ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಬೆಳಗಾವಿಯಲ್ಲಿ ಪ್ರವಾಹ ಬಂದಿಲ್ಲ, ಆದರೂ ಮುನ್ನೆಚ್ಚರಿಕೆ ವಹಿಸಿದ್ದೇವೆ"

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಆಗಸ್ಟ್ 18: ಬೆಳಗಾವಿ ಜಿಲ್ಲೆಯಾದ್ಯಂತ ಈವರೆಗೆ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಆದರೂ ಪ್ರವಾಹ‌ ನಿಭಾಯಿಸಲು ಮುನ್ನೆಚ್ಚರಿಕೆ ವಹಿಸಿರುವುದಾಗಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ನದಿಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿದೆ. ಹೀಗಾಗಿ ಕೃಷ್ಣಾ ನದಿಗೆ 1.80 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿಯ ಒಳಹರಿವು ಎರಡೂವರೆ ಕ್ಯೂಸೆಕ್ಸ್ ಬಂದರೆ ಮಾತ್ರ ನದಿಪಾತ್ರದಲ್ಲಿ ಪ್ರವಾಹ ಬರುತ್ತದೆ ಎಂದು ತಿಳಿಸಿದರು.

ದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀದಾವಣಗೆರೆ; ಬಿಜೆಪಿ ಶಾಸಕರಿಗೆ ಎಚ್ಚರಿಕೆ ಕೊಟ್ಟ ಕನಕಶ್ರೀ

ಹೆಚ್ಚಿನ ಮಳೆಯಿಂದ ಪ್ರವಾಹ ಬರಬಹುದು ಎಂಬ ಕಾರಣಕ್ಕೆ ಕ್ರಮ ವಹಿಸುವಂತೆ ಜಿಲ್ಲಾಡಳಿತ, ತಾಲೂಕು ಆಡಳಿತಕ್ಕೆ ಸೂಚನೆ ನೀಡಿದ್ದೇವೆ. ಜನ ಜಾಗೃತರಾಗಿದ್ದು, ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ. ಮಳೆಯಿಂದ ಹಾನಿಯಾದ ಬೆಳೆಗೆ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಹಾನಿಗೆ ಪರಿಹಾರ ಒದಗಿಸಲು ಸರ್ಕಾರ ಸಿದ್ಧವಿದೆ ಎಂದರು.

Belagavi: Precautionary Measures Taken In District Said DCM Lakshmana Savadi

ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಕುರಿತು ಮಾತನಾಡಿ, "ಇದಕ್ಕೆ ಕಾಂಗ್ರೆಸ್ ಕಾರಣ. ನಮ್ಮ ಮೇಲೆ ಸುಖಾಸುಮ್ಮನೆ ಆರೋಪ ಮಾಡಲಾಗುತ್ತಿದೆ. ಗಲಭೆಯಲ್ಲಿ ಪಾಲ್ಗೊಂಡ ಸಂಘಟನೆ ನಿಷೇಧಕ್ಕೆ ಸಂಪುಟದಲ್ಲಿ ನಿರ್ಣಯಿಸಲಾಗುವುದು" ಎಂದರು.

English summary
Precautionary measures were taken to monitor flood situation in belagavi, said dcm lakshmana savadi
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X