• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಪತ್ತೆ; ಡಿಸಿ ಹೇಳಿದ್ದೇನು

|

ಬೆಳಗಾವಿ, ಮಾರ್ಚ್ 3: ಬೆಳಗಾವಿ ಜಿಲ್ಲೆಯಲ್ಲಿ 9 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೆಲವು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಲ್ಲಿ ಸುದ್ದಿಯನ್ನು ಬಿತ್ತರಿಸಲಾಗುತ್ತಿದ್ದು, ಈ ಸುದ್ದಿಯು ಸತ್ಯಕ್ಕೆ ದೂರವಾಗಿರುತ್ತದೆ. ಈ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣಗಳು ಕಂಡು ಬಂದಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಕೊರೋನಾ ಪತ್ತೆಯಾಗಿರುವ ಚೀನಾ ಹಾಗೂ ಇತರ ದೇಶಗಳಿಂದ ಈವರೆಗೆ ಬೆಳಗಾವಿ ಜಿಲ್ಲೆಗೆ ಒಟ್ಟು 9 ಮಂದಿ ಮರಳಿ ಬಂದಿದ್ದು, ವೈದ್ಯಕೀಯ ತಪಾಸಣೆ ಮಾಡಲಾಗಿ ಇವರಲ್ಲಿ ಕೊರೋನಾ ರೋಗಲಕ್ಷಣಗಳು ವರದಿಯಾಗಿರುವುದಿಲ್ಲ.

ಬೆಳಗಾವಿ: ಉದ್ಯಮಿ ರಮೇಶ್ ಪೈ ಮನೆ, ಕಚೇರಿ ಮೇಲೆ ಐಟಿ ದಾಳಿ

ಇವರಲ್ಲಿ ಇಬ್ಬರನ್ನು ಈಗಾಗಲೇ 28 ದಿವಸಗಳ ವರೆಗೆ ನಿರಂತರವಾಗಿ ಅನುಸರಣೆ ಮಾಡಲಾಗಿರುತ್ತದೆ. ಉಳಿದ 7 ಮಂದಿಯನ್ನು ಮುಂದಿನ 28 ದಿನಗಳ ವರೆಗೆ ಅನುಸರಣೆ ಮಾಡಲಾಗುವುದು. ಯಾರನ್ನು ಗೃಹ ಬಂಧನದಲ್ಲಿ ಇರಿಸಲಾಗಿರುವುದಿಲ್ಲ. ಇವರಿಗೆ ತಮ್ಮ ಮನೆಯಲ್ಲಿಯೇ ವೈಯಕ್ತಿಕ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ತಿಳಿಸಲಾಗಿದೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ಅವರ ಬಗ್ಗೆ ತೀವ್ರ ನಿಗಾ ಇಟ್ಟಿರುತ್ತಾರೆ ಮತ್ತು ದಿನಾಲು ಅವರ ಆರೋಗ್ಯವನ್ನು ಪರಿಶೀಲಿಸುತ್ತಿದ್ದಾರೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ, ಕೊರೊನಾ ಪೀಡಿತ ರಾಷ್ಟ್ರಗಳಿಂದ ಬರಬಹುದಾದ ಪ್ರವಾಸಿಗರ/ ಬೆಳಗಾವಿ ಜಿಲ್ಲೆಯ ನಿವಾಸಿಗಳ ವಿವರ ರಾಜ್ಯ ಕಣ್ಣಾವಲು ಘಟಕದಿಂದ ಪ್ರತೀ ನಿತ್ಯ ಇ -ಮೇಲ್ ಮುಖಾಂತರ ಜಿಲ್ಲಾ ಸಮೀಕ್ಷಾ ಘಟಕಕ್ಕೆ ಬರುತ್ತಿದ್ದು, ಈ ಎಲ್ಲಾ ಸಾರ್ವಜನಿಕ/ ಪ್ರವಾಸಿಗರನ್ನು ತುರ್ತಾಗಿ ಸಂಪರ್ಕಿಸಿ ಕೂಡಲೇ ಅವಶ್ಯಕ ಕ್ರಮಗಳನ್ನು ಜರುಗಿಸಲಾಗುವುದು ಎಂದು ಡಿಸಿ ಹೇಳಿದ್ದಾರೆ.

ಕೊರೋನಾ ವೈರಸ್ ನಿಯಂತ್ರಣಕ್ಕೆ ಕುಟುಂಬ ಕಲ್ಯಾಣ ಇಲಾಖೆಯು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.

English summary
No Coronavirus Cases Detected In Belagavi District Says Belagavi dc. DC S B Bommanahalli said on tuesday about falls news.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X