New Railway Line: ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್, ಸವದತ್ತಿಗೆ ರೈಲ್ವೆ ಸಂಪರ್ಕ ಪ್ರಸ್ತಾವನೆ
ನವದೆಹಲಿ, ಆಗಸ್ಟ್ 08: ಬೆಳಗಾವಿ ಭಾಗದಲ್ಲಿ ಸಾಕಷ್ಟು ಪ್ರೇಕ್ಷಣಿಯ, ಧಾರ್ಮಿಕ ಸ್ಥಳಗಳಿವೆ. ಈ ಪೈಕಿ ಸವದತ್ತಿ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನವು ಒಂದು. ಇಲ್ಲಿಗೆ ತೆರಳಬೇಕಾದರೆ ನೀವು ರಸ್ತೆ ಮಾರ್ಗವಾಗಿ ಸಾಗಬೇಕು. ಇಲ್ಲಿಗೆ ರೈಲ್ವೆ ಸಂಪರ್ಕ ಕಲ್ಪಿಸಿದರೆ ಹೇಗಿರುತ್ತದೆ? ಇದು ಸಾಧ್ಯವಾ? ಈ ಬಗ್ಗೆ ರೈಲ್ವೆ ಇಲಾಖೆ ಹೇಳುವುದೇನು? ಈ ಕುರಿತು ಒಂದಷ್ಟು ಅಂಶಗಳು ಇಲ್ಲಿವೆ. ಎಲ್ಲವು ಅಂದುಕೊಂಡಂತಾದರೆ ಯಲ್ಲಮ್ಮನ ಭಕ್ತರಿಗೆ ಶೀಘ್ರವೇ ಸಿಹಿ ಸುದ್ದಿ ಸಿಗಲಿದೆ.
ಬೆಳಗಾವಿ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಮುಖ ರೈಲ್ವೆ ಯೋಜನೆ ಕುರಿತು ಪ್ರಸ್ತಾಪಿಸಿದ್ದಾರೆ. ಈ ಕುರಿತು ಪ್ರಸ್ತಾವನೆಯನ್ನು ಅವರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಹೌದು, ಬೆಳಗಾವಿಯ ಸವದತ್ತಿಗೆ ಸಾರಿಗೆ ಸಂಪರ್ಕ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ರಾಜ್ಯ ಲಕ್ಷಾಂತರ ಭಕ್ತರಿಗೆ ತೀರ್ಥಯಾತ್ರೆ ಇನ್ನಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಮಹತ್ವ ಚಿಂತನೆಯನ್ನು ಜಗದೀಶ್ ಶೆಟ್ಟರ್ ಬಿತ್ತಿದ್ದಾರೆ. ಸವದತ್ತಿ ಭಾಗಕ್ಕೆ ರೈಲು ಸಂಪರ್ಕ ಬೇಕು ಎನ್ನುವುದು ಬಹುವರ್ಷಗಳ ಬೇಡಿಕೆಯು ಆಗಿತ್ತು. ಈವರೆಗೆ ಆ ಬಗ್ಗೆ ಯಾರು ತಲೆಕೆಡಿಸಿಕೊಂಡಿರಲಿಲ್ಲ.
ಸವದತ್ತಿ ಹೊಸ ರೈಲ್ವೆ ಮಾರ್ಗಕ್ಕಾಗಿ ಸಮೀಕ್ಷೆ
ಇದೀಗ ಸಂಸದ ಜಗದೀಶ್ ಶೆಟ್ಟರ್ ಅವರು ಸವದತ್ತಿಗೆ ಹೊಸ ರೈಲು ಮಾರ್ಗ ನಿರ್ಮಾಣ ಕಾರ್ಯಸಾಧ್ಯತೆ ಕುರಿತು ರೈಲ್ವೆ ಇಲಾಖೆ ಅಧ್ಯಯನ ನಡೆಸಿ, ಸಮೀಕ್ಷೆ ಕೈಗೊಳ್ಳಬೇಕು. ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ಮುಖೇನ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅಪಾರ ಭಕ್ತಗಣ ಹೊಂದಿರುವ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಪ್ರತಿ ಹುಣ್ಣಿಮೆಗೆ ಸಹಸ್ರ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಾರೆ. ದೇವಸ್ಥಾನ ಸುತ್ತಮುತ್ತ ಹಾಗೂ ರಸ್ತೆಯಲ್ಲಿ ಕಾಲಿಡಲು ಜಾಗವೇ ಇಲ್ಲವೆಂಬಂತೆ ಭಕ್ತರು ದಂಡು ಕಂಡು ಬರುತ್ತದೆ. ಗುಡ್ಡದಲ್ಲಿರುವ ಈ ಸವದತ್ತಿ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ. ಆದರೆ ಇಲ್ಲಿಗೆ ಈವರೆಗೆ ರೈಲು ಸಂಪರ್ಕ ಕಲ್ಪಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ.
ಸವದತ್ತಿಗೆ ರೈಲು ಸಂಪರ್ಕದ ಅಗತ್ಯತೆ ಇದೆ
ಇದೀಗ ಸವದತ್ತಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಕಾಲ ಹತ್ತಿರವಾದಂತಿದೆ. ಈ ನಿಟ್ಟಿನಲ್ಲಿ ಕೇಂದ್ರ ಮನವಿ ಮಾಡಿರುವ ಜಗದೀಶ್ ಶೆಟ್ಟರ್ ಅವರು, ಭಕ್ತರ ಸುಗಮ ಯಾತ್ರೆಗೆ ಅನುಕೂಲವಾಗುವಂತೆ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಘೋಷಿಸಬೇಕು ಎಂದ ಶೆಟ್ಟರ್ ಅವರು, ಸವದತ್ತಿಗೆ ರೈಲು ಸಂಪರ್ಕದ ತುರ್ತು ಅಗತ್ಯ ಎಷ್ಟಿದೆ ಎಂಬುದನ್ನು ಒತ್ತಿ ಹೇಳಿದರು.

