ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಲೆ ಹೆಚ್ಚಳವೇ ಬಿಜೆಪಿಯ ಸಾಧನೆ: ಸಿದ್ದರಾಮಯ್ಯ ವ್ಯಂಗ್ಯ

|
Google Oneindia Kannada News

ಬೆಳಗಾವಿ, ಜೂ7: "ಬಿಜೆಪಿ ಸಾಧನೆ ಬಗ್ಗೆ ಜನರಿಗೆ ಗೊತ್ತಿದೆ. ಬೆಲೆ ಹೆಚ್ಚಳ ಮಾಡೋದು ಬಿಟ್ಟರೆ ಬೇರೆ ಯಾವ ಸಾಧನೆಯೂ ಬಿಜೆಪಿಯದ್ದೂ ಇಲ್ಲ. ಈ ಬಾರಿಯ ಚುನಾವಣೆಯನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ನಾವು ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ" ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು, "2023ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. ಸಿದ್ದರಾಮಯ್ಯ ಹತಾಶರಾಗಿ ಏನೇನು ಮಾತನಾಡುತ್ತಿದ್ದಾರೆ" ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. "ನಾನು ಏನೇನೂ ಮಾತನಾಡುತ್ತಿಲ್ಲ. ಅನಗತ್ಯವಾಗಿ ಮಾತನಾಡುತ್ತಿಲ್ಲ. ಬಹಳ ಅರ್ಥಪೂರ್ಣವಾಗಿ ಮಾತನಾಡುತ್ತಿದ್ದೇನೆ" ಎಂದು ಎಂದರು.

RSS ಚಡ್ಡಿ ಮತ್ತು ಹಿಂದೆ ಸಿದ್ದರಾಮಯ್ಯ ಪಂಚೆ ಕಳಚಿದ್ದ ಘಟನೆRSS ಚಡ್ಡಿ ಮತ್ತು ಹಿಂದೆ ಸಿದ್ದರಾಮಯ್ಯ ಪಂಚೆ ಕಳಚಿದ್ದ ಘಟನೆ

"ಬಿಜೆಪಿಯವರು ಎಲ್ಲರೂ ಗೆಲ್ಲುತ್ತೇವೆ ಅಂತ ಹೇಳಿದ್ದಾರೆ. ಅವರು ಸೋಲುತ್ತೇವೆ ಅಂತ ಹೇಳುವುದಿಲ್ಲ ಎಲ್ಲಾ ಪಕ್ಷದವರು ಗೆಲ್ಲುತ್ತೇವೆ ಅಂತಲೇ ಹೇಳುವುದು. ಈ ಸಾರಿ ಬಳಹ ಗಂಭೀರವಾಗಿ ಚುನಾವಣೆಯನ್ನ ತೆಗೆದುಕೊಂಡಿದ್ದೇವೆ. ದಕ್ಷಿಣ ಪದವೀಧರ ಕ್ಷೇತ್ರ ಇರಬಹುದು. ಪಶ್ಚಿಮ ಉಪಾಧ್ಯಾಯರ ಕ್ಷೇತ್ರ ಇರಬಹುದು, ಇಲ್ಲಿ ವಾಯುವ್ಯ ಶಿಕ್ಷಕರ ಕ್ಷೇತ್ರ ಈ ನಾಲ್ಕು ಕ್ಷೇತ್ರಗಳಲ್ಲಿ ನಾವು ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ" ಎಂದು ತಿಳಿಸಿದರು.

ಬೆಲೆ ಹೆಚ್ಚಳವೇ ಮೋದಿ ಸಾಧನೆ

ಬೆಲೆ ಹೆಚ್ಚಳವೇ ಮೋದಿ ಸಾಧನೆ

"ಮೋದಿ ಸಾಧನೆ ನೋಡಿ ಬಿಜೆಪಿಗೆ ಮತ ಹಾಕುತ್ತಾರೆ" ಎಂಬ ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, "ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಳ, ನಿರುದ್ಯೋಗ ಸಮಸ್ಯೆ ಹೆಚ್ಚಳ, ನೋಟ್ ಬ್ಯಾನ್ ಮಾಡಿದ ಮೇಲೆ ಜಿಎಸ್ ಟಿ ಮಾಡಿದ ಮೇಲೆ ದೇಶದ ಆರ್ಥಿಕತೆ ಹಾಳಾಗಿದೆ. ದೇಶವನ್ನು ಸಾಲದ ಸ್ಥಿತಿಗೆ ಸಿಲುಕಿದ್ದಾರೆ. ಇದು ಬಿಜೆಪಿ, ಮೋದಿ ಸಾಧನೆಯೇ ಎಂದು ಖಾರವಾಗಿ ಉತ್ತರಿಸಿದರು. ದೇಶದಲ್ಲಿ ಸಾಲದ ಪ್ರಮಾಣ ತೀವ್ರ ಹೆಚ್ಚಳವಾಗಿದೆ. ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕಿತ್ತು ಹಾಕಿದರು. ಮಗನಿಗೆ ಎಂಎಲ್‌ಸಿ ಕೊಡಲು ಆಗಲಿಲ್ಲ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿ ಬಹಳ ದಿನ ಆಯಿತು" ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.


