿ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಮುಕ್ತಾಯಗೊಂಡಿದೆ.

ಸದ್ಯ ಕೆಎಸ್ಆರ್‌ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವೆ ರೈಲು ಸಂಖ್ಯೆ 20662/ 20661 ಸಂಚಾರವನ್ನು ನಡೆಸುತ್ತಿದೆ. ಈ ರೈಲನ್ನು ಬೆಳಗಾವಿ ತನಕ ವಿಸ್ತರಣೆ ಮಾಡಬೇಕು ಎಂಬುದು ಬೇಡಿಕೆಯಾಗಿದೆ. ಆದ್ದರಿಂದ ರೈಲುಗಳ ಪ್ರಾಯೋಗಿಕ ಸಂಚಾರವನ್ನು ನಡೆಸಲಾಗಿದೆ. ಆದರೆ ರೈಲು ಸಂಚಾರವನ್ನು ಆರಂಭಿಸಿಲ್ಲ.

New Vande Bharat Train Between Bengaluru Belagavi

ಪ್ರಸ್ತುತ ಹೊಸ ಬೆಳವಣಿಗೆಯೊಂದು ನಡೆದಿದೆ ಎನ್ನುವ ಮಾಹಿತಿ ಇದೆ. ಅದರ ಪ್ರಕಾರ ಬೆಂಗಳೂರು-ಬೆಳಗಾವಿ ನಡುವೆ ಈಗಿರುವ ರೈಲು ಸೇವೆ ವಿಸ್ತರಣೆ ಮಾಡುವುದಿಲ್ಲ. ಹೊಸ ವಂದೇ ಭಾರತ್ ರೈಲು ಪ್ರಾರಂಭಿಸಲಾಗುತ್ತದೆ. ಆದರೆ ಈ ಕುರಿತು ರೈಲ್ವೆ ಇಲಾಖೆ ಅಧಿಕಾರಿಗಳು ಯಾವ ಮಾಹಿತಿಯನ್ನೂ ಅಧಿಕೃತವಾಗಿ ನೀಡಿಲ್ಲ.

ಹೊಸ ವೇಳಾಪಟ್ಟಿ ತಂದ ಗೊಂದಲ: ಸಾಮಾಜಿಕ ಜಾಲತಾಣವೊಂದರಲ್ಲಿ ಯಶವಂತಪುರ-ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ವೇಳಾಪಟ್ಟಿಯೊಂದು ವೈರಲ್ ಆಗಿದೆ. ಇದರ ಪ್ರಕಾರ ಹೊಸ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಡುವ ರೈಲು ರಾತ್ರಿ ನಗರಕ್ಕೆ ವಾಪಸ್ ಆಗಲಿದೆ.

ಈ ಆಧಾರದ ಮೇಲೆಯೇ ಬೆಂಗಳೂರು-ಬೆಳಗಾವಿ ನಡುವೆ ಹೊಸ ರೈಲು ಸಂಚಾರ ನಡೆಸಲಿದೆ ಎಂದು ವರದಿಗಳು ಹೇಳುತ್ತಿವೆ. ಈ ವೇಳಾಪಟ್ಟಿ ಬಗ್ಗೆಯಾಗಲಿ, ಹೊಸ ರೈಲು ಸಂಚಾರದ ಕುರಿತು ಮಾಹಿತಿ ನೀಡಿಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿವೆ.

ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನೈಋತ್ಯ ವಲಯದ ರೈಲ್ವೆ ಮಹಾಪ್ರಬಂಧಕ ಅರವಿಂದ ಶ್ರೀನಿವಾಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಕಳೆದ ವಾರ ಸಭೆ ನಡೆಸಿದರು. ಈ ಸಭೆಯಲ್ಲಿಯೂ ರೈಲು ಸೇವೆ ವಿಸ್ತರಣೆ ಕುರಿತು ಚರ್ಚೆಗಳು ನಡೆದಿತ್ತು.

ರೈಲ್ವೆ ಇಲಾಖೆ ಒಪ್ಪಿಗೆ ನೀಡಿದರೂ ಕೆಎಸ್ಆರ್‌ ಬೆಂಗಳೂರು-ಧಾರವಾಡ ವಯಾ ಹುಬ್ಬಳ್ಳಿ ನಡುವೆ ಇನ್ನೂ ವಂದೇ ಭಾರತ್ ರೈಲು ಆರಂಭವಾಗಿಲ್ಲ. ಈ ಕುರಿತು ಸಂಸದರಿಂದ ಪ್ರಧಾನಿ ನರೇಂದ್ರ ಮೋದಿ ತನಕ ಮನವಿಗಳನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ರೈಲು ಸಂಚಾರದ ದಿನಾಂಕವನ್ನು ಘೋಷಣೆ ಮಾಡಿಲ್ಲ.

ಇಂತಹ ಸಮಯದಲ್ಲಿಯೇ ಹೊಸ ವೇಳಾಪಟ್ಟಿಯೊಂದು ಜನರಲ್ಲಿ ಕುತೂಹಲ ಮೂಡಿಸಿದೆ. ವೇಳಾಪಟ್ಟಿ ಪ್ರಕಾರ ವಂದೇ ಭಾರತ್ ರೈಲು ಬೆಳಗಾವಿಯಿಂದ ಬೆಳಗ್ಗೆ 5.30ಕ್ಕೆ ಹೊರಡಲಿದೆ. 7.15ಕ್ಕೆ ಧಾರವಾಡ, 7.55ಕ್ಕೆ ಹುಬ್ಬಳ್ಳಿ, 9 ಗಂಟೆಗೆ ದಾವಣಗೆರೆ, 10.55ಕ್ಕೆ ಅರಸೀಕೆರೆ, 12 ಗಂಟೆಗೆ ತುಮಕೂರು, ಮಧ್ಯಾಹ್ನ 1 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ.

ಈ ರೈಲು ಬೆಂಗಳೂರಿನ ಯಶವಂತಪುರ ನಿಲ್ದಾಣದಿಂದ ಮಧ್ಯಾಹ್ನ 2.30ಕ್ಕೆ ಹೊರಡಲಿದೆ. 3.25 ತುಮಕೂರು, 5.30 ಅರಸೀಕೆರೆ, 6.25 ದಾವಣಗೆರೆ, 7.45 ಹುಬ್ಬಳ್ಳಿ, 8.25 ಧಾರವಾಡ, ರಾತ್ರಿ 10.30ಕ್ಕೆ ಬೆಳಗಾವಿಗೆ ತಲುಪಲಿದೆ ಎಂದು ಮಾಹಿತಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+