ಬೆಳಗಾವಿ: ಈ ದೃಶ್ಯ ನೋಡಿದ್ರೆ ಎದೆ ಝಲ್‌ ಅನಿಸುವುದಂತೂ ಗ್ಯಾರಂಟಿ.!

ಬೆಳಗಾವಿ, ಆಗಸ್ಟ್‌, 06: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇದೀಗ ಮಳೆರಾಯನ ಆರ್ಭಟ ತಗ್ಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಬ್ಬರಿಸಿ ಬೊಬ್ಬೆರೆಯುತ್ತಲೇ ಇದ್ದಾನೆ. ಅದರಲ್ಲೂ ಬೆಳಗಾವಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನೆಲೆ ಪ್ರವಾಹದಂತಹ ವಾತಾವರಣ ನಿರ್ಮಾಣವಾಗಿದೆ. ಹಾಗಾದರೆ ಏನೆಲ್ಲ ಅನಾಹುತಗಳು ಸಂಭವಿಸಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಸುರಿಯುತ್ತಿರುವ ಹಿನ್ನೆಲೆ ಕೆರೆ, ಹಳ್ಳ-ಕೊಳ್ಳ, ನದಿಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಿಲ್ಲೆಯ ನಿಂಗಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ಹುಲಿಕೆರೆ ಹಿನ್ನೀರಿನಲ್ಲಿ ಗಾಳಿ ತುಂಬಿದ ಟ್ಯೂಬ್‌ ಮೂಲಕವೇ ವಿದ್ಯಾರ್ಥಿಗಳು ಶಾಲೆಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ಮಳೆ ಬಂತೆದಂರೆ ಸಾಕು ಯಾವುದೇ ಪರ್ಯಾಯ ದಾರಿಯಿಲ್ಲದೆ, ಕಲಿಕೆಗಾಗಿ ಈ ಹಿನ್ನೀರನ್ನೂ ದಾಟಿಕೊಂಡೇ ಹೋಗುತ್ತಿದ್ದೇವೆ ಎಂದು ಮಕ್ಕಳು ಅಳಲು ತೋಡಿಕೊಂಡಿದ್ದಾರೆ.

Officials who did not construct bridge on Lake backwater place of Ningapura Students are worried

ವಿದ್ಯಾರ್ಥಿಗಳು ಜೀವವನ್ನು ಅಂಗೈಯಲ್ಲಿಡಿದು ಗಾಳಿ ತುಂಬಿದ ಟ್ಯೂಬೇ ಅನ್ನೇ ಬಳಸಿಕೊಂಡು ಕೆರೆ ಹಿನ್ನೀರು ದಾಟಿ ಶಾಲೆಗೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಈ ದೃಶ್ಯ ನೋಡಿದರೆ, ಎಂಥಹವರ ಎದೆ ಝೆಲ್ ಎನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ.

ಗಾಳಿ ತುಂಬಿದ ಟ್ಯೂಬ್‌ಗೆ ಹಗ್ಗ ಕಟ್ಟಿ ಎಳೆದು ಮಕ್ಕಳನ್ನು ಈ ಕೆರೆಯನ್ನು ಪ್ರತಿನಿತ್ಯ ದಾಟಿಸುತ್ತಿದ್ದು, ಇದು ಸ್ವಲ್ಪ ಆಯ ತಪ್ಪಿದರೂ ಸಹ ಮಕ್ಕಳು ಕೆರೆ ಪಾಲಾಗುವ ಭೀತಿಯಲ್ಲಿ ಪೋಷಕರು ಇದ್ದಾರೆ. ಈಗಾಗಲೇ ಈ ಭಾಗದಲ್ಲಿ ಸೇತುವೆ ನಿರ್ಮಾಣ ಮಾಡಿ ಕೊಡಿ ಎಂದು 20 ವರ್ಷಗಳಿಂದಲೂ ಅಧಿಕಾರಿಗಳನ್ನು ಕೇಳಿಕೊಳ್ಳುತ್ತಲೇ ಇದ್ದೇವೆ. ಆದರೆ, ಅಧಿಕಾರಿಗಳು ಮಾತ್ರ ಕ್ಯಾರೆ ಅನ್ನುತ್ತಿಲ್ಲ ಎನ್ನುವುದು ಸ್ಥಳೀಯರ ಆರೋಪವಾಗಿದೆ. ಆದ್ದರಿಂದ ರಬ್ಬರ್ ಟ್ಯೂಬ್‌ ಅನ್ನೇ ಇವರು ಬೋಟ್, ಹಿನ್ನೀರು ದಾಟಿಸುವ ದೋಣಿಯಾಗಿ ಮಾಡಿಕೊಂಡಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಈ ಭಾಗದ ಶಾಲಾ ಮಕ್ಕಳಿಗೆ ಅನುಕೂಲ ಆಗುವಂತೆ ಸೇತುವೆ ನೀರ್ಮಾಣ ಮಾಡಿಕೊಡಿ ಎನ್ನುವುದು ಇಲ್ಲಿನ ಸ್ಥಳೀಯರ ಆಗ್ರಹವಾಗಿದೆ.