"ಪೆಟ್ರೋಲಿಯಂ ಬೆಲೆ ಹೆಚ್ಚಾಗಿರೋದು ಒಳ್ಳೆಯದಾ?, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ ಒಳ್ಳೆಯದಾ?. ಜನರನ್ನು ಸಾಲದ ಸುಳಿಗೆ ಸಿಲುಕಿ ಸಿದ್ದಾರೆ ಅದರ ಅದು ಒಳ್ಳೆಯದಾ?. ದೇಶದಲ್ಲಿ ಸಾಲದ ಪ್ರಮಾಣ ತೀವ್ರ ಹೆಚ್ಚಳವಾಗಿದೆ ಇದು ಒಳ್ಳೆಯದಾ?" ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರ ಮಾನಸಿಕ ಸ್ಥಿತಿಗತಿ ಸರಿ ಇಲ್ಲ: ಗೋವಿಂದ ಕಾರಜೋಳಸಿದ್ದರಾಮಯ್ಯನವರ ಮಾನಸಿಕ ಸ್ಥಿತಿಗತಿ ಸರಿ ಇಲ್ಲ: ಗೋವಿಂದ ಕಾರಜೋಳ

ಕಟೀಲ್ ಬಿಜೆಪಿ ಅಧ್ಯಕ್ಷರಾಗೋಕೆ ಲಾಯಕ್ ಅಲ್ಲ

ಕಟೀಲ್ ಬಿಜೆಪಿ ಅಧ್ಯಕ್ಷರಾಗೋಕೆ ಲಾಯಕ್ ಅಲ್ಲ

"ಕಟೀಲ್ ಪ್ರಬುದ್ಧ ರಾಜಕಾರಣಿ ಅಲ್ಲ. ಕಟೀಲ್ ಬಿಜೆಪಿ ಅಧ್ಯಕ್ಷರಾಗುವುದಕ್ಕೆ ಲಾಯಕ್ ಅಲ್ಲ. ಏನ್ ಏನೋ ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಅವರ ಮಾತನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ" ಎಂದು ಸಿದ್ದರಾಮಯ್ಯ ಲೇವಡಿ ಮಾಡಿದರು.

"ಕುವೆಂಪು ಫೋಟೋ ತೆಗೆದು ಹಾಕಿದರೆ ಅವಮಾನ ಅಲ್ಲವೇ?. ನಾರಾಯಣಗುರು, ಬಸವಣ್ಣ, ಸುರಪುರ ನಾಯಕರನ್ನು ಅವಮಾನ ಮಾಡಿ ಪಠ್ಯವನ್ನು ಕೇಸರಿಕರಣ ಮಾಡಲು ಹೊರಟಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ವಿದ್ಯಾರ್ಥಿಗಳಿಗೆ ವೈಚಾರಿಕ ಶಿಕ್ಷಣ ಸಿಗಬೇಕು. ಇತಿಹಾಸ ತಿರುಚುವ ಕೆಲಸ ಮಾಡಬಾರದು. ಮುಖ್ಯಮಂತ್ರಿ, ಶಿಕ್ಷಣ ಸಚಿವರು ತಪ್ಪು ತಿದ್ದುತ್ತೇವೆ ಎಂದಿದ್ದಾರೆ. ಅಂದ ಮೇಲೆ ನಾವೆಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿದ್ದವರು ಅಂಬೇಡ್ಕರ್. ಅದನ್ನು ಮಕ್ಕಳಿಗೆ ಹೇಳದೆ ಇದ್ದರೆ ಹೇಗೆ?. ಸಮಿತಿ ವಿಸರ್ಜನೆ ಮಾಡಿ, ಪಠ್ಯ ಮುಂದುವರೆಸಿದರೆ ಹೇಗೆ ಎಂದು ಕೇಳಿದ್ದಾರೆ. ವೈಚಾರಿಕ, ವೈಜ್ಞಾನಿಕ ಮನೋಭಾವ ಇರೋ ವ್ಯಕ್ತಿಯನ್ನು ನೇಮಕ ಮಾಡಬೇಕು" ಎಂದು ತಿಳಿಸಿದ್ದಾರೆ ಎಂದರು.

