ಬೆಳಗಾವಿ : ಗುಂಪು ಘರ್ಷಣೆಗೆ ಒಬ್ಬರು ಬಲಿ

ಬೆಳಗಾವಿ, ಜು. 1 : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ನಡೆದ ಘರ್ಷಣೆ, ಕಲ್ಲು ತೂರಾಟ ಒಬ್ಬರ ಪ್ರಾಣವನ್ನು ತೆಗೆದಿದೆ. ಗೋಕಾಕ್ ತಾಲೂಕಿನ ಮಾನಮ್ಮಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಎಂಟು ಜನರು ಗುಂಪು ಘರ್ಷಣೆಯಿಂದಾಗಿ ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಕಲ್ಲು ತೂರಾಟದಲ್ಲಿ ಮೃತಪಟ್ಟ ವ್ಯಕ್ತಿಯನ್ನು ದುಂಡಪ್ಪ (40) ಎಂದು ಗುರುತಿಸಲಾಗಿದೆ. ಗಾಯಗೊಂಡ ಎಂಟು ಜನರನ್ನು ಮುಧೋಳ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಲಗೋಡು ಪೊಲೀಸರು ಮಾನಮ್ಮಿ ಗ್ರಾಮಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Belgaum

ಮೃತ ದುಂಡಪ್ಪ ಮತ್ತು ಪಕ್ಕದ ಮನೆಯವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಸೋಮವಾರ ರಾತ್ರಿ ಮನೆ ಮುಂದಿನ ಟ್ರಾನ್ಸ್‌ಫಾರ್ಮರ್ ವಿಚಾರವಾಗಿ ಎರಡೂ ಕುಟುಂಬಗಳ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಕಲ್ಲು ತೂರಾಟ ನಡೆದಿದ್ದು, ಇದರಿಂದಾಗಿ ದುಂಡಪ್ಪ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ಪಡೆದು ಗ್ರಾಮಕ್ಕೆ ಆಗಮಿಸಿದ ಕುಲಗೋಡು ಠಾಣೆ ಪೊಲೀಸರು ದುಂಡಪ್ಪ ಮೃತದೇಹವನ್ನು ಮುಧೋಳ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+