ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಂಚಮಸಾಲಿ ಸ್ವಾಮೀಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರಮೋದ್ ಮುತಾಲಿಕ್

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ನವೆಂಬರ್ 6: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಕೊಲೆ ಆರೋಪದಲ್ಲಿ ಜೈಲಿಗೆ ಹೋದರೆ ಅವರು ನಮ್ಮವರು ಅನ್ನುವುದು ಸರಿಯಲ್ಲವೆಂದರು.

ಕಾನೂನು ಪ್ರಕಾರ ಅಪರಾಧಿ, ನಿರಪರಾಧಿ ಅನ್ನುವುದು ಸಾಬೀತಾಗಬೇಕು. ಪ್ರಾರಂಭದಲ್ಲಿ ಆರೋಪಿಗಳು ನಮ್ಮವರು ಅನ್ನುವುದು ಅನೈತಿಕತೆ ಎಂದು ತಿಳಿಸಿದರು.

ಹಿಂಡಲಗಾ ಜೈಲಿನಲ್ಲಿ ಊಟ, ನಿದ್ದೆ ಇಲ್ಲದೆ ಬರೀ ಯೋಚನೆಯಲ್ಲೇ ರಾತ್ರಿ ಕಳೆದ ವಿನಯ್ ಕುಲಕರ್ಣಿಹಿಂಡಲಗಾ ಜೈಲಿನಲ್ಲಿ ಊಟ, ನಿದ್ದೆ ಇಲ್ಲದೆ ಬರೀ ಯೋಚನೆಯಲ್ಲೇ ರಾತ್ರಿ ಕಳೆದ ವಿನಯ್ ಕುಲಕರ್ಣಿ

ಈ ಬಗ್ಗೆ ಪಂಚಮಸಾಲಿ ಸ್ವಾಮೀಜಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮುತಾಲಿಕ್, ""ಕಾವಿ ಬಟ್ಟೆ ಹಾಕಿರುವ ನೀವು ಒಂದು ಜಾತಿಗೆ ಸೀಮಿತವಲ್ಲ. ಬಂಧನವಾದ ಕೂಡಲೇ ಬೆಂಬಲ ಕೊಡುವುದರಿಂದ ತಪ್ಪು ಸಂದೇಶ ರವಾನೆ ಆಗುತ್ತದೆ. ಆಧಾರ ಇರುವ ಕಾರಣ ಸಂಶಯದಿಂದ ವಿನಯ ಕುಲಕರ್ಣಿ ಬಂಧಿಸಿದ್ದಾರೆ. ವಿನಯ್ ಕುಲಕರ್ಣಿ ಅವರ ಪರವಾಗಿ ನಿಂತಿದ್ದು, ನಿಮ್ಮ ಮಠದ ಶೋಭೆ ಅಲ್ಲ'' ಎಂದು ಸ್ವಾಮೀಜಿ ವಿರುದ್ಧ ಕಿಡಿಕಾರಿದರು.

Belagavi: Pramod Muthalik Expressing Outrage Against Panchamsali Swamiji

ಎಂಇಎಸ್ ಮಾಜಿ ಶಾಸಕರ ಬಿಜೆಪಿ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ಪಕ್ಷದಲ್ಲಿ ನೈತಿಕತೆ ಇಲ್ಲ. ಸೋನಿಯಾ ಗಾಂಧಿ, ಸಿದ್ದರಾಮಯ್ಯ ಬಂದರೂ ಬಿಜೆಪಿ ಸೇರ್ಪಡೆ ಮಾಡಿಕೊಳ್ಳುತ್ತಾರೆ. ಬಿಜೆಪಿ ಅವರಿಗೆ ಅಧಿಕಾರ ಮಾತ್ರ ಬೇಕಾಗಿದೆ. ಪ್ರಾಮಾಣಿಕರಿಗೆ, ಹೋರಾಟಗಾರರಿಗೆ ಬಿಜೆಪಿ ಪಕ್ಷದಲ್ಲಿ ಬೆಲೆ ಇಲ್ಲ ಎಂದು ಬಿಜೆಪಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡುವುದು ಸರಿಯಲ್ಲ. ಪಟಾಕಿಯಿಂದಲೇ ಪರಿಸರ ಮಾಲಿನ್ಯ ಆಗುತ್ತದೆ ಅನ್ನುವುದು ಸುಳ್ಳು ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ನಿಷೇಧಿಸಬಾರದು. ಪಟಾಕಿಯಿಂದ ಮಾತ್ರ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು ವಾಹನಗಳಿಂದ ಎಷ್ಟು ಪರಿಸರ ಮಾಲಿನ್ಯ ಆಗುತ್ತಿದೆ ಅದನ್ನು ಯಾರು ತಡೆಯುವ ಪ್ರಯತ್ನ ಮಾಡುತ್ತಿಲ್ಲ ಎಂದರು.

ಈಗ ಕಾನೂನು ಜಾರಿಗೆ ಮಾಡಲು ಮುಂದಾಗಿರುವವರು ಒಮ್ಮೆ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದರೆ ಉತ್ತಮ. ಏಕೆಂದರೆ ಅಭಿವೃದ್ಧಿಯ ಹೆಸರಿನಲ್ಲಿ ನೀವು ಎಷ್ಟು ಪರಿಸರವನ್ನು ನಾಶ ಮಾಡುತ್ತಿದ್ದೀರಿ ಎಂಬುದರ ಅರಿವಾಗುತ್ತದೆ. ಆದರೆ ವರ್ಷಕ್ಕೊಮ್ಮೆ ನಡೆಯುವ ಗಣೇಶ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

English summary
Srirama Sena chief Pramod Muthalik, who responded to the CBI arrest Of former minister Vinay Kulkarni.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X