ಪಠ್ಯ ಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ

ಪಠ್ಯ ಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ

"ಪಠ್ಯ ಪುಸ್ತಕದಲ್ಲಿ ಉದ್ದೇಶ ಪೂರ್ವಕವಾಗಿ ಅನೇಕ ತಪ್ಪು ಮಾಡಿದ್ದಾರೆ. ಅಂಬೇಡ್ಕರ್ ಬಗ್ಗೆ ಚರಿತ್ರೆಯ ಅಗತ್ಯತೆ ಇದೆ. ಸಂವಿಧಾನ ಶಿಲ್ಪಿ ಅನ್ನೋದನ್ನು ತಗೆದು ಹಾಕಿದರೆ ಹೇಗೆ. ಕುವೆಂಪು ಫೋಟೋ ತೆಗೆದು ಹಾಕಿದ್ದರೆ ಅವಮಾನ ಅಲ್ಲವೆ. ಇದರಿಂದ ಪಠ್ಯ ಪರಿಷ್ಕರಣೆಯಲ್ಲಿ ನಾರಾಯಣಗುರು, ಬಸವಣ್ಣ, ಸುರಪುರ ನಾಯಕರನ್ನು ಅವಮಾನ ಮಾಡಿದ್ದಾರೆ. ಬಿಜೆಪಿಯವರು ಪಠ್ಯವನ್ನು ಕೇಸರಿಕರಣ ಮಾಡಲು ಹೋರಟಿದ್ದಾರೆ ಇದರಿಂದ ವಿದ್ಯಾರ್ಥಿಗಳಿಗೆ ವೈಚಾರಿಕ ಶಿಕ್ಷಣ ಸಿಗುತ್ತಿಲ್ಲ. ಇತಿಹಾಸ ತಿರುಚುವ ಕೆಲಸ ಮಾಡಬಾರದು. ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರು ತಪ್ಪು ತಿದ್ದುತ್ತೇವೆ ಎಂದಿದ್ದಾರೆ. ಅಂದ ಮೇಲೆ ನಾವೇಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಸಂವಿಧಾನದ ರಚನಾ ಸಮಿತಿ ಅಧ್ಯಕ್ಷರಾಗಿದ್ದು ಅಂಬೇಡ್ಕರ್. ಅದನ್ನು ಮಕ್ಕಳಿಗೆ ಹೇಳದೆ ಇದ್ದರೆ ಹೇಗೆ?" ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಸಿಕ್ಕಾಗ ಮಾತನಾಡಿದ್ದೇವೆ ಅಷ್ಟೇ: ಯಡಿಯೂರಪ್ಪ

ಆಕಸ್ಮಿಕವಾಗಿ ಸಿಕ್ಕಾಗ ಮಾತನಾಡಿದ್ದೇವೆ ಅಷ್ಟೇ: ಯಡಿಯೂರಪ್ಪ

"ಸಿದ್ದರಾಮಯ್ಯನವರ ಜೊತೆಗೆ ಯಾವುದೇ ರಾಜಕೀಯ ಮಾತುಕತೆಯಾಗಿಲ್ಲ. ಅವರು ನಮ್ಮ ಆತ್ಮೀಯ ಸ್ಮೇಹಿತ. ಸ್ನೇಹ ಮತ್ತು ರಾಜಕೀಯಕ್ಕೆ ಅಜಗಜಾಂತರ ವ್ಯತ್ಯಾಸ ಇದೆ" ಎಂದು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಹೇಳಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, "ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜಕೀಯವಾಗಿ ಅವರು ಅವರ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ.‌ ನಾನು ನನ್ನ ಪಕ್ಷದ ಪರವಾಗಿ ಮಾಡುತ್ತೇನೆ. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಔಪಚಾರಿಕವಾಗಿ ಮಾತುಕತೆ ಮಾಡಿದ್ದೇವೆ" ಎಂದರು.

"ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಪ್ರವಾಸ ಮಾಡುತ್ತೇವೆ. ವಾಯುವ್ಯ ಪದವೀಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ 50 ಸಾವಿರ ಅಂತರದಲ್ಲಿ ಗೆಲುವು ಸಾಧಿಸುತ್ತಾರೆ. ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಅವರು ಅಂತರ ಕಡಿಮೆ ಆಗಬಹುದು. ಅವರು ಗೆಲವು ಸಾಧಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ಚುನಾವಣೆ ಗೆಲವು ಸಾಧಿಸುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

English summary
Karnataka leader of opposition Siddaramaiah verbal attack on Narendra Modi lead union government over fuel price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X