ಬೆಳಗಾವಿ ಗಲಾಟೆ ಬಗ್ಗೆ ರಾಜ್ಯದ ರಾಜಕೀಯ ನಾಯಕರು ಹೇಳುವುದೇನು?
ಬೆಳಗಾವಿ, ಡಿಸೆಂಬರ್ 20: ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಧ್ವಂಸಗೊಳಿಸಿದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮತ್ತು ಶಿವಸೇನೆ ಕಾರ್ಯಕರ್ತರ ಕೃತ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಇಂದು (ಡಿ.20) ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಎಂಇಎಸ್ ಮತ್ತು ಶಿವಸೇನೆಯನ್ನು ಭಯೋತ್ಪಾದಕ ಗುಂಪುಗಳು ಎಂದು ಕರೆದಿರುವ ಕರವೇ ಹೋರಾಟ ನಡೆಸುತ್ತಿದೆ. ಕರವೇ ನಡೆ ಬೆಳಗಾವಿ ಕಡೆ ಸ್ಲೋಗನ್ ಅಡಿಯಲ್ಲಿ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.
ಸದ್ಯ ಹೋರಾಟಕ್ಕಿಳಿದಿದ್ದ ಕರವೇ ಪ್ರವಿಣ್ ಶೆಟ್ಟಿ ಬಣದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕರ್ನಾಟಕ ಬಂದ್ ಮಾಡುವ ಬಗ್ಗೆ ಬುಧವಾರ ತೀರ್ಮಾನ ಮಾಡುತ್ತೇವೆ ಎಂದು ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರ ಪುಂಡಾಟಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದ ರಾಜಕೀಯ ನಾಯಕರು ಪ್ರತಿಕ್ರಿಯಿಸಿದ್ದು, ಯಾರು ಏನು ಹೇಳಿದ್ದಾರೆ ಎನ್ನುವುದನ್ನು ಮುಂದೆ ಓದಿ.
ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?
ಬೆಳಗಾವಿಯಲ್ಲಿ ಎಂಇಎಸ್‌ನ ಪುಂಡಾಟಿಕೆ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಕರ್ನಾಟಕದಲ್ಲಿ ಯಾರ್ಯಾರು ಪುಂಡಾಟಿಕೆ ಮಾಡಿದ್ದಾರೋ ಅವರನ್ನು ಬಂಧಿಸಿದ್ದೇವೆ. ಹಿಂದಿನ ಸರ್ಕಾರಗಳು ಏನು ಮಾಡುತ್ತಿರಲಿಲ್ಲ. ಯಾರ್ಯಾರನ್ನೋ ಬಂಧಿಸುತ್ತಿದ್ದರು. ನಾವು ಇಂದು ಪ್ರಮುಖರನ್ನ ಬಂಧನ ಮಾಡಿ ನಿಯಂತ್ರಣ ಮಾಡುತ್ತಿದ್ದೇವೆ. ಮಹಾರಾಷ್ಟ್ರದ ಸರ್ಕಾರದ ಜೊತೆ ಗೃಹ ಸಚಿವಾಲಯ ಕಾರ್ಯದರ್ಶಿ ಮಾತಾಡುತ್ತಿದ್ದಾರೆ. ಕನ್ನಡ ಆಸ್ತಿ- ಪಾಸ್ತಿಗಳಿಗೆ ನಷ್ಟವಾಗಬಾರದು. ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ. ನಮ್ಮ ಮಹಾನಗರಗಳ ರಕ್ಷಣೆ ಮಾಡಬೇಕು. ಆ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಿಲ್ಲ; ಸಿದ್ದರಾಮಯ್ಯ
ಕೆಲ ಪುಂಡರು ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸುವ ಕೆಲಸ ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಕೆಲಸ. ರಾಯಣ್ಣ ಯಾವುದೇ ಒಂದು ಜಾತಿಗೆ ಸೇರಿದ ವ್ಯಕ್ತಿಯಲ್ಲ. ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸುವವರಿಂದ ಈ ಕೃತ್ಯವಾಗಿದೆ. ಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಎಂಇಎಸ್ ನಿಷೇಧ ಮಾಡಲು ಒತ್ತಾಯ ಇದೆ. ಸರ್ಕಾರದ ಗಮನ ಸೆಳೆಯುವ ಕೆಲಸವನ್ನು ಮಾಡುತ್ತೇವೆ. ಪ್ರಜಾಪ್ರಭುತ್ವದಲ್ಲಿ ಧರಣಿ ಮಾಡಲು ಅವಕಾಶ ಇರಬೇಕು. ಕನ್ನಡಪರ ಸಂಘಟನೆಗಳಿಗೆ ಅವಕಾಶ ಮಾಡಿಕೊಡಬೇಕು. ಎಂಇಎಸ್‌ನವರು ಪುಂಡರ ವಿರುದ್ಧ ಕ್ರಮಕೈಗೊಳ್ಳಲಿ. ಪೊಲೀಸರ ಬಗ್ಗೆ ಭಯವಿಲ್ಲ, ಕಾನೂನು ಸುವ್ಯವಸ್ಥೆ ಸರಿಯಿಲ್ಲ ಅಂತ ಬೆಳಗಾವಿಯ ಅನಗೋಳದಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಾನು ಯಾವುದೇ ಸಂಘಟನೆ ವಿರುದ್ಧ ದೂರಲ್ಲ; ಡಿ.ಕೆ. ಶಿವಕುಮಾರ್
ಕಲೆ ಕಿಡಿಗೇಡಿಗಳು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ. ಸರ್ಕಾರ ಅಂತಹವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ನಾನು ಯಾವುದೇ ಸಂಘಟನೆ ವಿರುದ್ಧ ದೂರಲು ಹೋಗಲ್ಲ. ಎಂಇಎಸ್ ಪುಂಡಾಟಿಕೆ ಮಾಡುತ್ತಿದೆ ಎಂದು ಕೂಡ ಹೇಳಲ್ಲ. ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಇಡೀ ರಾಜ್ಯದಲ್ಲಿಯೇ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಪೊಲೀಸರು ಖಾಕಿಯನ್ನು ಬಿಟ್ಟು ಕಾವಿ ಧರಿಸುತ್ತಿದ್ದಾರೆ. ಪೊಲೀಸರು ರಾಜಕಾರಣಿಗಳ ಮಾತು ಬಿಟ್ಟು, ಕೆಲಸ ಮಾಡಲಿ ಅಂತ ಡಿ.ಕೆ. ಶಿವಕುಮಾರ್ ಕಿವಿಮಾತು ಹೇಳಿದ್ದಾರೆ.

ಕಾಂಗ್ರೆಸ್ ಚೇಲಾಗಳಿಂದ ಬೆಳಗಾವಿಯಲ್ಲಿ ದಾಂಧಲೆ; ಬಿ. ಶ್ರೀರಾಮುಲು
ಎಂಇಎಸ್ ಪುಂಡಾಟ, ರಾಯಣ್ಣ ಪ್ರತಿಮೆ ಭಗ್ನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಬಿ. ಶ್ರೀರಾಮುಲು, ಇದನ್ನು ಯಾರು ಮಾಡಿಸುತ್ತಿದ್ದಾರೆಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾಂಗ್ರೆಸ್ ಚೇಲಾಗಳು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಎಂಇಎಸ್ ಮೊದಲಿನಿಂದ ಪುಂಡಾಟಿಕೆ ಮಾಡುತ್ತಾ ಬರುತ್ತಿದೆ. ಅವರಿಗೆ ಕುಮ್ಮಕ್ಕು ಕೊಡುವವರನ್ನೂ ಬಂಧಿಸುತ್ತೇವೆ. ಎಂಇಎಸ್ ಕೆಲಸಕ್ಕೆ ಮಹಾರಾಷ್ಟ್ರ ಸಿಎಂ ಪ್ರಚೋದಿಸುತ್ತಿದ್ದಾರೆ ಅಂತ ಹೇಳಿದರು.
ಬೆಳಗಾವಿ ಶಾಂತವಾಗಿದೆ; ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಳಗಾವಿ ಸದ್ಯ ಶಾಂತವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದು, ಕನ್ನಡಿಗರು, ಮರಾಠಿಗರು ಸೌಹಾರ್ದಯುತವಾಗಿದ್ದಾರೆ.
ಕನ್ನಡ ಸಂಘಟನೆಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಿ. ಎಂಇಎಸ್ ನಿಷೇಧ ಮಾಡುವ ಬಗ್ಗೆ ಸಿಎಂ ಜೊತೆ ಚರ್ಚಿಸಬೇಕು ಅಂತ ಬೆಳಗಾವಿಯ ಸುವರ್ಣಸೌಧದಲ್ಲಿ ಮಾತನಾಡಿದ್ದಾರೆ.
ಎಂಇಎಸ್ ಪುಂಡಾಟಿಕೆ ಕಟ್ಟಿ ಹಾಕಬೇಕು; ಸಚಿವ ಬಿ.ಸಿ. ಪಾಟೀಲ್
ರಾಜ್ಯದಲ್ಲಿ ಎಂಇಎಸ್‌ನವರ ಪುಂಡಾಟಿಕೆಯನ್ನು ಕಟ್ಟಿ ಹಾಕಬೇಕು ಎಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಶಿವಾಜಿಗಿಂತಲೂ ಸಂಗೊಳ್ಳಿ ರಾಯಣ್ಣ ಅಪ್ರತಿಮ ವೀರ. ಏಕೀಕರಣ ಬೇಕಾದರೆ ಮಹಾರಾಷ್ಟ್ರದಲ್ಲಿ ಮಾಡಿಕೊಳ್ಳಲಿ. ಕಾಂಗ್ರೆಸ್ ಪಕ್ಷ ಶಿವಸೇನೆಯ ಜೊತೆ ಕೈಜೋಡಿಸಿದೆ ಎಂದು ಸಚಿವ ಬಿ.ಸಿ. ಪಾಟೀಲ್ ಆರೋಪಿಸಿದ್ದಾರೆ.
ಎಂಇಎಸ್ ಪುಂಡಾಟ ಹೆಚ್ಚಾಗಿದೆ; ಎಸ್.ಆರ್. ಪಾಟೀಲ್
ರಾಜ್ಯದಲ್ಲಿ ಎಂಇಎಸ್ ಪುಂಡಾಟ ಹೆಚ್ಚಾಗಿದ್ದು, ಸರ್ಕಾರ ಕ್ರಮ ಕೈಗೊಳ್ಳಬೇಕು. ಸರ್ಕಾರದ ವೈಫಲ್ಯದಿಂದಲೇ ಈ ಘಟನೆ ನಡೆದಿದೆ. ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದೆ ಹೀಗೆ ಆಗಲು ಸರ್ಕಾರ ಬಿಡಬಾರದು ಅಂತ ವಿಧಾನ ಪರಿಷತ್‌ನಲ್ಲಿ ಎಸ್.ಆರ್. ಪಾಟೀಲ್ ಆಗ್ರಹಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications