ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ; 5 ತಾಲೂಕುಗಳಲ್ಲಿ ಜುಲೈ 14ರಿಂದ ಲಾಕ್ ಡೌನ್

|
Google Oneindia Kannada News

ಬೆಳಗಾವಿ, ಜುಲೈ 14 : ಕರ್ನಾಟಕ-ಮಹಾರಾಷ್ಟ್ರ ಗಡಿ ಜಿಲ್ಲೆಯಾದ ಬೆಳಗಾವಿಯಲ್ಲಿ ಲಾಕ್‌ ಡೌನ್ ಘೋಷಣೆ ಮಾಡಲಾಗಿದೆ. ಮಂಗಳವಾರ ರಾತ್ರಿ 8ಗಂಟೆಯಿಂದ ಕೊರೊನಾ ವೈರಸ್ ಸೋಂಕಿನ ಪ್ರಕರಣ ಹೆಚ್ಚಿರುವ ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ಜಾರಿಗೆ ಬರಲಿದೆ.

Recommended Video

Swathi Radar ಎಂದರೇನು ? | Oneindia Kannada

ಬೆಳಗಾವಿ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ ಈ ಕುರಿತು ಮಂಗಳವಾರ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಗೋಕಾಕ, ಮೂಡಲಗಿ, ಅಥಣಿ, ಕಾಗವಾಡ ಹಾಗೂ ನಿಪ್ಪಾಣಿ ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗುತ್ತಿದೆ.

ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆಗೆ ಕೊವಿಡ್-19 ಸೋಂಕು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ್ ಬೆನಕೆಗೆ ಕೊವಿಡ್-19 ಸೋಂಕು

ಜುಲೈ 14ರ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 5 ಗಂಟೆಯವರೆಗೆ 7 ದಿನಗಳ ಅವಧಿಯ ಲಾಕ್‌ ಡೌನ್ ಘೋಷಣೆ ಮಾಡಲಾಗಿದೆ. ಜಿಲ್ಲೆಯ 5 ತಾಲೂಕುಗಳ ವ್ಯಾಪ್ತಿಯಲ್ಲಿ ಮಾತ್ರ ಲಾಕ್ ಡೌನ್ ಜಾರಿಯಲ್ಲಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಬೆಳಗಾವಿ: ಕೊರೊನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಇನ್ನೂ ಆಗಿಲ್ಲಬೆಳಗಾವಿ: ಕೊರೊನಾ ವೈರಸ್ ನಿಂದ ಮೃತಪಟ್ಟವರ ಅಂತ್ಯಕ್ರಿಯೆ ಇನ್ನೂ ಆಗಿಲ್ಲ

ಲಾಕ್ ಡೌನ್ ಘೋಷಣೆ ಮಾಡಿರುವ 5 ತಾಲೂಕುಗಳ ವ್ಯಾಪ್ತಿಯಲ್ಲಿ ಕಳೆದ ಎರಡು ವಾರಗಳಿಂದ ಕೋವಿಡ್-19 ಸೋಂಕು ಹರಡುವಿಕೆಯ ಪ್ರಕರಣಗಳು ತೀವ್ರವಾಗಿ ಹೆಚ್ಚಳವಾಗಿದೆ. ಮರಣ ಪ್ರಮಾಣವು ಕೂಡಾ ಹೆಚ್ಚಳವಾಗಿರುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.

ಬೆಳಗಾವಿ ಆಸ್ಪತ್ರೆಗೆ ಕೊವ್ಯಾಕ್ಸಿನ್ ಪ್ರಯೋಗ ಅನುಮತಿ ಸಿಗಲು ಏನು ಕಾರಣ?ಬೆಳಗಾವಿ ಆಸ್ಪತ್ರೆಗೆ ಕೊವ್ಯಾಕ್ಸಿನ್ ಪ್ರಯೋಗ ಅನುಮತಿ ಸಿಗಲು ಏನು ಕಾರಣ?

ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್

ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್

ಬೆಳಗಾವಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಜ್ಞರೊಂದಿಗೆ ಚರ್ಚಿಸಿ ಹಾಗೂ ವಿವರವಾಗಿ ಪರಿಶೀಲಿಸಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್ -19 ಸೋಂಕಿನ ಹರಡುವಿಕೆಯನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಪರಿಣಾಮಕಾರಿಯಾಗಿ ನಿಯಂತ್ರಿಸಲು ಲಾಕ್ ಡೌನ್ ಜಾರಿಗೊಳಿಸುವ ತೀರ್ಮಾನ ಕೈಗೊಳ್ಳಲಾಗಿದೆ.

5 ತಾಲೂಕುಗಳಲ್ಲಿ ಮಾತ್ರ ಲಾಕ್ ಡೌನ್

5 ತಾಲೂಕುಗಳಲ್ಲಿ ಮಾತ್ರ ಲಾಕ್ ಡೌನ್

ತಜ್ಞರ ಸಲಹೆ ಮೇರೆಗೆ ವಿಪತ್ತು ನಿರ್ವಹಣೆ ಕಾಯ್ದೆ 2005ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ. ಜಿ. ಹಿರೇಮಠ 5 ತಾಲೂಕುಗಳಲ್ಲಿ ಮಾತ್ರ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆ

ಮುಖ್ಯಮಂತ್ರಿಗಳ ಸೂಚನೆ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೋಮವಾರ ಜಿಲ್ಲಾಧಿಕಾರಿಗಳ ಜೊತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಜಿಲ್ಲೆಯಲ್ಲಿನ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತ ಮುಖ್ಯಸ್ಥರಾದ ಜಿಲ್ಲಾಧಿಕಾರಿಗಳು ಲಾಕ್‌ ಡೌನ್ ಕುರಿತು ಸ್ಥಳೀಯ ಹಂತದಲ್ಲಿ ನಿರ್ಧಾರ ತೆಗೆದುಕೊಳ್ಳಲು ಅನುಮತಿ ನೀಡಿದ್ದಾರೆ.

ಉಳಿದ ತಾಲೂಕುಗಳ ಕಥೆ ಏನು?

ಉಳಿದ ತಾಲೂಕುಗಳ ಕಥೆ ಏನು?

5 ತಾಲೂಕುಗಳಲ್ಲಿ ಲಾಕ್‌ ಡೌನ್ ಘೋಷಣೆ ಮಾಡಲಾಗಿದೆ. ಉಳಿದ ತಾಲೂಕುಗಳಲ್ಲಿ ರಾಜ್ಯ ಸರ್ಕಾರದ ಆದೇಶ ಸಂಖ್ಯೆ: ಆರ್‌ಡಿ 158 ಟಿಎನ್ಆರ್ 2020, ದಿನಾಂಕ 30/06/2020ರಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಬಗ್ಗೆ ಕಂಟೈನ್‌ಮೆಂಟ್ ವಲಯಗಳನ್ನು ಹೊರತುಪಡಿಸಿದ ಪ್ರದೇಶಗಳಲ್ಲಿ ನಿಷೇಧಿತ ಕಾರ್ಯ ಚಟುವಟಿಕೆಗಳನ್ನು ಕ್ರಮೇಣವಾಗಿ ಪುನರ್ ಪ್ರಾರಂಭಿಸಲು ತೆರವು-2ರ ಮಾರ್ಗಸೂಚಿ, ಕಂಟೈನ್‌ಮೆಂಟ್ ವಲಯಗಳ ಲಾಕ್ ಡೌನ್ ಎಂದಿನಂತೆ ಮುಂದುವರೆಯಲಿದೆ.

English summary
Belagavi district administration issued order for one week long lock down in 5 taluks of the district. Lock down will come to effect from July 14 night 8 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X