ನ.13ರಂದು ಬೆಳಗಾವಿಗೆ ಪಿಎಂ ಮೋದಿ ಭೇಟಿ
ನ.13ರಂದು ಬೆಳಗಾವಿಯಲ್ಲಿ ನಡೆಯಲಿರುವ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.ಈ ಕ್ರಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಅವರು ನ.13ರಂದು ಬೆಳಗಾವಿಗೆ ಆಗಮಿಸುತ್ತಿಲಿದ್ದಾರೆಂದು ಕಾರ್ಯಾಧ್ಯಕ್ಷ ಕೋರೆ ತಿಳಿಸಿದ್ದಾರೆ.
ಬೆಳಗಾವಿ, ನವೆಂಬರ್. 08 : ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 13ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ನವೆಂಬರ್ 13 ರಂದು ಬೆಳಗಾವಿಯ ಕೆಎಲ್ಇ ಸಂಸ್ಥೆಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೋದಿ ಆಗಮಿಸುತ್ತಿದ್ದಾರೆ.
ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ನವೆಂಬರ್ 13ರಂದು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಶತಮಾನೋತ್ಸವ ಕಾರ್ಯಕ್ರಮ ಹಾಗೂ 'ಅಷ್ಟ ಋಷಿ' ಎಂಬ ಪುಸ್ತಕವನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಂಸ್ಥೆ ಸ್ಥಾಪನೆಯಾದ ದಿನವಾದ ನ.13ರಂದು ಪ್ರಧಾನಿ ಭಾಗವಹಿಸುವರು. 'ಅಷ್ಟ ಋಷಿ' ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸ್ಥೆಯ 30,000 ವಿದ್ಯಾರ್ಥಿಗಳು, 6 ಸಾವಿರ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸುವರು' ಎಂದು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
2013 ಡಿಸೆಂಬರ್ ನಲ್ಲಿ ಕೆಎಲ್ಇ ಸಂಸ್ಥೆಯ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಭಾಗವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.












Click it and Unblock the Notifications