ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ಜಿಲ್ಲೆಯ ವಿಭಜನೆಗೆ ಜನರ ಒತ್ತಾಸೆ: ಸಿಎಂ ಬೊಮ್ಮಾಯಿ

|
Google Oneindia Kannada News

ಬೆಳಗಾವಿ, ಏಪ್ರಿಲ್ 28: ಕರ್ನಾಟಕ ಮತ್ತು ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಅಗತ್ಯವಿರುವ ಕ್ರಮ ಕೈಗೊಳ್ಳಲಾಗುವುದು. ಅದರ ಜತೆ ಜಿಲ್ಲೆಯ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬೆಳಗಾವಿ ಜಿಲ್ಲೆಯ ವಿಭಜನೆಗೆ ಹಲವಾರು ವರ್ಷಗಳಿಂದ ಬೇಡಿಕೆ ಇದೆ. ಬೇರೆ ಎಲ್ಲಾ ಜಿಲ್ಲೆಗಳು ಆದಾಗಲೂ ಬೆಳಗಾವಿ ಜಿಲ್ಲೆ ಆಗಬೇಕು ಎನ್ನುವ ಸಲಹೆ ಬೇಡಿಕೆ ಬಂದಿತ್ತು. ಅವತ್ತಿನ ಸಂದರ್ಭದಲ್ಲಿ ಜೆ.ಹೆಚ್.ಪಟೇಲರು ಮುಖ್ಯಮಂತ್ರಿಗಳಾಗಿದ್ದಾಗಲೂ ಚರ್ಚೆಯಾಗಿತ್ತು.

ಬೆಳಗಾವಿ ಗಡಿ ಜಿಲ್ಲೆಯಾದ್ದರಿಂದ ಸದ್ಯಕ್ಕೆ ಬೇಡ ಎಂಬ ನಿರ್ಧಾರ ಮಾಡಲಾಗಿತ್ತು. ಈಗ ಮತ್ತೆ ಜನರು ಅದರ ಬಗ್ಗೆ ಒತ್ತಾಸೆ ವ್ಯಕ್ತಪಡಿಸುತ್ತಿದ್ದಾರೆ. ಅವನ್ನೆಲ್ಲಾ ಗಮನಿಸಿ ಜಿಲ್ಲೆಯ ಹಿತದೃಷ್ಟಿಯಿಂದ ಏನು ಬೇಕೋ ಅದನ್ನು ಮಾಡಲಾಗುವುದು ಅಗತ್ಯವಿದ್ದರೆ ಬೆಳಗಾವಿ ಜಿಲ್ಲೆಯ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಬೊಮ್ಮಾಯಿ ಹೇಳಿದರು.

Peoples call for division of Belagavi district said CM Bommai

ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚನೆ:

ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ದ್ವೇಷ ಭಾಷಣ ನಿಯಂತ್ರಿಸಲು ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Peoples call for division of Belagavi district said CM Bommai

ದ್ವೇಷ ಭಾಷಣವನ್ನು ನಿಯಂತ್ರಿಸುವ ಬಗ್ಗೆ ಸಮಿತಿ ರಚಿಸಲು ಸರ್ವೋಚ್ಚ ನ್ಯಾಯಾಲಯವು ಸೂಚಿಸಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅವರು, ಇಡೀ ದೇಶದಲ್ಲಿ ದ್ವೇಷ ಭಾಷಣ ನಡೆಯುತ್ತಿದೆ. ವಿಶೇಷವಾಗಿ ಸಾಮಾಜಿಕ ಮಾಧ್ಯಮ ಜಾಲತಾಣಗಳಲ್ಲಿ ಹೆಚ್ಚಾಗುತ್ತಿದೆ. ಇದಕ್ಕೆ ನಿಯಂತ್ರಣ ಹಾಕಲು ನ್ಯಾಯಾಲಯದ ಆದೇಶಗಳನ್ನು ಮಾರ್ಗಸೂಚಿಗಳಂತೆ ಪಾಲಿಸಲಾಗುವುದು ಎಂದರು.

English summary
Necessary measures will be taken in the interest of Belagavi district says Chief Minister Basavaraj Bommai,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X