ಅಂತರ್ ಜಿಲ್ಲಾ ಸಂಚಾರಕ್ಕೆ ಪಾಸ್: ಬೆಳಗಾವಿ ಡಿಸಿ
ಬೆಳಗಾವಿ, ಮೇ 3: ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಕರ್ನಾಟಕ ರಾಜ್ಯದ ಇತರೆ ಜಿಲ್ಲೆಗಳಿಗೆ ತೆರಳಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಹಾಗೂ ಇತರರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ ಬೊಮ್ಮನಹಳ್ಳಿ ಅವರು ತಿಳಿಸಿದರು.
ಬೆಳಗಾವಿ ಜಿಲ್ಲೆಯಿಂದ ಇತರೆ ಜಿಲ್ಲೆಗಳಿಗೆ ಹೋಗುವವರಿಗೆ ಒಂದು ಸಲ, ಒಂದು ದಿನ ಮತ್ತು ಒಂದು ಬಾರಿ ಸಂಚಾರಕ್ಕೆ ಪಾಸ್ ನೀಡಲಾಗುವುದು ಎಂದರು.
ಅಂತರ್ ಜಿಲ್ಲಾ ಪ್ರಯಾಣಕ್ಕೆ ಬೆಳಗಾವಿ ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕಿನ ಜನರಿಗೆ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳು ಪಾಸ್ ಗಳನ್ನು ನೀಡುವರು. ಅದೇ ರೀತಿ ಬೆಳಗಾವಿ ನಗರ ಮತ್ತು ಬೆಳಗಾವಿ ತಾಲ್ಲೂಕಿನ ಪ್ರದೇಶದಲ್ಲಿರುವ ಜನರಿಗೆ ಉಪ ಪೊಲೀಸ್ ಆಯುಕ್ತರು(ಡಿಸಿಪಿ) ಪಾಸ್ ಗಳನ್ನು ನೀಡಲಿದ್ದಾರೆ ಎಂದು ಹೇಳಿದರು.

ಅರ್ಜಿ ಎಲ್ಲಿ ಸಲ್ಲಿಸಬೇಕು?
ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲ್ಲೂಕಿನ ಜನರು ಉಪ ಪೊಲೀಸ್ ಆಯುಕ್ತರು (ಡಿಸಿಪಿ) ಬೆಳಗಾವಿ ಇವರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅದೇ ರೀತಿ ಉಳಿದ ತಾಲ್ಲೂಕಿನಲ್ಲಿ ಇರುವವರು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ ಮತ್ತಿತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿದ್ದರೆ ಆಯಾ ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು. ತಾಲ್ಲೂಕು ವ್ಯಾಪ್ತಿಯಲ್ಲಿ ಇರುವವರು ಆಯಾ ತಹಶಿಲ್ದಾರರ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು.
ಹೊರ ರಾಜ್ಯ ಪ್ರವಾಸಕ್ಕೆ ಪಾಸ್ ಪಡೆಯುವ ವಿಧಾನ:
ಬೆಳಗಾವಿ ಜಿಲ್ಲೆಯಲ್ಲಿರುವ ಬೇರೆ ರಾಜ್ಯದ ಕಾರ್ಮಿಕರು, ವಿದ್ಯಾರ್ಥಿಗಳು, ಪ್ರವಾಸಿಗರು ಇತರೆ ರಾಜ್ಯಗಳಿಗೆ ತೆರಳಲು ಬಯಸಿದರೆ ಕರ್ನಾಟಕ ಸರ್ಕಾರದ ಸೇವಾ ಸಿಂಧು ಯೋಜನೆಯ ವೆಬ್ಸೈಟ್ ಮೂಲಕ ತಮ್ಮ ಹೆಸರು, ವಿವರಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ.
ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರು ಸಲ್ಲಿಸುವ ಅರ್ಜಿಗಳನ್ನು ಪರಿಶೀಲಿಸಿದ ಬಳಿಕ ಮಾರ್ಗಸೂಚಿ ಅನುಸಾರ ಪ್ರಯಾಣಕ್ಕೆ ಸರ್ಕಾರದಿಂದ ಅನುಮತಿ ನೀಡಲಾಗುತ್ತದೆ ಎಂದು ಅವರು ಬೆಳಗಾವಿ ಡಿಸಿ ಮಾಹಿತಿ ನೀಡಿದರು.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications