Breaking: ವಾಯುವ್ಯ ಶಿಕ್ಷಕ ಕ್ಷೇತ್ರ: ಪ್ರಕಾಶ್ ಹುಕ್ಕೇರಿ ನಾಮಪತ್ರ ಸಲ್ಲಿಕೆ
ಬೆಳಗಾವಿ, ಮೇ 25: ವಾಯವ್ಯ ಶಿಕ್ಷಕರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಹಾಂತೇಶ್ ಕೌಜಲಗಿ ಅವರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.
ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಈಗಾಗಲೇ ಅರುಣ ಶಹಾಪುರ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಅರುಣ ಶಹಾಪುರ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಮೂರನೇ ಬಾರಿಗೆ ನಿರೀಕ್ಷೆಯಲ್ಲಿದ್ದಾರೆ. ಈ ಮಧ್ಯೆ ಪ್ರಕಾಶ್ ಹುಕ್ಕೇರಿ ಕಣಕ್ಕೆ ಇಳಿದಿರುವುದು ಕಣ ರಂಗೇರಿಸಿದೆ.

ಈ ಮಧ್ಯೆ ವಾಯವ್ಯ ಪದವೀಧರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಸಂಕ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬುಧವಾರ ನಾಮಪತ್ರ ಸಲ್ಲಿಸಿದರು.












Click it and Unblock the Notifications