ವೈದ್ಯರ ಮುಷ್ಕರಕ್ಕೆ ಕಾರಣವಾಯಿತೇ ಈ ಅಂಶಗಳು
ಬೆಳಗಾವಿ, ನವೆಂಬರ್ 15 : ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕಕ್ಕೆ ತೀವ್ರ ಆಕ್ರೋಶಗೊಂಡಿರುವ ರಾಜ್ಯದ ವೈದ್ಯರು ಗುರುವಾರ(n.16)ರಿಂದ ಮುಷ್ಕರಕ್ಕೆ ಇಳಿಯಲಿದ್ದಾರೆ. ಹಾಗಾದರೆ ಖಾಸಗಿ ವೈದ್ಯರ ಕೆಂಗಣ್ಣಿಗೆ ಕಾರಣವಾಗಿರುವ ವಿಧೇಯಕದಲ್ಲಿನ ಅಂಶಗಳು ಯಾವುವು ಗೊತ್ತೆ? ವಿವಿರ ಇಲ್ಲದೆ ನೋಡಿ
ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ 2017ರ ಮುಖ್ಯಾಂಶಗಳು ಇಲ್ಲಿವೆ.
* ಸರ್ಕಾರ ನಿಗದಿಪಡಿಸುವುದಕ್ಕಿಂತ ಹೆಚ್ಚಿನ ದರವನ್ನು ಖಾಸಗಿ ಆಸ್ಪತ್ರೆಗಳು ಸಂಗ್ರಹಿಸುವಂತಿಲ್ಲ

* ಸಂಗ್ರಹ ಮಾಡಿದರೆ 25,000 ದಿಂದ 5 ಲಕ್ಷದವರೆಗೆ ದಂಡ ವಿಧಿಸುವ ಮತ್ತು 6 ತಿಂಗಳಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ
* ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರೋಗಿಯಿಂದ ಅಥವಾ ಅವರ ಪ್ರತಿನಿಧಿಯಿಂದ ಮುಂಗಡ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ
* ಆಸ್ಪತ್ರೆಯಲ್ಲಿ ಯಾವುದೇ ವ್ಯಕ್ತಿ ಮೃತಪಟ್ಟರೆ ಸಂಬಂಧಿಕರಿಗೆ ದೇಹ ಹಸ್ತಾಂತರಿಸುವ ಮುನ್ನ ಬಾಕಿ ಮೊತ್ತ ಪಾವತಿಸುವಂತೆ ಒತ್ತಾಯಿಸುವಂತಿಲ್ಲ.
* ರೋಗಿಗಳ ಕುಂದು ಕೊರತೆ ವಿಚಾರಣೆಗೆ ಜಿಲ್ಲಾ ಅಥವಾ ಮಹಾನಗರ ಮಟ್ಟದಲ್ಲಿ ಕುಂದು ಕೊರತೆ ಪರಿಹಾರ ಸಮಿತಿ ರಚಿಸಲು ಅವಕಾಶ
* ಈ ಸಮಿತಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಧ್ಯಕ್ಷರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ಒಬ್ಬ ಪ್ರತಿನಿಧಿ, ಜಿಲ್ಲಾ ಸರ್ಜನ್ ಸರ್ಕಾರಿ ವಕೀಲ ಮತ್ತು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದ ಮಹಿಳಾ ಪ್ರತಿನಿಧಿಗಳು ಸದಸ್ಯರು
* ಹೊಸ ಮಸೂದೆಯು ಆಸ್ಪತ್ರೆ, ದವಾಖಾನೆ, ನರ್ಸಿಂಗ್ ಹೋಂ, ಡೆಂಟಲ್ ಕ್ಲಿನಿಕ್, ಡೆಂಟಲ್ ಪಾಲಿ ಕ್ಲಿನಿಕ್, ಚಿಕಿತ್ಸಾ ಪ್ರಯೋಗಾಲಯ, ರೋಗ ನಿಧಾನ ಕೇಂದ್ರ, ಪ್ರಸೂತಿ ಗೃಹ, ರಕ್ತನಿಧಿ, ಕ್ಷ-ಕಿರಣ ಪರೀಕ್ಷಾ ಕೇಂದ್ರ, ಸ್ಕ್ಯಾನಿಂಗ್ ಕೇಂದ್ರ, ಫಿಸಿಯೋಥೆರಪಿ ಕೇಂದ್ರ, ಚಿಕಿತ್ಸಾಲಯ, ಪಾಲಿ ಕ್ಲಿನಿಕ್, ವೈದ್ಯ ಸಲಹಾ ಕೇಂದ್ರ, ಸಾರ್ವಜನಿಕ ರೋಗ ತಪಾಸಣೆ, ರೋಗ ನಿಧಾನ, ರೋಗ ತಡೆಗಟ್ಟುವಿಕೆ ಅಥವಾ ರೋಗಗುಣಪಡಿಸುವ ಮುಂತಾದ ಹೆಸರಿನಿಂದ ಕರೆಯುವ ಸಂಸ್ಥೆಗಳು, ಸ್ವಯಂ ಸೇವಾ ಅಥವಾ ಖಾಸಗಿ ಸಂಸ್ಥೆಗಳಿಗೆ ಅನ್ವಯ
* ಖಾಸಗಿ ವೈದ್ಯಕೀಯ ಸಂಸ್ಥೆಗಳು ಸಂಬಂಧಿಸಿದ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಕಡ್ಡಾಯ. ನೋಂದಣಿ ನಿಬಂಧನೆಗಳು ಮತ್ತು ಷರತ್ತುಗಳನ್ನು ಬದಿಗೊತ್ತಿ ಖಾಸಗಿ ವೈದ್ಯಕೀಯ ಸಂಸ್ಥೆ ಸ್ಥಾಪನೆ ಮಾಡುವಂತಿಲ್ಲ.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral












Click it and Unblock the Notifications