ಸವದತ್ತಿ ಯಲ್ಲಮ್ಮನ ಗುಡ್ಡ ವ್ಯಾಪ್ತಿಯಲ್ಲಿ ಪ್ರತಿ ಹುಣ್ಣಿಮೆ, ಜಾತ್ರೆ ಹಾಗೂ ವಿಶೇಷ ದಿನಗಳ ಸಂದರ್ಭದಲ್ಲಿ ಭಕ್ತಾದಿಗಳ ಸಂಖ್ಯೆ ಹೆಚ್ಚಿರುತ್ತದೆ. ದೇವಸ್ಥಾನದ ರಸ್ತೆಯಲ್ಲಿ ನಿರಂತರ ಸಂಚಾರ ದಟ್ಟಣೆ (ಟ್ರಾಫಿಕ್) ಕಂಡು ಬರುತ್ತದೆ. ಇದರಿಂದ ಅಕ್ಕ ಪಕ್ಕದ ಊರುಗಳಿಗೆ ತೆರಳುವವರಿಗೆ ಸಾರ್ವಜನಿಕ ಸಾರಿಗೆಗೆ ತೊಂದರೆ ಆಗುತ್ತದೆ. ಅಲ್ಲದೇ ರಸ್ತೆ ಸಂಚಾರದ ಮೇಲಿನ ಒತ್ತಡವು ತಗ್ಗುತ್ತದೆ. ಮುಖ್ಯವಾಗಿ ಲಕ್ಷಾಂತರ ಜನರಿಗೆ ರೈಲ್ವೆ ಸಂಪರ್ಕ ಸಾಕಷ್ಟು ಸಹಕಾರಿಯಾಗಲಿದೆ.
ಹುಬ್ಬಳ್ಳಿ ಕಚೇರಿಗೆ ಸೂಚನೆ ನೀಡುವಂತೆ ಮನವಿ
ಈ ಉದ್ದೇಶಿತ ಸವದತ್ತಿ ರೈಲು ಮಾರ್ಗದ ಸಮೀಕ್ಷೆಗೆ ನೈಋತ್ಯ ರೈಲ್ವೆಯ ವಲಯದ ಕೇಂದ್ರ ಕಚೇರಿ ಹುಬ್ಬಳ್ಳಿ ಪ್ರಧಾನ ವ್ಯವಸ್ಥಾಪಕರಿಗೆ ಸೂಚನೆ ನೀಡಬೇಕು ಎಂದು ಅವರು ಕೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದರು.
ಜಗದೀಶ್ ಶೆಟ್ಟರ್ ಪ್ರಸ್ತಾವನೆಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವ ವೈಷ್ಣವ್ ಅವರು, ಹೊಸ ರೈಲು ಮಾರ್ಗದ ಕಾರ್ಯಸಾಧ್ಯತೆ, ಸಂಭಾವ್ಯ ಪ್ರಗತಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.
ಪ್ರವಾಸಿ ತಾಣವಾಗಿ ಮಾಡಲು ಸೂಕ್ತ ಸ್ಥಳವಿದು
ಈ ಸವದತ್ತಿ ಯಲ್ಲಮ್ಮನ ಗುಡ್ಡದ ವ್ಯಾಪ್ತಿಯಲ್ಲಿ ಸಾಕಷ್ಟು ಸ್ಥಳಾವಕಾಶ ಇದೆ. ದೇವಸ್ಥಾನವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಜೊತೆಗೆ ಪ್ರವಾಸಿ ತಾಣವನ್ನಾಗಿ ಮಾಡುವ ಎಲ್ಲ ಸಂಪನ್ಮೂಲವು ಇಲ್ಲಿದೆ. ಸೂಕ್ತ ರೀತಿಯಲ್ಲಿ ಈ ಸ್ಥಳವನ್ನು ಅಭಿವೃದ್ಧಿ ಪಡಿಸಿದಲ್ಲಿ, ಈ ಭಾಗದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಾಗುತ್ತವೆ. ದೇವಸ್ಥಾನ ಸಮೀಪವೇ ಧಾರ್ಮಿಕ ಐತಿಹ್ಯದ ಪರಶುಗಡ ಸ್ಥಳವಿದೆ. ಕೆಲವೇ ಅಂತರದಲ್ಲಿ ಗೋಕಾಕ್ ಜೋಗ ಜಲಪಾತ, ನವಿಲುತೀರ್ಥ ದಂತಹ ಪ್ರಮುಖ ಪ್ರವಾಸಿ ಸ್ಥಳಗಳು ಇವೆ. ಇವು ಸಹ ಇನ್ನಷ್ಟು ಅಭಿವೃದ್ಧಿಗೊಳ್ಳುತ್ತವೆ.
ಸದ್ಯ ಬಹುಕಾಲದ ಬೇಡಿಕೆ ಈಡೇರುವ ಕಾಲ ಸನಿಹವಾಗಿದ್ದು, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಗುಡ್ ನ್ಯೂಸ್ ದೊರೆಯಲಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications