ಮಹಾರಾಷ್ಟ್ರದಲ್ಲಿ ಮಳೆ, ಬೆಳಗಾವಿಯಲ್ಲಿ ಸದ್ಯಕ್ಕಿಲ್ಲ ಪ್ರವಾಹ ಭೀತಿ

ಬೆಳಗಾವಿ, ಜುಲೈ 17: ಬೆಳಗಾವಿ ಜಿಲ್ಲೆಯಾದ್ಯಂತ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿದೆ. ಆದರೆ ಸದ್ಯಕ್ಕೆ ಬೆಳಗಾವಿ ಜಿಲ್ಲೆಗೆ ಪ್ರವಾಹ ಭೀತಿ ಇಲ್ಲ. ಆದರೆ ಜಿಲ್ಲಾಧಿಕಾರಿಗಳು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಅಧಿಕಾರಿಗಳಿಗೆ ಪ್ರವಾಹ ಎದುರಾದರೆ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಸೂಚನೆ ನೀಡಿದರು.

No Flood Warning For Belagavi Now Says DC

ಚಿಕ್ಕೋಡಿ ಉಪ ವಿಭಾಗಾಧಿಕಾರಿ ಬಸವರಾಜ ಸಂಪಗಾವಿ, ತಹಶೀಲ್ದಾರ್ ಕುಲಕರ್ಣಿ ಸೇರಿದಂತೆ ಕಂದಾಯ‌ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವಿವರಣೆಗಳನ್ನು ನೀಡಿದರು. ಡಿಸಿ ಸಂಭವನೀಯ ಪ್ರವಾಹದಿಂದ ಬಾಧಿತವಾಗುವ ಪ್ರದೇಶಗಳನ್ನು ವೀಕ್ಷಿಸಿದರು.

ಜಿಲ್ಲಾಧಿಕಾರಿಗಳ ಭೇಟಿ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸುತಗಟ್ಟಿ ಬಳಿ ಘಟಪ್ರಭಾ ನದಿಯ ಸೇತುವೆ ಬಳಿ ನದಿಯ‌ ಒಳಹರಿವು ಪ್ರಮಾಣ ಹಾಗೂ ಪ್ರಸ್ತುತ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳಿಂದ‌ ಮಾಹಿತಿಯನ್ನು ಪಡೆದುಕೊಂಡರು. ಇದಾದ ನಂತರ ಸಂಕೇಶ್ವರ ಪಟ್ಟಣಕ್ಕೆ‌ ತೆರಳಿದ ಅವರು, ಸಂಭವನೀಯ ಪ್ರವಾಹದಿಂದ ಬಾಧಿತವಾಗುವ ಪ್ರದೇಶ ಪರಿಶೀಲಿಸಿದರು.

ಕಳೆದ ಬಾರಿ ಪ್ರವಾಹ ಬಂದಾಗ‌ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಂಭವನೀಯ ಪ್ರವಾಹ ನಿರ್ವಹಣೆಗೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಹಶೀಲ್ದಾರ್‌ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮೊಹಮ್ಮದ್ ರೋಷನ್ ನಿರ್ದೇಶನ ಕೊಟ್ಟರು.

ಕೆಳಹಂತದಲ್ಲಿರುವ ಸೇತುವೆಗಳು ಮುಳುಗಡೆಯಾದಾಗ ಎಚ್ಚರಿಕೆ ಫಲಕಗಳನ್ನು ಅಳವಡಿಸಿ ಜನರು ದಾಟದಂತೆ ಬ್ಯಾರಿಕೇಡ್ ಹಾಕಬೇಕು ಎಂದು ತಿಳಿಸಿದರು. 2019ರ ಪ್ರವಾಹ ಸಂದರ್ಭದಲ್ಲಿ ಸ್ಥಾಪಿಸಲಾಗಿದ್ದ‌ ಕಾಳಜಿ ಕೇಂದ್ರಗಳಂತೆ ಈ ಬಾರಿಯೂ ಈಗಾಗಲೇ ಕಾಳಜಿ ಕೇಂದ್ರಗಳ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿರುತ್ತದೆ ಎಂದು ಹುಕ್ಕೇರಿ ತಹಶೀಲ್ದಾರ್ ವಿವರಣೆ ನೀಡಿದರು.

ಚಿಕ್ಕೋಡಿ ತಾಲ್ಲೂಕಿನ ಮಾಂಜರಿ‌ಯ ಸೇತುವೆ ಬಳಿ ಕೃಷ್ಣಾ‌ ನದಿಯ ಒಳಹರಿವನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ವೀಕ್ಷಿಸಿದರು. ನಂತರ ಯಡೂರ ಗ್ರಾಮದ ಬಳಿ ಬೋಟ್ ಮೂಲಕ ಕೃಷ್ಣಾ ನದಿಯಲ್ಲಿ ಸಂಚರಿಸಿದ ಜಿಲ್ಲಾಧಿಕಾರಿಗಳು, ತುರ್ತು ಸಂದರ್ಭದಲ್ಲಿ ಜನರು ಮತ್ತು ಜಾನುವಾರುಗಳ ರಕ್ಷಣೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ನೆರೆಯ ಮಹಾರಾಷ್ಟ್ರದಲ್ಲಿ ವ್ಯಾಪಕ‌ ಮಳೆಯಾಗುತ್ತಿದ್ದು, ಅದೇ ರೀತಿ ಜಿಲ್ಲೆಯಲ್ಲಿಯೂ ಹಲವು ದಿನಗಳಿಂದ ಮಳೆಯಾಗುತ್ತಿರುವುದರಿಂದ ಸದಾ ಎಚ್ಚರಿಕೆ ವಹಿಸಬೇಕು. ನದಿಯ ಒಳ ಹರಿವಿನ ಮೇಲೆ ನಿರಂತರ ನಿಗಾ ವಹಿಸುವುದರ ಜತೆಗೆ ತುರ್ತು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಬೋಟ್‌ಗಳು ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ಕೊಟ್ಟರು.

ಮಾಧ್ಯಮಗಳ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, "ಸದ್ಯಕ್ಕೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ‌ ಉದ್ಭವಿಸಿಲ್ಲ. ಆದರೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ 26 ಬೋಟ್‌ಗಳನ್ನು ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಗತ್ಯಬಿದ್ದರೆ ಹೆಚ್ಚುವರಿ ಬೋಟ್‌ಗಳನ್ನು ಕಾರವಾರದಿಂದ ತರಿಸಲಾಗುವುದು" ಎಂದರು.

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಸಭೆ ನಡೆಸಿ, "ನೆರೆಯ‌ ಮಹರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ನದಿ‌ ಪಾತ್ರದ ಗ್ರಾಮಗಳಲ್ಲಿ ಎದುರಾಗಬಹುದಾದ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಈ‌ ಕುರಿತು ಸಾರ್ವಜನಿಕರಲ್ಲಿ ಮುಂಜಾಗೃತಾ ಕ್ರಮವಾಗಿ ಅರಿವು ಮೂಡಿಸಬೇಕು" ಎಂದು ಸೂಚನೆ ಕೊಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+