ಬೆಳಗಾವಿ: ಕಾಂಗ್ರೆಸ್ ಮುಖಂಡರ ನಡುವೆ ಟಿಕೆಟ್ ರಾಜಕೀಯ

ಬೆಳಗಾವಿ, ಡಿಸೆಂಬರ್ 08 : ಬೆಳಗಾವಿ ರಾಜಕೀಯ ವಲಯದಲ್ಲಿ ಚುನಾವಣೆ ಕಾವೇರುತ್ತಿದೆ. ಅದರಲ್ಲೂ ಕಾಂಗ್ರೆಸ್ ಪಕ್ಷ ಮುಖಂಡರಲ್ಲಂತೂ ಕಾವು ಜೋರಾಗಿಯೇ ಇದೆ. ಇದೀಗ ಅವರಲ್ಲಿ ಟಿಕೆಟ್ ರಾಜಕೀಯ ಪ್ರಾರಂಭವಾಗಿದೆ.

ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿರುವ ಡಿ.ಎಂ.ಲಕ್ಷ್ಮಿನಾರಾಯಣ ಅವರ ಸ್ಪರ್ಧೆಗೆ ಸ್ಥಳೀಯ ಕಾಂಗ್ರೆಸ್ಸಿಗರ ವಿರೋಧ ಕೇಳಿ ಬರುತ್ತಿದೆ.

Oppose to DM Lakshmminarayan for contesting in Belagavi south

ಶಾಸಕ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಇನ್ನು ಇತರ ಸ್ಥಳೀಯ ಕಾಂಗ್ರೆಸ್ ಮುಖಂಡರು ಲಕ್ಷ್ಮಿನಾರಾಯಣ್ ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ಮಾಡಿದ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಲಕ್ಷ್ಮಿನಾರಾಯಣ ಅವರು ತಮಗೆ ಸೋನಿಯಾ ಗಾಂಧಿ ಅವರಿಂದ ಟಿಕೆಟ್ ಸಿಕ್ಕಿದೆ ಎಂದು ಸುಳ್ಳು ಹೇಳಿಕೊಂಡು ಇಲ್ಲಿನ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಲಕ್ಷ್ಮಿನಾರಾಯಣ್ ಅವರ ಮೇಲೆ ಹರಿಹಾಯ್ದರು.

ಜನರ ದಾರಿ ತಪ್ಪಿಸುತ್ತಿರುವ ಲಕ್ಷ್ಮೀನಾರಾಯಣ ಅವರ ವಿರುದ್ಧ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರು ಶಿಸ್ತು ಕ್ರಮ ಜರುಗಿಸಬೇಕು, ಅಥವಾ ಪಕ್ಷದಿಂದ ಹೊರ ಹಾಕಬೇಕು ಎಂದು ಅವರು ಹೇಳಿದರು.

ಇದೇ ಸಮಯದಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಮೂಲ ಅಸ್ಪೃಶ್ಯರ ಸಮಾವೇಶ ನಡೆಸುವುದಾಗಿ ಘೋಷಿಸಿದ ಅವರು ಕಾರ್ಯಕ್ರಮದಲ್ಲಿ ಪರಮೇಶ್ವರ, ಸಿಎಂ ಸಿದ್ದರಾಮಯ್ಯನವರು ಭಾಗವಹಿಸುತ್ತಾರೆ. ಬರುವ ಜನೆವರಿ ತಿಂಗಳಲ್ಲಿ ಬೆಳಗಾವಿಯಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+