ಜೋಗ ಜಲಪಾತದ ವಿಡಿಯೋ ವೈರಲ್‌: ಭಾರೀ ಮಳೆ ಹಿನ್ನೆಲೆ ಫಾಲ್ಸ್‌ಗಳು ಕೂಡ ಸಾಗರದಂತೆ ಮೇಲಿನಿಂದ ಧುಮ್ಮಿಕ್ಕುತ್ತಿವೆ. ಹಾಗೆಯೇ ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತದ ರಾಜ, ರಾಣಿ, ರೋರಲ್‌, ರಾಕೇಟ್‌ ಜೊತೆ ಚಿಕ್ಕಪ್ಪ, ದೊಡ್ಡಮ್ಮ, ದೊಡ್ಡಪ್ಪ ಎನ್ನುವ ನೀರಿನ ಸೆಲೆಗಳು ಹುಟ್ಟಿಕೊಂಡಿವೆ ಎನ್ನುವ ವಿಡಿಯೋ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಪ್ರವಾಸಿ ತಾಣಗಳ ತವರೂರು ಅಂತಲೇ ಹೆಸರುವಾಸಿಯಾಗಿರುವ ಶಿವಮೊಗ್ಗ ಜಿಲ್ಲೆಯಿಂದ ಜೋಗ್‌ ಫಾಲ್ಸ್ 106.3 ಕಿಲೋ ಮೀಟರ್‌ ದೂರ ಆಗುತ್ತದೆ. ಬೆಂಗಳೂರಿನಿಂದ 402.4 ಕಿಲೋ ಮೀಟರ್‌ ದೂರ ಆಗುತ್ತಿದೆ. ಇನ್ನೂ ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಕಾರಣ ಈ ಫಾಲ್ಸ್‌ಗೆ ನೀರಿನ ಹರಿವಿನ ಪ್ರಮಾಣ ತುಂಬಾ ಕಡಿಮೆಯಾಗಿತ್ತು.

ಆದರೆ ಇದೀಗ 2024 ಜೂನ್‌ ಆರಂಭವಾಗುತ್ತಿದ್ದಂತೆ ಮುಂಗಾರು ಚುರುಕು ಪಡೆದಿದ್ದು, ಇದೀಗ ಫಾಲ್ಸ್‌ನಲ್ಲಿ ಬರೀ ರಾಜ, ರಾಣಿ, ರೋರಲ್‌, ರಾಕೇಟ್‌ ಜೊತೆಗೆ ಹೊಸದಾಗಿ ಚಿಕ್ಕಪ್ಪ, ದೊಡ್ಡಮ್ಮ, ದೊಡ್ಡಪ್ಪ ಹುಟ್ಟಿಕೊಂಡಿದ್ದಾರೆ ಎನ್ನುವ ವಿಡಿಯೋವೊಂದು ಸದ್ದು ಮಾಡುತ್ತಿದೆ.

ಫಾಲ್ಸ್‌ಗೆ ರಾಜ, ರಾಣಿ, ರೋರಲ್‌, ರಾಕೇಟ್‌ ಜೊತೆಗೆ ಹೊಸದಾಗಿ ಚಿಕ್ಕಪ್ಪ-ಚಿಕ್ಕಮ್ಮ, ದೊಡ್ಡಮ್ಮ-ದೊಡ್ಡಪ್ಪ ಮಕ್ಕಳನ್ನು ಕೂಡ ಕೊರೆದುಕೊಂಡು ಬಂದಿವೆ ಎನ್ನುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.

ಮಲೆನಾಡಿನ ಪ್ರವಾಸಿ ತಾಣಗಳ ಹೆಬ್ಬಾಗಿಲು ಎಂದೇ ಪ್ರಖ್ಯಾತಿ ಪಡೆದಿರುವ ಶಿವಮೊಗ್ಗ ಜಿಲ್ಲೆಯಲ್ಲೂ ಮಳೆರಾಯ ಆರ್ಭಟ ಮುಂದುರೆಸಿದ ಹಿನ್ನೆಲೆ ಇಲ್ಲಿನ ವಿಶ್ವಪ್ರಸಿದ್ಧ ತಾಣವಾದ ಜೋಗ ಜಲಪಾತಕ್ಕೆ ಮತ್ತೆ ಜೀವಕಳೆ ಅಲ್ಲದೆ, ಸಾಗರ ರೂಪ ಪಡೆದಿದೆ. ಇನ್ನು ಈ ನೀರನ್ನು ಆಶ್ರಯಿಸಿದ್ದ ಜೀವಸಂಕುಲಗಳು, ಸರಿಸೃಪಗಳು ಹಾಗೂ ಜಲಚರಗಳಲ್ಲೂ ಹೊಸ ಚೈತನ್ಯ ಮೂಡಿದಂತಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಲೇ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+