ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಮೇಶ್ ಕತ್ತಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

|
Google Oneindia Kannada News

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

Recommended Video

40 ವರ್ಷದ ಗೆಳೆಯನನ್ನು ಕಳೆದುಕೊಂಡಿದ್ದೇನೆ | Oneindia Kannada

ಪ್ರಧಾನಿ ಮೋದಿ ಟ್ವೀಟ್ ಮಾಡಿ, 'ಉಮೇಶ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ' ಎಂದು ಸಂತಾಪ ಸೂಚಿಸಿದ್ದಾರೆ.

Prime Minister Narendra Modi condolence the demise of Umesh Katti

ಉಮೇಶ್ ಕತ್ತಿ ಅವರನ್ನು ಅವರ ಪಾರ್ಥೀವ ಶರೀರವನ್ನು ಏರ್‌ಲಿಫ್ಟ್ ಮೂಲಕ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಕರೆತರಲಾಗುತ್ತಿದೆ. ಆದರೆ, ಹವಾಮಾನ ವೈಪರಿತ್ಯದಿಂದಾಗಿ ವಿಮಾನ ಹಾರಾಟ ತಡವಾಗಿದೆ ಎಂದು ಹೇಳಲಾಗುತ್ತಿದೆ. ಮಧ್ಯಾಹ್ನ 3.30ವರೆಗೂ ಹುಕ್ಕೇರಿಯ ಬೆಲ್ಲದ ಬಾಗೇವಾಡಿ ಹೊರಹೊಲದಲ್ಲಿ ವಿಶ್ವರಾಜ್ ಸಕ್ಕರಾಜ್ ಸಕ್ಕರೆ ಕಾರ್ಖಾನೆಯಲ್ಲಿ ಅಂತಿಮ ದರ್ಶನ ಪಡೆದುಕೊಳ್ಳಲು ತಯಾರಿ ನಡೆಸಲಾಗುತ್ತಿದೆ. ಸಾರ್ವಜನಿಕರು, ಆತ್ಮವಲಯ, ಅಭಿಮಾನಿಗಳು, ಹಿತೈಸಿಗಳು ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗುತ್ತಿದೆ.

Prime Minister Narendra Modi condolence the demise of Umesh Katti

ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಯ ಅವರ ಸ್ವಗ್ರಾಮಕ್ಕೆ ಏರ್‌ಲಿಫ್ಟ್‌ ಮೂಲಕ ಕರೆದೊಯ್ಯಲಾಗುತ್ತಿದೆ. ಉಮೇಶ್ ಕತ್ತಿಯ ಅಂತ್ಯಕ್ರಿಯೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಲಿದ್ದಾರೆ. ಉಮೇಶ್ ಕತ್ತಿ ಅವರ ಅಗಲಿಕೆಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ರಾಜ್ಯದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಉಮೇಶ್ ಕತ್ತಿ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

English summary
Prime Minister Narendra Modi has condoled the death of Food and Forest Minister Umesh Katti (61) on Tuesday night due to a massive heart attack.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X